ಹೈದರಾಬಾದ್​:ಟಿಂಬರ್ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಗಢದಲ್ಲಿ 11 ಮಂದಿ ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಸಿಕಂದರಬಾದ್​ನ ಭೋಯಿಗುಡಾ ಪ್ರದೇಶದಲ್ಲಿ ನಡೆದಿದೆ.
ಧಗಧಗನೇ ಉರಿಯುತ್ತಿರುವ ಬೆಂಕಿಯ ಜ್ವಾಲೆಯನ್ನು ನಂದಿಸಲು ಸ್ಥಳದಲ್ಲಿ ಅನೇಕ ಅಗ್ನಿಶಾಮಕ ವಾಹನಗಳು ಬೀಡುಬಿಟ್ಟಿದ್ದು, ಬೆಂಕಿಯ ಜ್ವಾಲೆ ತಹಬದಿಗೆ ಬಂದಿರುವುದಾಗಿ ತಿಳಿದುಬಂದಿದೆ.
ಪೊಲೀಸ್​ ಮೂಲಗಳ ಪ್ರಕಾರ ಸಿಕಂದರಬಾದ್​ನ ಜನನಿಬಿಡ ಭೋಯಿಗುಡಾ ಗೋದಾಮಿನಲ್ಲಿ ಬಿಹಾರದ 12 ವಲಸೆ ಕಾರ್ಮಿಕರು ಸಿಲುಕಿದ್ದರು. ಎರಡು ಅಂತಸ್ತಿನ ಕಟ್ಟಡದಲ್ಲಿ ಮೊದಲನೇ ಮಹಡಿಯಿಂದ ಜಿಗಿಯುವ ಮೂಲಕ ಓರ್ವ ಕಾರ್ಮಿಕ ಬಚಾವ್​ ಆಗಿದ್ದು, ಉಳಿದ 11 ಮಂದಿ ಸಜೀವ ದಹನವಾಗಿದ್ದಾರೆ.
ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯಲ್ಲಿ ಮೃತಪಟ್ಟ ಕಾರ್ಮಿಕರ ಕೊನೆಯ ಅವಶೇಷಗಳನ್ನು ಬಿಹಾರಕ್ಕೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.(ಏಜೆನ್ಸೀಸ್​)
41ರ ಉದ್ಯಮಿ ಪತಿಯ ಕೊಲೆಗೆ 26ರ ಪತ್ನಿಯಿಂದಲೇ ಸುಪಾರಿ: ಪೊಲೀಸ್​ ತನಿಖೆಯಲ್ಲಿ ಸ್ಫೋಟಕ ರಹಸ್ಯ ಬಯಲು

ಯಾರೂ ಹೇಳದ ರಹಸ್ಯವೊಂದನ್ನು ಬಹಿರಂಗಪಡಿಸಿದ ನಟಿ ಹೆಬ್ಬಾ ಪಟೇಲ್​ಗೆ ಅಭಿಮಾನಿಗಳ ಬಹುಪರಾಕ್​!​

ಗ್ರಾಹಕರಿಗೆ ಮತ್ತೆ ಶಾಕ್​: ಎರಡನೇ ದಿನವು ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ ಏರಿಕೆ, ಇಂದಿನ ದರ ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 12 =
Remember me
