ನವದೆಹಲಿ:ರಾಜಸ್ಥಾನದ ಜೋಧ್​ಪುರ್ ವಲಯದ ಮಿಲಿಟರಿ ಚೀಪ್​ ಇಂಜಿನಿಯರ್ ಕೈಕೆಳಗೆ ಕೆಲಸ ಮಾಡುತ್ತಿದ್ದ ಗುಮಾಸ್ತನನ್ನು ದೇಶ ದ್ರೋಹ ಆರೋಪದ ಮೇಲೆ ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.
ಹನಿಟ್ರ್ಯಾಪ್​ ಬಲೆ ಬಿದ್ದು, ಭಾರತೀಯ ಸೇನೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನು ಪಾಕಿಸ್ತಾನ ಮಹಿಳೆಯ ಜತೆ ಹಂಚಿಕೊಳ್ಳುತ್ತಿದ್ದ ಆರೋಪದ ಮೇಲೆ ಗುಮಾಸ್ತನನ್ನು ಬಂಧಿಸಲಾಗಿದೆ.
ಆರೋಪಿಯನ್ನು ರಾಮ್​ ಸಿಂಗ್​ ಎಂದು ಗುರುತಿಸಲಾಗಿದೆ. ಈತ ಗುಮಾಸ್ತನಾಗಿದ್ದು, ಮಿಲಿಟರಿ ಎಂಜಿನಿಯರಿಂಗ್ ಸೇವೆಯಲ್ಲಿ ಜೋಧಪುರ ವಲಯದ ಮುಖ್ಯ ಎಂಜಿನಿಯರ್ ಕೈಕೆಳಗೆ ಕೆಲಸ ಮಾಡುತ್ತಿದ್ದ ಎಂದು ರಾಜಸ್ಥಾನದ ಪೊಲೀಸ್​ ಮಹಾನಿರ್ದೇಶಕ (ಗುಪ್ತಚರ) ಉಮೇಶ್​ ಮಿಶ್ರಾ ತಿಳಿಸಿದ್ದಾರೆ.
35 ವರ್ಷದ ಆರೋಪಿ ರಾಮ್​ ಸಿಂಗ್​ ಕಳೆದ ಎರಡು ತಿಂಗಳಿಂದ ವಾಟ್ಸ್​ಆ್ಯಪ್​ ಮೂಲಕ ಪಾಕಿಸ್ತಾನಿ ಮಹಿಳೆಯನ್ನು ಸಂಪರ್ಕಿಸಿದ್ದ. ಮಹಿಳೆಯ ಬಣ್ಣ ಬಣ್ಣದ ಮಾತಿಗೆ ಮತ್ತು ಆಕೆಯ ದೈಹಿಕ ಸೌಂದರ್ಯಕ್ಕೆ ಮಾರು ಹೋಗಿ ಭಾರತೀಯ ಸೇನೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಾಟ್ಸ್​ಆ್ಯಪ್​ ಮೂಲಕ ಹಂಚಿಕೊಳ್ಳುತ್ತಿದ್ದ ಎಂದು ಉಮೇಶ್​ ಮಿಶ್ರಾ ಮಾಹಿತಿ ನೀಡಿದ್ದಾರೆ.
ನಾಲ್ಕನೇ ವರ್ಗದ ಉದ್ಯೋಗಿಯಾಗಿದ್ದ ಆರೋಪಿ, ತನ್ನ ಮೊಬೈಲ್ ಫೋನ್ ಮೂಲಕ ದಾಖಲೆಗಳ ಫೋಟೋಗಳನ್ನು ಕಳುಹಿಸುತ್ತಿದ್ದನು ಎಂಬ ಮಾಹಿತಿ ಗುಪ್ತಚರರಿಂದ ಪಡೆದ ಬಳಿಕ ರಾಜಸ್ಥಾನ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ. ಆತನ ಮೊಬೈಲ್​ ಪರಿಶೀಲನೆ ನಡೆಸಿದ ವೇಳೆ ಆತ ದಾಖಲೆಗಳನ್ನು ಕಳುಹಿಸಿರುವುದು ದೃಢವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.(ಏಜೆನ್ಸೀಸ್​)
ಕೋಟಿಗೊಬ್ಬ-3 ಚಿತ್ರದ ಶೋ ರದ್ದಾದ ಬೆನ್ನಲ್ಲೇ ಚಿತ್ರತಂಡಕ್ಕೆ ಕಾಡುತ್ತಿದೆ ಮತ್ತೊಂದು ಭಯ..!

ವಿಜಯಪುರದ ಹುಡುಗಿಯ ಸಾಧನೆ: ಜಪಾನಿನ ವಿದ್ಯಾರ್ಥಿ ವೇತನಕ್ಕೆ ಭಾಜನಳಾದ ರಾಜ್ಯದ ಏಕೈಕ ವಿದ್ಯಾರ್ಥಿನಿ

ರಾತ್ರಿ ಸಮಯದಲ್ಲೇಕೆ ವೈದ್ಯರು ಶವಪರೀಕ್ಷೆ ಮಾಡುವುದಿಲ್ಲ? ಇಲ್ಲಿದೆ ಅಚ್ಚರಿಯ ಉತ್ತರ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
