ಮುಂಬೈ:ಅಪಘಾತದ ಬೆನ್ನಲ್ಲೇ ಲಕ್ಷುರಿ ಬಸ್ ಒಂದು​​ ಹೊತ್ತಿ ಉರಿದ ಪರಿಣಾಮ ಸ್ಥಳದಲ್ಲೇ 11 ಮಂದಿ ದುರಂತ ಸಾವಿಗೀಡಾಗಿದ್ದು, 38 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಇಂದು (ಅ.08) ಬೆಳಗ್ಗೆ ಮಹಾರಾಷ್ಟ್ರದ ನಾಶಿಕ್​ನಲ್ಲಿ ನಡೆದಿದೆ.
ಇಂದು ಬೆಳಗ್ಗೆ 5.15ರ ಸುಮಾರಿಗೆ ನಾಶಿಕ್​- ಔರಂಗಬಾದ್​ ಹೆದ್ದಾರಿಯಲ್ಲಿ ಟ್ರಕ್​ ಒಂದಕ್ಕೆ ಡಿಕ್ಕಿಯಾದ ಬೆನ್ನಲ್ಲೇ ಬಸ್ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆ ಹಾಗೂ ದಟ್ಟ ಹೊಗೆಯಿಂದಾಗಿ 11 ಮಂದಿ ದಾರುಣಾವಾಗಿ ಮೃತಪಟ್ಟಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ನಾಶಿಕ್​ ಜಿಲ್ಲೆಯ ಉಪ ಪೊಲೀಸ್​ ಆಯುಕ್ತ ಅಮೊಲ್​ ತಾಂಬೆ ತಿಳಿಸಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಬೆಂಕಿ ತಗಲುವುದಕ್ಕೆ ನಿಖರ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ತಾಂಬೆ ಹೇಳಿದರು.
ಘಟನೆ ಬಗ್ಗೆ ಮಾತನಾಡಿರುವ ನಾಶಿಕ್​ ಜಿಲ್ಲಾ ಉಸ್ತುವಾರಿ ಸಚಿವ ದಾದಾ ಭೂಸೆ, ನಾಸಿಕ್‌ನಿಂದ ಪುಣೆಗೆ ತೆರಳುತ್ತಿದ್ದ ಟ್ರಕ್‌ಗೆ ಯವತ್ಮಾಲ್‌ನಿಂದ ಮುಂಬೈಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ 11 ಮಂದಿ ಮೃತಪಟ್ಟಿದ್ದು, 21ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.
ಕರುಣಾಜನಕ ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಮಹಾರಾಷ್ಟ್ರ ಸಿಎಂ ಏಕನಾಥ್​ ಸಿಂಧೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.(ಏಜೆನ್ಸೀಸ್​)
ಪಾಕ್​ ಮಾರ್ಗವಾಗಿ ಭಾರತಕ್ಕೆ ಬರ್ತಿದ್ದ 1200 ಕೋಟಿ ರೂ. ಮೌಲ್ಯದ ಹೆರಾಯಿನ್​ ಸೀಜ್! 6 ಇರಾನ್​​ ಪ್ರಜೆಗಳ ಬಂಧನ

ಭಾರತ್​ ಜೋಡೋ ಯಾತ್ರೆಯಲ್ಲಿ ರಾಹುಲ್​ ಜತೆ ಹೆಜ್ಜೆ ಹಾಕಿದ ಜೆಡಿಎಸ್​ ಉಚ್ಛಾಟಿತ ಶಾಸಕ: ಕಾಂಗ್ರೆಸ್​ ಸೇರ್ಪಡೆ ಖಚಿತ

ಮೀಸಲು ಪ್ರಮಾಣ ಹೆಚ್ಚಳದ ತಳಮಳ: ಶೇ.50 ಮೀಸಲಾತಿ ಗಡಿ ಮೀರುವ ಆತಂಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
