ತಿರುವನಂತಪುರಂ:ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆಯ ಮೇಲೆ ಮೊಬೈಲ್​ ಕಳ್ಳತನದ ಸುಳ್ಳು ಆರೋಪ ಹೊರಿಸಿ, ಸಾರ್ವಜನಿಕರ ಎದುರಲ್ಲಿ ಅವಮಾನಿಸಿದ ಮಹಿಳಾ ಪೊಲೀಸ್​ ಅಧಿಕಾರಿ ವಿರುದ್ಧ ಬಾಲಕಿ ಕೇರಳ ಹೈಕೋರ್ಟ್​ ಮೆಟ್ಟಿಲೇರಿದ್ದು, 50 ಲಕ್ಷ ರೂ. ಪರಿಹಾರ ಕೊಡಲು ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾಳೆ.
ಹಿರಿಯ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಕೂಡ ಮಹಿಳಾ ಪೊಲೀಸ್​ ಮೇಲೆ ಯಾವುದೇ ಸೂಕ್ತ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ನ್ಯಾಯಕ್ಕಾಗಿ ನ್ಯಾಯಾಲಯದ ಬಾಗಿಲಿಗೆ ಬಂದಿದ್ದೇವೆ. ಸಾರ್ವಜನಿಕರ ಎದುರು ಅವಮಾನಿಸಿದ ಆಘಾತದಿಂದ ಖಿನ್ನತೆಗೆ ಜಾರಿ ಆಪ್ತ ಸಮಾಲೋಚನೆಯನ್ನು ಪಡೆದಿದ್ದೇನೆ. ಈಗಲೂ ಮಹಿಳಾ ಅಧಿಕಾರಿಯ ಚುಚ್ಚು ಮಾತುಗಳು ತೀವ್ರ ನೋವುಂಟು ಮಾಡುತ್ತಿದೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಬಾಲಕಿ ಬರೆದಿದ್ದಾಳೆ.
ಅಂದಹಾಗೆ ಆಗಸ್ಟ್​ 27ರಂದು ನಡೆದ ಘಟನೆ ಇದಾಗಿದೆ. 38 ವರ್ಷದ ಜಯಚಂದ್ರನ್, ತನ್ನ ಮಗಳೊಂದಿಗೆ ಇಸ್ರೋ ಘಟಕಕ್ಕೆ ಉಪಕರಣಗಳನ್ನು ಸಾಗಿಸುವ ಬೃಹತ್ ಟ್ರೈಲರ್‌ನ ಚಲನೆಯನ್ನು ವೀಕ್ಷಿಸಲು ಇಲ್ಲಿನ ಅಟ್ಟಿಂಗಲ್ ಬಳಿಯ ಹೊರವಲಯದಲ್ಲಿರುವ ಮುಖ್ಯ ರಸ್ತೆಗೆ ಹೋಗಿದ್ದರು. ಈ ವೇಳೆ ತಮ್ಮ ಮೊಬೈಲ್​ ಕಳೆದುಹೋಗಿದೆ ಎಂದು ದಿಢೀರನೇ ಬಂದ ಮಹಿಳಾ ಪೊಲೀಸ್​ ಅಧಿಕಾರಿ ರೆಜಿತಾ, ಜಯಚಂದ್ರನ್​ ಅವರ ತಪಾಸಣೆ ನಡೆಸಿದರು. ಏಕೆಂದರೆ ಮೊಬೈಲ್​ ಕಳೆದು ಹೋಗುವ ಮುನ್ನ ರೆಜಿತಾ ಅವರಿದ್ದ ಗಸ್ತುವಾಹನ ಪಕ್ಕದಲ್ಲೇ ಜಯಚಂದ್ರನ್​ ಇದ್ದಿದ್ದರಿಂದ ಅವರ ಮೇಲೆ ಅನುಮಾನ ಮೂಡಿತ್ತು. ಮೊಬೈಲ್​ ಕದ್ದಿರುವುದು ಇವರೇ ಎಂದು ಭಾವಿಸಿದ ರೆಜಿತಾ, ಸಾರ್ವಜನಿಕರ ಎದುರಲ್ಲೇ ಬಾಲಕಿ ಮತ್ತು ಆಕೆಯ ತಂದೆಗೆ ಕೆಟ್ಟ ಪದಗಳಿಂದ ಅವಮಾನಿಸಿದರು. ಹತ್ತಿರದ ಪೊಲೀಸ್​ ಠಾಣೆಗೆ ಕರೆದೊಯ್ಯುವುದಾಗಿ ಬೆದರಿಕೆ ಹಾಕಿದರು. ಇದರಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದರು.
