ಲಖನೌ:ವೇಗವಾಗಿ ಬಂದ ಟ್ರಕ್​ ಒಂದು ಕನ್ವಾರ್​ ಯಾತ್ರಿಗಳಿದ್ದ ಗುಂಪಿನ ಕಡೆ ನುಗ್ಗಿದ ಪರಿಣಾಮ ಸ್ಥಳದಲ್ಲೇ 6 ಮಂದಿ ದುರಂತ ಸಾವಿಗೀಡಾಗಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್​ ಜಿಲ್ಲೆಯ ಬಧಾರ್​ ಗ್ರಾಮದ ಬಳಿಯಿರುವ ಹತ್ರಾಸ್​-ಆಗ್ರಾ ರಸ್ತೆಯಲ್ಲಿ ಶನಿವಾರ ನಡೆದಿದೆ.
ಕನ್ವಾರ್​ ಯಾತ್ರಿಗಳೆಲ್ಲರೂ ಮಧ್ಯಪ್ರದೇಶದ ಗ್ವಾಲಿಯರ್​ ಮೂಲದವರು. ಈ ಘಟನೆ ಶನಿವಾರ ತಡರಾತ್ರಿ 2.15 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗಿ. ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗೆ ಆಗ್ರಾ ಮೆಡಿಕಲ್​ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕನ್ವಾರ್​ ಯಾತ್ರೆಯನ್ನು ಮುಗಿಸಿದ ಒಂದು ಗುಂಪು ಹರಿದ್ವಾರದಿಂದ ಗ್ವಾಲಿಯರ್​ಗೆ ಮರಳುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ಆಗ್ರಾ ವಲಯದ ಎಡಿಜಿ ರಾಜೀವ್​ ಕೃಷ್ಣ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿರುವ ಸಾದಾಬಾದ್​ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಟ್ರಕ್​ ಚಾಲಕನ ಬಗ್ಗೆ ನಮಗೆ ಮಾಹಿತಿ ದೊರೆತಿದ್ದು, ಶೀಘ್ರವೇ ಆತನನ್ನು ಬಂಧಿಸಲಾಗುವುದು ಎಂದು ರಾಜೀವ್​ ಕೃಷ್ಣ ಭರವಸೆ ನೀಡಿದ್ದಾರೆ.(ಏಜೆನ್ಸೀಸ್​)
ಬೆತ್ತಲಾಗಲು ಓಕೆ ಎಂದಿದ್ದಳು ಎಂದ ಹಾಸ್ಯ ನಟನಿಗೆ ನಡುರಸ್ತೆಯಲ್ಲೇ ನಟಿ ರೇಖಾ ಹಿಗ್ಗಾಮುಗ್ಗಾ ತರಾಟೆ

ಇಡಿ ಅಧಿಕಾರಿಗಳ ಮಹಾ ಬೇಟೆ: ಸಚಿವರ ಆಪ್ತಳ ಮನೆಯಲ್ಲಿ 20 ಕೋಟಿ ರೂ. ನಗದು ಪತ್ತೆ!

ಮತ್ತೆ ಗೂಡು ಸೇರಿದ ಕಾಣೆಯಾಗಿದ್ದ ಗಿಣಿ! ಕೊಟ್ಟ ಮಾತಂತೆ 85 ಸಾವಿರ ರೂ. ಬಹುಮಾನ ನೀಡಿದ ಕುಟುಂಬ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 11 =
Remember me
