ತಿರುವನಂತಪುರ:ಇನ್​ಸ್ಟಾಗ್ರಾಂನಲ್ಲಿ ಕಾಲೇಜು ವಿದ್ಯಾರ್ಥಿಯರನ್ನು ಪರಿಚಯ ಮಾಡಿಕೊಂಡು ಪ್ರೀತಿಯ ಹೆಸರಲ್ಲಿ ಪುಸಲಾಯಿಸಿ, ಲಾಡ್ಜ್​ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿಯನ್ನು ಕೇರಳದ ಥಂಪನೂರ್​ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವಿನೀತ್​ (25) ಎಂದು ಗುರುತಿಸಲಾಗಿದೆ. ಈತ ಪ್ರಖ್ಯಾತ ಕೀಝಪೆರೂರ್​ ಕೃಷ್ಣ ದೇವಸ್ಥಾನದ ಸಮೀಪದ ಚಿರಾಯಿಂಕೀಜುವಿನ ವೆಲ್ಲಾಲೂರಿನ ನಿವಾಸಿ. ಕಳೆದ ತಿಂಗಳು ಪರವೂರಿನ ವಿದ್ಯಾರ್ಥಿನಿಯೊಬ್ಬಳನ್ನು ಥಂಪನೂರಿನ ಲಾಡ್ಜ್‌ಗೆ ಕರೆತಂದು ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ವಿನೀತ್​, ಇನ್​ಸ್ಟಾಗ್ರಾನಲ್ಲಿ ತನ್ನನ್ನು ಫಾಲೋ ಮಾಡುವ ಹಾಗೂ ತಾನು ಫಾಲೋ ಮಾಡುವ ವಿದ್ಯಾರ್ಥಿನಿಯರನ್ನು ಪರಿಚಯ ಮಾಡಿಕೊಂಡು, ಫೇಸ್‌ಬುಕ್, ವಾಟ್ಸಾಪ್ ಸಂಪರ್ಕ ಬೆಳೆಸಿ, ಸ್ನೇಹ ಸಾಧಿಸುತ್ತಿದ್ದ. ಹೊಸ ಕಾರು ಖರೀದಿ ಮಾಡಿದ್ದೇನೆ. ಒಂದು ಡ್ರೈವ್​ ಹೋಗೋಣ ನನಗೆ ಕಂಪನಿ ಕೊಡಿ ಎಂದು ಆಹ್ವಾನಿಸುತ್ತಿದ್ದ.
ಆತನ ಆಹ್ವಾನವನ್ನು ನಂಬಿ ಆತನೊಂದಿಗೆ ಬರುತ್ತಿದ್ದ ವಿದ್ಯಾರ್ಥಿನಿಯರನ್ನು ತಿರುವನಂತಪುರದಲ್ಲಿರುವ ಲಾಡ್ಜ್​ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸುಗುತ್ತಿದ್ದ. ವಿದ್ಯಾರ್ಥಿನಿಯೊಬ್ಬಳು ನಡೆದ ಘಟನೆಯನ್ನು ತನ್ನ ಸ್ನೇಹಿತೆಯೊಬ್ಬಳಿಗೆ ಹೇಳಿದ ಬಳಿಕ ಆಕೆ ದೂರು ದಾಖಲಿಸಿದಳು. ತಕ್ಷಣ ತನಿಖೆ ಆರಂಭಿಸಿದ ಪೊಲೀಸರು ವಿನೀತ್​ನನ್ನು ಬಂಧಿಸಿ, ಆತನ ಮೊಬೈಲ್​ ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಸಹಾಯಕ ಕಮಿಷನರ್ ಶಾಜಿ ನೇತೃತ್ವದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್, ಸಬ್ ಇನ್ಸ್‌ಪೆಕ್ಟರ್ ಸುಬಿನ್, ಎಎಸ್‌ಐ ಗೋಪಕುಮಾರ್ ಮತ್ತು ಪೊಲೀಸರಾದ ಸಾಜು, ಅಜಯಕುಮಾರ್, ಸುನೀಲ್ ಮತ್ತು ಅನಿಲ್ ಅವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.(ಏಜೆನ್ಸೀಸ್​)
ಬಿಗ್​ಬಾಸ್​ ಮನೆಗೆ ಸೋನು ಶ್ರೀನಿವಾಸ್​ ಗೌಡ ಎಂಟ್ರಿ ಬೆನ್ನಲ್ಲೇ ಜಾಲತಾಣದಲ್ಲಿ ಅಲ್ಲೋಲ-ಕಲ್ಲೋಲ

VIDEO| ಪೊಲೀಸ್​ ಠಾಣೆಗೆ ನುಗ್ಗಿ ಪೇದೆಗೆ ಥಳಿಸಿದ ಗುಂಪು: ವಿಡಿಯೋ ಮಾಡುವುದರಲ್ಲಿ ಬಿಜಿಯಾದ ಜನರು!

ಉದ್ದ ತೋಳಿನ ಶರ್ಟ್ ಧರಿಸಿ ಬಂದ ಪರೀಕ್ಷಾರ್ಥಿಗಳಿಗೆ ಕೆಪಿಟಿಸಿಎಲ್ ನೀಡಿತು ಶಾಕ್​! ಬಟ್ಟೆ ಕಟ್​ ಕಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 13 =
Remember me
