ಆನೇಕಲ್:ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ದಾರುಣ ಸಾವಿಗೀಡಾಗಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡು ಹೊಸೂರಿನಲ್ಲಿ ನಡೆದಿದೆ.
ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್ (21) ಮತ್ತು ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಎಂದು ಗುರುತಿಸಲಾಗಿದೆ.
ಹೈವೇಯಲ್ಲಿ ಬರುತ್ತಿದ್ದ ಇಂಡಿಕಾ ಕಾರಿಗೆ ರಾಂಗ್ ರೂಟ್​ನಲ್ಲಿ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಮೃತದೇಹಗಳನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನನಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಸಮಂತ್​ ಎಂಬ ಕಾರು ಚಾಲಕ 30 ಅಡಿ ದೂರ ಹೋಗಿ ಬಿದ್ದು ಮೃತಪಟ್ಟಿದ್ದಾರೆ.
ರಾಂಗ್ ರೂಟಲ್ಲಿ ಬಂದಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹೈವೇಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದಿದ್ದ ಸ್ಕೋಡಾ ಕಾರು ಕೃಷ್ಣಗಿರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಕಾ ಕಾರಿಗೆ ಡಿಕ್ಕಿ ಹೊಡೆದಿದೆ. ಎರಡು ಕಾರುಗಳು ಹೆದ್ದಾರಿಯಲ್ಲಿ ವೇಗವಾಗಿ ಬಂದಿದ್ದರಿಂದ ಸಂಪೂರ್ಣ ಛಿದ್ರವಾಗಿವೆ. ಎರಡು ಕಾರಿನಲ್ಲೂ ಚಾಲಕರು ಮಾತ್ರ ಪ್ರಯಾಣ ಮಾಡುತ್ತಿದ್ದರು.
ಘಟನಾ ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದುವರೆಗೂ ಕಣ್ಣು ತೆರೆಯದ ನಟ ಧರಮ್​ ತೇಜ್​ಗೆ ಏನಾಗಿದೆ? ಪವನ್​ ಕಲ್ಯಾಣ್​ ಹೇಳಿದ್ದು ಹೀಗೆ…

ಬೆಂಗ್ಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: 120 ಕಿ.ಮೀ ವೇಗದಲ್ಲಿ ಬಂದು ಗುದ್ದಿದ ಐಷಾರಾಮಿ ಕಾರು..!

ಆಯುಷ್ಮಾನ್ ಅಲೆದಾಟ: ಜಾರಿಯಾಗಿ 3 ವರ್ಷವಾದರೂ ಸಿಕ್ತಿಲ್ಲ ಸೇವೆ; ತುರ್ತು ಚಿಕಿತ್ಸೆ ಸೇರಿ ಹಲವು ಸೇವೆಗೆ ಸಮಸ್ಯೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + ten =
Remember me
