ಲಖನೌ:ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್​ ಟ್ರಾಲಿಯು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದ ಪರಿಣಾಮ 26 ಯಾತ್ರಿಕರು ದುರಂತ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ್​ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟ್ರ್ಯಾಕ್ಟರ್​ನಲ್ಲಿ ಒಟ್ಟು 50 ಮಂದಿ ಪ್ರಯಾಣಿಸುತ್ತಿದ್ದರು. ಉನ್ನಾವೋದಲ್ಲಿರುವ ಚಂದ್ರಿಕಾ ದೇವಿ ದೇವಸ್ಥಾನದಿಂದ ವಾಪಸ್​ ಬರುವಾಗ ಕಾನ್ಪುರದ ಘಟಾಂಪುರ್​ ಪ್ರದೇಶದ ಬಳಿ ದುರಂತ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ಸಾವಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ನೀಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸಹ ಸಾವಿಗೆ ಸಂತಾಪ ಸೂಚಿಸಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Distressed by the tractor-trolley mishap in Kanpur. My thoughts are with all those who have lost their near and dear ones. Prayers with the injured. The local administration is providing all possible assistance to the affected: PM@narendramodi
— PMO India (@PMOIndia)October 1, 2022

ಘಟನೆಯ ಬೆನ್ನಲ್ಲೇ ಪ್ರಯಾಣಕ್ಕೆ ಟ್ರ್ಯಾಕ್ಟರ್ ಟ್ರಾಲಿಯನ್ನು ಬಳಸದಂತೆ ಸಿಎಂ ಯೋಗಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೃಷಿ ಕೆಲಸಗಳಿಗೆ ಮತ್ತು ಸರಕುಗಳನ್ನು ವರ್ಗಾಯಿಸಲು ಮಾತ್ರ ಟ್ರ್ಯಾಕ್ಟರ್-ಟ್ರಾಲಿ ಬಳಸಬೇಕು ಎಂದು ಅವರು ಒತ್ತಾಯಿಸಿದರು. ಯೋಗಿ ಅವರೇ ರಕ್ಷಣಾ ಕಾರ್ಯಾಚರಣೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಸರ್ಕಾರದ ವಕ್ತಾರರೊಬ್ಬರು ತಿಳಿಸಿದ್ದಾರೆ.(ಏಜೆನ್ಸೀಸ್​)
ಪಂದ್ಯ ಸೋತಿದ್ದಕ್ಕೆ ಹತಾಶೆಯಿಂದ ಮೈದಾನಕ್ಕೆ ನುಗ್ಗಿದ ಫ್ಯಾನ್ಸ್​: ಕಾಲ್ತುಳಿತದಿಂದ 127 ಮಂದಿ ದುರ್ಮರಣ

ಗಾಂಧಿ ಜಯಂತಿ‌ ಹಿನ್ನಲೆ ಇಂದಿನ ಜೋಡೋ ಯಾತ್ರೆಯ ಬೆಳಗಿನ ಪಾದಯಾತ್ರೆಗೆ ರಾಹುಲ್​ ಗಾಂಧಿ ಬ್ರೇಕ್​

ಮಾನವೀಯತೆಯ ಸಂದೇಶಕ್ಕೆ ದ್ವಂದ್ವಾರ್ಥದ ಬೇಲಿ: ವಿಜಯವಾಣಿ ಸಿನಿಮಾ ವಿಮರ್ಶೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 10 =
Remember me
