ಹೈದರಾಬಾದ್​:ತೆಲಂಗಾಣದ ಕುಮಾರಂ ಭೀಮ್​ ಆಸಿಫಬಾದ್​ ಜಿಲ್ಲೆಯಲ್ಲಿ ಬರುವ ಬುಡಕಟ್ಟು ಕಲ್ಯಾಣ ಪದವಿ ಕಾಲೇಜಿನ ಬಿಎಸ್ಸಿ ದ್ವಿತೀಯ ವರ್ಷದ ವಿದ್ಯಾರ್ಥಿನಿ ಮೃತಪಟ್ಟಿದ್ದು, ಒಂದೇ ವಾರದಲ್ಲಿ ವರದಿಯಾದ ಮೂರನೇ ಸಾವು ಇದಾಗಿದೆ.
ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಬುಧವಾರ ಕೊನೆಯುಸಿರೆಳೆದಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಲಾಗುಡ್ಯ ಸಂಗೀತಾ ಎಂದು ಗುರುತಿಸಲಾಗಿದೆ. ಸಂಗೀತಾ ಪಾಲಕರು ಪ್ರತಿಭಟನೆಗೆ ಕುಳಿತಿದ್ದು, ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪ ಮಾಡಿದ್ದಾರೆ. ಸಂಗೀತಾಗೆ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ಪಾಲಕರು ದೂರಿದ್ದಾರೆ.
ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಂಗೀತಾಳನ್ನು ಕರೀಮ್​ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಡೆಯುತ್ತಿರುವಾಗಲೇ ಆಕೆ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ದಾಖಲಿಸುವಲ್ಲಿ ಕಾಲೇಜು ಮಂಡಳಿಯವರು ವಿಳಂಬ ಮಾಡಿದ್ದು, ಇದೇ ಆಕೆಯ ಸಾವಿಗೆ ಕಾರಣ. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಪಾಲಕರು ಆಗ್ರಹಿಸಿದ್ದಾರೆ.
ಈ ಘಟನೆಯ ಬೆನ್ನಲ್ಲೇ ಬಹುಜನ ಸಮಾಜ ಪಾರ್ಟಿ ಆಸಿಫಬಾದ್​ ಪೊಲೀಸ್​ ವರಿಷ್ಠಾಧಿಕಾರಿ ಕೆ. ಸುರೇಶ್​ ಕುಮಾರ್​ಗೆ ದೂರು ನೀಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ವಿದ್ಯಾರ್ಥಿನಿಯ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಬಹುಜನ ಸಮಾಜ ಪಾರ್ಟಿ ಆಗ್ರಹಿಸಿದೆ.
ಆಗಸ್ಟ್ 24 ರಂದು ಪೆಂಚಿಕಲ್ ಪೇಟೆ ಮಂಡಲದ ಯಳ್ಳೂರು ಗ್ರಾಮದಲ್ಲಿ ಬುಡಕಟ್ಟು ಕಲ್ಯಾಣ ಇಲಾಖೆ ನಡೆಸುತ್ತಿರುವ ಹಾಸ್ಟೆಲ್‌ನ ನಿವಾಸಿ ಆಲಂ ರಾಜೇಶ್ (15) ಚಿಕಿತ್ಸೆ ಫಲಕಾರಿಯಾಗದೆ ಕಾಘಜ್‌ನಗರದಲ್ಲಿ ಮೃತಪಟ್ಟಿದ್ದರು. ಸಿರ್ಪುರ (ಟಿ) ಮಂಡಲ ಕೇಂದ್ರದ ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ಐದನೇ ತರಗತಿ ವಿದ್ಯಾರ್ಥಿನಿ ಗೋಮಾಸ ಅಶ್ವಿನಿ (10) ಆಗಸ್ಟ್ 28 ರಂದು ಕರೀಂನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾಳೆ. ಇದೀಗ ಸಂಗೀತಾ ಸಾವಿಗೀಡಾಗಿದ್ದು, ಒಂದೇ ವಾರದಲ್ಲಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವುದು ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ.(ಏಜೆನ್ಸೀಸ್​)
ವಿಮಾನ ಪತನ ಮಾಡೋದಾಗಿ ಪೈಲಟ್​ ಬೆದರಿಕೆ: ಸ್ಥಳದಲ್ಲೇ ಗಿರಕಿ ಹೊಡೆಯುತ್ತಿರುವ ವಿಮಾನ, ಹೈ ಅಲರ್ಟ್​ ಘೋಷಣೆ

ಬ್ಲ್ಯಾಕ್ ಕಾಫಿ ಕುಡಿಯುವುದರಿಂದ ನಮ್ಮ ದೇಹದ ಮೇಲೆ ಆಗುವ 10 ಚಮತ್ಕಾರಗಳು

ಕಿಡ್ನಿ ಸ್ಟೋನ್ ಇದೆ ಅಂತ ಗೊತ್ತಾಗುವುದು ಹೇಗೆ? ಅದನ್ನು ಗುಣಪಡಿಸಲು ಇರುವ ಮನೆಮದ್ದು ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − five =
Remember me
