ಹೈದರಾಬಾದ್​:ಇತ್ತೀಚಿಗೆ ನಟ ಪವನ್​ ಕಲ್ಯಾಣ ಅಭಿನಯದ ಹರಿಹರ ವೀರ ಮಲ್ಲು ಚಿತ್ರದ ಶೂಟಿಂಗ್​ ಸೆಟ್​ಗೆ ಬೆಂಕಿ ಬಿದ್ದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಇದೀಗ ಅದೇ ರೀತಿಯ ಅಹಿತಕರ ಘಟನೆಯೊಂದು ಟಾಲಿವುಡ್​ನಲ್ಲಿ ನಡೆದಿದೆ.
ಅಲ್ಲು ಅರ್ಜುನ್​ ನಟನೆಯ ಪುಷ್ಟ-2 ದಿ ರೂಲ್ ಚಿತ್ರ ತಂಡದ ಸದಸ್ಯರನ್ನು ಹೊತ್ತು ಸಾಗುತ್ತಿದ್ದ ಬಸ್​ ಅಪಘಾತಕ್ಕೀಡಾಗಿರುವ ಘಟನೆ ತೆಲಂಗಾಣದ ನಲ್ಗೊಂಡದ ನಾರ್ಕೆಟ್‌ಪಲ್ಲಿಯಲ್ಲಿ ನಡೆದಿದೆ.
ಇದನ್ನೂ ಓದಿ:ರಾಷ್ಟ್ರಮಟ್ಟದ ವಾಲಿಬಾಲ್​ ಆಟಗಾರ್ತಿ ಹೃದಯಾಘಾತದಿಂದ ನಿಧನ
ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಯಾಗಿದೆ.
ಘಟನೆಯ ಕುರಿತು ಚಿತ್ರದ ನಿರ್ಮಾಪಕರು ಹಾಗೂ ತಂಡದ ಸದಸ್ಯರು ಯಾವುದೇ ಪ್ರೆತಿಕ್ರಿಯೆಯನ್ನು ನೀಡಿಲ್ಲ. ಈ ಕುರಿತು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
