ವಿಜಯವಾಡ:ಜಾನುವಾರುಗಳನ್ನು ಮೇಯಿಸುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಚಾಬ್ರೋಲ್​ ಮಂಡಲದ ಮಂಚಲಾ ಗ್ರಾಮದಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿಯು ಗ್ರಾಮದ ಸಮೀಪದಲ್ಲಿಯೇ ಜಾನುವಾರುಗಳನ್ನು ಮೇಯಿಸುತ್ತಿದ್ದಳು. ಅಲ್ಲಿಯೇ ಪಕ್ಕದಲ್ಲಿದ್ದ ಸೇತುವೆಯೊಂದರ ಕೆಳಗೆ ಆರೋಪಿ ಯುವಕರು ಮದ್ಯ ಸೇವಿಸುತ್ತಾ ಕುಳಿತಿದ್ದರು. ಮೊದಲೇ ಪಾನಮತ್ತರಾಗಿದ್ದ ಯುವಕರು ಬಾಲಕಿಯನ್ನು ಎಳೆದುಕೊಂಡು ಹತ್ತಿರದಲ್ಲೇ ಇದ್ದ ಪೊದೆಯೊಂದರಲ್ಲಿ ರೇಪ್​ ಮಾಡಲು ಯತ್ನಿಸಿದ್ದಾರೆ.
ಬಾಲಕಿ ಸಹಾಯಕ್ಕಾಗಿ ಕೂಗಿಕೊಂಡಾಗ ದಾರಿಹೋಕರು ಅದನ್ನು ಗಮನಿಸಿ ಆಕೆಯನ್ನು ರಕ್ಷಿಸಿ, ಕಿರಾತಕರನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಬಳಿಕ ಚಾಬ್ರೋಲ್​ ಮಂಡಲದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳ್ಕಕೆ ಆಗಮಿಸಿದ ಪೊಲೀಸರು ಆರೋಪಿ ಮತ್ತು ಸಂತ್ರಸ್ತೆಯನ್ನು ಜತೆಗೆ ಕರೆದೊಯ್ದು ವಿಚಾರಣೆ ನಡೆಸಿ ದೂರು ದಾಖಲಿಸಿಕೊಂಡು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.(ಏಜೆನ್ಸೀಸ್​)
ಪತ್ನಿಯನ್ನು ಕೊಂದ ಬಳಿಕ ಪತಿ ಮಾಡಿದ್ದನ್ನು ಕೇಳಿದ್ರೆ ಶಾಕ್​ ಆಗ್ತೀರಾ! ಇಡೀ ಊರೇ ಬೆಚ್ಚಿಬಿದ್ದ ಘಟನೆ ಇದು
ಹಿರಿಯ ಪೋಷಕ ನಟಿ ಬಿ.ಜಯಾ ಇನ್ನಿಲ್ಲ! ಕಣ್ಣೀರ ಕಡಲಲ್ಲಿ ಚಿತ್ರರಂಗ
ರಸ್ತೆ ಮೇಲೆ ಏಲಿಯನ್​ ಓಡಾಡಿದ್ದ ವಿಡಿಯೋ ವೈರಲ್​! ವಿಡಿಯೋ ಹಿಂದಿನ ಸತ್ಯಾಂಶ ಇಲ್ಲಿ ಬಯಲು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − one =
Remember me
