ತುಮಕೂರು:ಇಷ್ಟುದಿನ ಕರೊನಾ ಶಂಕಿತ ವ್ಯಕ್ತಿಗಳನ್ನು ಮತ್ತು ಹೊರ ರಾಜ್ಯದಿಂದ ಬಂದವರನ್ನು ಕ್ವಾರಂಟೈನ್​ಗೆ ಒಳಪಡಿಸಲಾಗುತ್ತಿತ್ತು. ಇದೀಗ ಕುರಿಗಳಿಗೂ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.
ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದಲ್ಲಿ 40 ಕುರಿಗಳನ್ನು ಒಂದೆಡೆ ಕೂಡಿ ಹಾಕಲಾಗಿದೆ. ಕುರಿಗಳಿಗೆ ಮೇಯಲು ಹೊರಗಡೆ ಬಿಡುತ್ತಿಲ್ಲ. ಕಾರಣ ಗೋಡೆಕೆರೆಯ ಕುರಿಗಾಹಿಗೆ ಕರೊನಾ ಸೋಂಕು ತಗುಲಿದೆ. ಹಾಗಾಗಿ ಆತ ಮೇಯಿಸುತ್ತಿದ್ದ 40 ಕುರಿಗಳನ್ನು ಒಂದೆಡೆ ಕೂಡಿ ಹಾಕಲಾಗಿದೆ. ಕುರಿಗಳ ಗಂಟಲುದ್ರವ ಸಂಗ್ರಹಿಸಿ ಪರೀಕ್ಷೆಗಾಗಿ ಭೂಪಾಲ್ ‌ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೋಮವಾರ ತಿಳಿಸಿದರು.
ಇದನ್ನೂ ಓದಿರಿಜನರೇ ಎಚ್ಚರ! ಕರೊನಾ ಟೆಸ್ಟ್ ಮಾಡದಂತೆ ಮೇಲಿಂದ ಆರ್ಡರ್​ ಆಗಿದೆ
ಕುರಿಗಳಿಗೆ ಸೋಂಕು ತಗುಲುತ್ತದೆ ಎಂಬ ಮಾಹಿತಿ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಕುರಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ವರದಿ ಬರುವವರೆಗೆ ಈ ಕುರಿಗಳನ್ನು ಒಂದೆಡೆ ಕೂಡಿ ಹಾಕಿ ನಿಗಾವಹಿಸಲಾಗುವುದು ಎಂದು ಸಚಿವರು ವಿವರಿಸಿದರು.
ಚಿಕ್ಕನಾಯಕನಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಜನರು ಕುರಿಮಾಂಸ ಸೇವಿಸುವ ಮುನ್ನ ಪರೀಕ್ಷಿಸಿಕೊಳ್ಳಬೇಕು. ನಂತರ ಅದನ್ನು ಬಳಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿರಿಗರ್ಭಿಣಿಗೆ ಕರೊನಾ ಇಲ್ಲದಿದ್ದರೂ ಇದೆ ಅಂದ್ರು… 6 ದಿನದ ಹಸುಗೂಸನ್ನೇ ಬಲಿ ಪಡೆದ್ರು!
ಸಾಮಾನ್ಯವಾಗಿ ಕುರಿಗಳ ಮೂಲಕ ಕರೊನಾ ಸೋಂಕು ಹರಡುವುದಿಲ್ಲ ಎಂಬ ವಿಶ್ವಾಸವಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕುರಿಗಳ ಸ್ವ್ಯಾಬ್ ಸ್ಯಾಂಪಲ್​​ಗಳ ವರದಿ ಬಂದ ನಂತರವೇ ಕುರಿಗಳನ್ನು ಮೇಯಲು ಗುಂಪಿನಲ್ಲಿ ಬಿಡಬೇಕೇ, ಬೇಡವೇ ಎಂಬುದನ್ನು ನಿರ್ಧರಿಸಲಾಗುವುದು ಎಂದರು.
https://www.vijayavani.net/cheating-by-husband-to-wife-the-womans-struggle-for-justice/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