ಇದಾದ ಬಳಿಕ ರೆಜಿತಾ ಅವರ ಮೊಬೈಲ್​ ಪೊಲೀಸ್​ ವಾಹನದಲ್ಲೇ ಪತ್ತೆಯಾಯಿತು. ಇದಿಷ್ಟು ಘಟನೆಯನ್ನು ದಾರಿಹೋಕರೊಬ್ಬರು ವಿಡಿಯೋ ರೆಕಾರ್ಡ್​ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ವಿಡಿಯೋ ವೈರಲ್​ ಸಹ ಆಗಿದೆ.
ಇದಾದ ಬಳಿಕ ತಮಗಾದ ಅವಮಾನಕ್ಕೆ ನ್ಯಾಯ ಕೇಳಬೇಕೆಂದು ಆಗಸ್ಟ್​ 31ರಂದು ಪೊಲೀಸ್​ ಮುಖ್ಯಸ್ಥ ಅನಿಲ್​ ಕಾಂತ್​ ಬಳಿ ತೆರಳಿ ಮಹಿಳಾ ಪೊಲೀಸ್​ ಅಧಿಕಾರಿ ರೆಜಿತಾ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಜಯಚಂದ್ರನ್​ ದೂರು ನೀಡಿದ್ದಾರೆ. ಸಾರ್ವಜನಿಕವಾಗಿ ನನ್ನ ಮಗಳನ್ನು ಅವಮಾನಿಸಿದ್ದರಿಂದ ಅವಳ ಆಘಾತದಿಂದ ಖಿನ್ನತೆಗೆ ಜಾರಿದ್ದಾಳೆ ಎಂದು ಜಯಚಂದ್ರನ್​ ದೂರು ನೀಡುತ್ತಾರೆ. ಸೂಕ್ರ ಕ್ರಮ ತೆಗೆದುಕೊಳ್ಳುವುದಾಗಿ ಅನಿಲ್​ ಕಾಂತ್​ ಭರವಸೆ ನೀಡುತ್ತಾರೆ. ಅಲ್ಲದೆ, ತನಿಖೆಗೆ ಆದೇಶ ನೀಡುತ್ತಾರೆ.
ಆದಾಗ್ಯೂ ರೆಜಿತಾ ವಿರುದ್ಧ ಯಾವುದೇ ಕ್ರಮವನ್ನು ತೆಗೆದುಕೊಳ್ಳದೇ ಒಳ್ಳೆಯ ಜಾಗಕ್ಕೆ ಅವರನ್ನು ವರ್ಗಾವಣೆ ಮಾಡಲಾಗುತ್ತದೆ. ಸಾಕಷ್ಟು ಮನವಿ ಮತ್ತು ದೂರುಗಳನ್ನು ನೀಡಿದರೂ ಜಯಚಂದ್ರನ್​ ಕುಟುಂಬಕ್ಕೆ ಯಾವುದೇ ಪ್ರಯೋಜನ ಆಗುವುದಿಲ್ಲ. ಕೊನೆಗೆ ನ್ಯಾಯಾಲಯ ಮೆಟ್ಟಿಲೇರಿರುವ ಕುಟುಂಬ ರೆಜಿತಾ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ. ಬಾಲಕಿಯ ಹೆಸರಿನಲ್ಲಿ ಕೋರ್ಟ್​ ಪತ್ರ ಬರೆದಿರುವ ಕುಟುಂಬ ಪರಿಹಾರಕ್ಕೆ ಆಗ್ರಹಿಸಿದೆ.(ಏಜೆನ್ಸೀಸ್​)
ಇನ್​ನಲ್ಲಿ ಲಾಕ್​ಡೌನ್ ತಾಪತ್ರಯ; ಸವಾಲಿನ ಪಾತ್ರದಲ್ಲಿ ಪಾವನಾ..

ಮಂಗಳಾದೇವಿ ಮಡಿಲಲ್ಲಿ ರಕ್ತಚರಿತೆ: ಗರುಡ ಗಮನ, ವೃಷಭ ವಾಹನ ಸಿನಿಮಾ ವಿಮರ್ಶೆ

ಡಯಲ್ 100: ಸೈಬರ್​ ಕಳ್ಳರ ಚಾಕೋಲೇಟ್ ಕಥೆ…

ಹೊಗಳಿಕೆಯೂ ಬೇಕು, ತೆಗಳಿಕೆಯೂ ಇರಬೇಕು..; ಮಗನ ಸಿನಿ ಬದುಕಿನ ಬಗ್ಗೆ ರವಿಚಂದ್ರನ್ ಮಾತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eight =
Remember me
