ಅನಂತಪುರ:ಸಬ್​ ಇನ್ಸ್​ಪೆಕ್ಟರ್​ ಪ್ರೀತಿಯ ಬಲೆಯಲ್ಲಿ ಬಿದ್ದ ಯುವತಿಯೊಬ್ಬಳು ವಂಚನೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರದಲ್ಲಿ ಶುಕ್ರವಾರ ನಡೆದಿದೆ.
ಸರಸ್ವತಿ ಮೃತ ದುರ್ದೈವಿ. ಶುಕ್ರವಾಗಿ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆರೋಪಿ ಸಬ್​ ಇನ್ಸ್​ಪೆಕ್ಟರ್​ ವಿಜಯ್​ ಕುಮಾರ್​ ನಾಯಕ್​ನನ್ನು ಶನಿವಾರ ಬಂಧಿಸಲಾಗಿದೆ. ಸರಸ್ವತಿ ತಿರುಪತಿಯ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿನಿಯಾಗಿದ್ದಳು. ಸರಸ್ವತಿ ಮತ್ತು ನಾಯಕ್​ ಇಬ್ಬರು ಅನಂತಪುರ ಜಿಲ್ಲೆಯ ಪಮಿದಿ ಗ್ರಾಮದ ನಿವಾಸಿಗಳು. ಸರಸ್ವತಿಯನ್ನು ಪರಿಚಯ ಮಾಡಿಕೊಂಡಿದ್ದ ಎಸ್​ಐ ಆಕೆಯ ಪ್ರೀತಿಯ ನಾಟಕವಾಡಿದ್ದ. ಅಲ್ಲದೆ, ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ವಂಚಿಸಿದ್ದಾರೆ.
ಪ್ರೀತಿ ವಿಚಾರ ತಿಳಿದು ಸರಸ್ವತಿ ಕುಟುಂಬದವರು ಮದುವೆಗೆ ಸಿದ್ಧತೆ ನಡೆಸಿದ್ದರು. ಆದರೆ, ನಾಯಕ್​ಗೆ ಈಗಾಗಲೇ ಬೇರೊಬ್ಬಳ ಜತೆ ಮದುವೆ ಆಗಿರುವುದು ಸರಸ್ವತಿಗೆ ತಿಳಿದಿದೆ. ಅಲ್ಲದೆ, ಪ್ರೀತಿಯ ಹೆಸರಿನಲ್ಲಿ ವಂಚಿಸುವುದೇ ಎಸ್​ಐ ಕೆಲಸ ಎಂಬ ಸತ್ಯ ಆಕೆ ಗೊತ್ತಾಗಿದೆ. ಇದರಿಂದ ಮನನೊಂದ ಸರಸ್ವತಿ ಗುರುವಾರ ವಿಷ ಕುಡಿದಿದ್ದಳು. ಅಸ್ವಸ್ಥಳಾಗಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ.
ಈ ಸಂಗತಿ ಪೊಲೀಸ್​ ವರಿಷ್ಠಾಧಿಕಾರಿ ಫಕಿರಪ್ಪ ಕಾಗಿನೆಲ್ಲಿ ಅವರ ಗಮನಕ್ಕೆ ಬಂದಿದ್ದು, ಆರೋಪಿ ಎಸ್​ಐ ನಾಯಕ್​ನನ್ನು ಬಂಧಿಸುವಂತೆ ಆದೇಶ ಹೊರಡಿಸಿದ್ದರು. ಅದರಂತೆ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್​ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.(ಏಜೆನ್ಸೀಸ್​)
ರಾಜ್ಯದ ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆ: ಕಾಂಗ್ರೆಸ್​, ಜೆಡಿಎಸ್​ ಪಾಳಯದಲ್ಲಿ ಹೆಚ್ಚಿದ ಆತಂಕ

ನಾಳೆ ಸೈಕ್ಲೋನ್ ಸೃಷ್ಟಿ? 19 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಐಪಿಎಲ್​ ವಿರುದ್ಧ ಗಂಭೀರ ಆರೋಪ ಮಾಡಿ ಅಸಮಾಧಾನ ಹೊರಹಾಕಿದ ವಿಂಡೀಸ್​ ದೈತ್ಯ ಕ್ರಿಸ್​ ಗೇಲ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 8 =
Remember me
