ನವದೆಹಲಿ:ಪರಕೀಯರ ಕಪಿಮುಷ್ಠಿಯಲ್ಲಿದ್ದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 75 ವರ್ಷಗಳಾಗಿದ್ದು, ರಾಷ್ಟ್ರಾದ್ಯಂತ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್​ ಮೂಲಕ ದೇಶದ ಜನರಿಗೆ ಶುಭಕೋರಿದ್ದಾರೆ.
ಎಲ್ಲರಿಗೂ 75ನೇ ಸ್ವಾತಂತ್ರ್ಯ ದಿನದ ಶುಭಾಶಯಗಳು ಎಂದಿರುವ ಪ್ರಧಾನಿ ಮೋದಿ, ಈ ವರ್ಷ ಅಮೃತ ಹಬ್ಬದ ಸ್ವಾತಂತ್ರ್ಯೋತ್ಸವವು ದೇಶದ ಜನರಲ್ಲಿ ಹೊಸ ಶಕ್ತಿ ಮತ್ತು ನವಚೈತನ್ಯವನ್ನು ತುಂಬಲಿ ಎಂದು ಶುಭ ಹಾರೈಸಿದ್ದಾರೆ.
Greetings to you all on Independence Day.
आप सभी को 75वें स्वतंत्रता दिवस की बहुत-बहुत बधाई। आजादी के अमृत महोत्सव का यह वर्ष देशवासियों में नई ऊर्जा और नवचेतना का संचार करे।
जय हिंद!#IndiaIndependenceDay
— Narendra Modi (@narendramodi)August 15, 2021

75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದು ಅವರ ಸತತ ಎಂಟನೇ ಸ್ವಾತಂತ್ರ್ಯೋತ್ಸವದ ಭಾಷಣವಾಗಿದೆ. ಮೋದಿ ಅವರು ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ಬಳಿಕ ಇಂದು ಬೆಳಿಗ್ಗೆ 7.30ರ ಸುಮಾರಿಗೆ ಭಾಷಣ ಆರಂಭಿಸಲಿದ್ದಾರೆ.
ಪ್ರಧಾನಿ ಮೋದಿಯವರ ಭಾಷಣವನ್ನು ರಾಷ್ಟ್ರೀಯ ಸಾರ್ವಜನಿಕ ಪ್ರಸಾರಕ ದೂರದರ್ಶನ ನೇರಪ್ರಸಾರ ಮಾಡಲಿದ್ದು, ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಕೂಡ ತನ್ನ ಯೂಟ್ಯೂಬ್ ಚಾನೆಲ್​ನಲ್ಲಿ ಹಾಗೂ ಅದರ ಟ್ವಿಟರ್ ಹ್ಯಾಂಡಲ್ ನಲ್ಲಿ ಭಾಷಣವನ್ನು ನೇರ ಪ್ರಸಾರ ಮಾಡಲಿದೆ. ಪ್ರಧಾನ ಮಂತ್ರಿ ಕಚೇರಿಯ (ಪಿಎಂಒ) ಅಧಿಕೃತ ಯೂಟ್ಯೂಬ್ ಚಾನೆಲ್ ಕೂಡ ಪ್ರಧಾನಿ ಭಾಷಣವನ್ನು ಪ್ರಸಾರ ಮಾಡಲಿದೆ.(ಏಜೆನ್ಸೀಸ್​)
ಶತಮಾನದ ಭಾರತಕ್ಕೆ ಅಮೃತವೇ ಅಡಿಪಾಯ; ಸ್ವಾತಂತ್ರ್ಯ-75ರಿಂದಲೇ ಆರಂಭವಾಗಬೇಕು ಚಿಂತನೆ

ಅಂತರಿಕ್ಷಕ್ಕೆ ಮಾನವಯಾನ ನಡೆಸುವ 4ನೇ ರಾಷ್ಟ್ರವಾಗಲಿದೆ, ಭಾರತ : ರಾಷ್ಟ್ರಪತಿ ಕೋವಿಂದ್​

VIDEO | ಟೀಮ್ ಇಂಡಿಯಾ ಜೆರ್ಸಿ ಧರಿಸಿ ಲಾರ್ಡ್ಸ್ ಮೈದಾನಕ್ಕೆ ನುಗ್ಗಿದ ಇಂಗ್ಲೆಂಡ್ ಪ್ರೇಕ್ಷಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 10 =
Remember me
