ವಿಜಯವಾಡ:ಜಿಲ್ಲೆಗೆ ಮರುನಾಮಕಾರಣ ಮಾಡಿದ ವಿಚಾರದಲ್ಲಿ ಆಂಧ್ರ ಪ್ರದೇಶದ ಅಮಲಾಪುರಂ ಪಟ್ಟಣದಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಉದ್ರಿಕ್ತ ಪ್ರತಿಭಟನಾಕಾರರು ಸಚಿವರೊಬ್ಬರ ನಿವಾಸಕ್ಕೆ ಬೆಂಕಿ ಇಟ್ಟಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಆಡಳಿತಾರೂಢ ವೈಎಸ್​ಆರ್​ ಕಾಂಗ್ರೆಸ್​ ಪಕ್ಷ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ತೀವ್ರ ಆಕ್ರೋಶ ಹೊರಹಾಕಿವೆ.
ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ಸರ್ಕಾರ ಕೆಲವು ಪಕ್ಷಗಳು ಮತ್ತು ಸಮಾಜ ವಿರೋಧಿಗಳು ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದಿದೆ.
ಕೋನಸೀಮಾ ಜಿಲ್ಲೆಯನ್ನು ಡಾ.ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡಲು ಸಿಎಂ ಜಗನ್​ ನೇತೃತ್ವದ ಆಂಧ್ರ ಸರ್ಕಾರ ನಿರ್ಧಾರ ಮಾಡಿದೆ. ಇದನ್ನು ವಿರೋಧಿಸಿ ಅಮಲಾಪುರಂ ಪಟ್ಟಣದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಮಂಗಳವಾರ ಆಂಧ್ರಪ್ರದೇಶದ ಸಾರಿಗೆ ಸಚಿವ ಪಿನಿಪೆ ವಿಶ್ವರೂಪ್ ಮತ್ತು ಶಾಸಕ ಪಿ. ಸತೀಶ್ ಅವರ ಮನೆಗಳಿಗೆ ಸ್ಥಳೀಯರು ಬೆಂಕಿ ಹಚ್ಚಿದರು.
ಜಿಲ್ಲೆಯ ಮರುನಾಮಕರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ನಂತರ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿತು. ಲಾಠಿಚಾರ್ಜ್​ನಿಂದ ಕೆರಳಿದ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಿದರು. ಈ ವೇಳೆ ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಸದ್ಯ ಅಮಲಾಪುರಂನಲ್ಲಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಿಪಕ್ಷಗಳಾದ ತೆಲುಗು ದೇಶಂ ಪಕ್ಷ, ಬಿಜೆಪಿ, ಜನಸೇನೆ ಮತ್ತು ಕಾಂಗ್ರೆಸ್ ಅಮಲಾಪುರಂ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿವೆ.
ಅಮಲಾಪುರಂ ಘಟನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳನ್ನು ದೂಷಿಸುತ್ತಿರುವ ರಾಜ್ಯ ಗೃಹ ಸಚಿವರ ವಿರುದ್ಧ ಜನಸೇನಾ ಮುಖ್ಯಸ್ಥ ಕೆ ಪವನ್ ಕಲ್ಯಾಣ್ ವಾಗ್ದಾಳಿ ನಡೆಸಿದರು. ಇದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರದ ವೈಫಲ್ಯವನ್ನು ಮುಚ್ಚಿಡುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ. ಆಡಳಿತ ಪಕ್ಷವು ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ವಿರೋಧ ಪಕ್ಷದ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದೆ ಎಂದು ಪವನ್​ ಕಲ್ಯಾಣ್ ಟೀಕಿಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು ಘಟನೆಗಳನ್ನು ತೀವ್ರವಾಗಿ ಖಂಡಿಸಿದ್ದು, ಶಾಂತಿ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಕೋನಸೀಮೆಯಲ್ಲಿ ಶಾಂತಿ ಕಾಪಾಡುವಲ್ಲಿ ವಿಫಲವಾಗಿರುವ ಕಾರಣ ಸರಕಾರವೇ ಅದರ ಹೊಣೆ ಹೊರಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ಸಂದರ್ಭದಲ್ಲಿ ಜನರು ಸಂಯಮವನ್ನು ಪಾಲಿಸುವಂತೆ ಮತ್ತು ಕೋನಸೀಮಾದಲ್ಲಿ ಶಾಂತಿಯನ್ನು ಮರಳಿಸುವಂತೆ ಪ್ರತಿಪಕ್ಷಗಳು ಮನವಿ ಮಾಡಿದರು.(ಏಜೆನ್ಸೀಸ್​)
ಕೋನಸೀಮಾ ಜಿಲ್ಲೆಗೆ ಬಿ. ಆರ್. ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಹೆಸರಿಡಲು ಆಂಧ್ರ ಸರ್ಕಾರದ ನಿರ್ಧಾರ

ಇನ್ಮುಂದೆ ಸಂಸಾರ ಉಳಿಸಿಕೊಳ್ಳಲು ಆಗುವುದಿಲ್ಲ: ಗಂಡನ ಕರಾಳ ಮುಖ ಬಿಚ್ಚಿಟ್ಟ ನಟಿ ಚೈತ್ರಾ ಹಳ್ಳಿಕೇರಿ

ಟೆಕ್ಸಾಸ್​ ಶಾಲೆಯಲ್ಲಿ ಯುವಕನಿಂದ ಗುಂಡಿನ ದಾಳಿ: 18 ಶಾಲಾಮಕ್ಕಳು ಸೇರಿದಂತೆ 21 ಮಂದಿ ದುರಂತ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
