ಭೋಪಾಲ್​:ಮಹಿಳಾ ಕಾನ್ಸ್​ಟೇಬಲ್​ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ನೀಮುಚ್​ ಜಿಲ್ಲೆಯಲ್ಲಿ ನಡೆದಿದೆ ಎನ್ನಲಾಗಿದೆ. ಮೂವರು ಕಾಮುಕರು ಮಹಿಳಾ ಪೇದೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ವಿಡಿಯೋ ಮಾಡಿ, ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಘಟನೆ ಶನಿವಾರ ವರದಿಯಾಗಿದೆ.
ಪೊಲೀಸರ ಪ್ರಕಾರ ಈ ಘಟನೆ ಈ ತಿಂಗಳ ಆರಂಭದಲ್ಲಿ ನಡೆದಿದೆ. ಆದರೆ, 30 ವರ್ಷದ ಸಂತ್ರಸ್ತೆ ಸೆಪ್ಟೆಂಬರ್​ 13 ರಂದು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಒಟ್ಟು ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿಯ ತಾಯಿಯ ಮೇಲೆಯೂ ದೂರು ದಾಖಲಾಗಿದೆ.
ಪ್ರಮುಖ ಆರೋಪಿ, ಆತನ ಸಹೋದರ ಮತ್ತು ಇನ್ನೊಬ್ಬ ವ್ಯಕ್ತಿ ಸೇರಿ ಒಟ್ಟು ಮೂವರು ಬರ್ತಡೇ ಪಾರ್ಟಿ ವೇಳೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆಂದು ಸಂತ್ರಸ್ತ ಮಹಿಳಾ ಪೇದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಮುಖ ಆರೋಪಿಯ ತಾಯಿ ಬೆದರಿಕೆ ಹಾಕಿದ್ದಾರೆ ಮತ್ತು ಅವರ ಸಂಬಂಧಿಯೊಬ್ಬರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ಫೇಸ್​ಬುಕ್​ ಮೂಲಕ ಸಂತ್ರಸ್ತ ಮಹಿಳಾ ಪೇದೆಯನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ ಕಳೆದ ಏಪ್ರಿಲ್​ನಿಂದ ವಾಟ್ಸ್​ಆ್ಯಪ್​ ಮೂಲಕ ಸಂದೇಶ ವಿನಿಮಯ ನಡೆಯುತ್ತಿತ್ತು. ತಮ್ಮನ ಬರ್ತಡೇ ಆಚರಿಸುತ್ತಿದ್ದೇವೆ ಪಾರ್ಟಿಗೆ ಬನ್ನಿ ಎಂದು ಪ್ರಮುಖ ಆರೋಪಿ ಮಹಿಳಾ ಪೇದೆಯನ್ನು ಆಹ್ವಾನಿಸಿದ್ದ. ಆಹ್ವಾನದ ಮೇರೆಗೆ ಪಾರ್ಟಿಗೆ ಹೋದ ಪೇದೆಯ ಮೇಲೆ ಮೂವರು ಸೇರಿ ಗ್ಯಾಂಗ್​ರೇಪ್​ ಮಾಡಿದ್ದಾರೆ ಎಂದು ನೀಮುಚ್​ ಮಹಿಳಾ ಪೊಲೀಸ್​ ಉಸ್ತುವಾರಿ ಅನುರಾಧ ಗಿರ್ವಾಲ್​ ಹೇಳಿದ್ದಾರೆ.
ಸಂತ್ರಸ್ತ ಮಹಿಳಾ ಪೇದೆಯನ್ನು ಈ ಮೊದಲು ನೀಮುಚ್​ ಜಿಲ್ಲೆಗೆ ಪೋಸ್ಟಿಂಗ್​ ಮಾಡಲಾಗಿತ್ತು. ಪ್ರಸ್ತುತ ಇಂದೋರ್​ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಪ್ರಕರಣದ ಪ್ರಮುಖ ಆರೋಪಿ ಮತ್ತು ಆತನ ತಾಯಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ.(ಏಜೆನ್ಸೀಸ್​)
ಇದುವರೆಗೂ ಕಣ್ಣು ತೆರೆಯದ ನಟ ಧರಮ್​ ತೇಜ್​ಗೆ ಏನಾಗಿದೆ? ಪವನ್​ ಕಲ್ಯಾಣ್​ ಹೇಳಿದ್ದು ಹೀಗೆ…

ಬೆಂಗ್ಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: 120 ಕಿ.ಮೀ ವೇಗದಲ್ಲಿ ಬಂದು ಗುದ್ದಿದ ಐಷಾರಾಮಿ ಕಾರು..!

ಬದಲಾಗಬೇಕಾಗಿರುವುದು ನಾವು, ಪ್ರಪಂಚವಲ್ಲ…; ವಿಜಯವಾಣಿ ಸೆಲೆಬ್ರಿಟಿ ಕಾರ್ನರ್​ನಲ್ಲಿ ನಟ ಶ್ರೀನಾಥ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight − 2 =
Remember me
