ಕೊಚ್ಚಿ:ಹಲ್ಲೆ ಮಾಡಿದ್ದಲ್ಲದೆ, ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದನೆಂದು ಆರೋಪಿಸಿ, ತನ್ನ ಪುರುಷ ಸಹೋದ್ಯೋಗಿಯ ವಿರುದ್ಧ ಆಯುರ್ವೇದ ಮಸಾಜ್​ ಕೇಂದ್ರದ ಮಹಿಳಾ ಉದ್ಯೋಗಿ ಒಬ್ಬರು ದೂರು ದಾಖಲಿಸಿದ್ದಾರೆ.
ಈ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಆರೋಪಿಯನ್ನು ಅಜಿತ್​ ನಾರಾಯಣನ್​ ಎಂದು ಗುರುತಿಸಲಾಗಿದೆ. ಈತ ಕಣ್ಣೂರಿನ ಪಯ್ಯವುರ್ ನಿವಾಸಿ. ಹಲ್ಲೆಗೆ ಸಂಬಂಧಿಸಿದ ಸಿಸಿಟಿವಿ ವಿಡಿಯೋ ಫುಟೇಜ್​ ಲಭ್ಯವಾಗಿದ್ದು, ಅದರಲ್ಲಿ ಆರೋಪಿ ಸಂತ್ರಸ್ತೆಯ ಮೇಲೆ ಹಲ್ಲೆ ಮಾಡಿರುವ ದೃಶ್ಯ ದಾಖಲಾಗಿದೆ. ಸಾಕಷ್ಟು ಸಾಕ್ಷ್ಯಾಧಾರ ಲಭ್ಯವಿದ್ದರೂ ಈವರೆಗೂ ಆರೋಪಿಯನ್ನು ಬಂಧಿಸಿಲ್ಲ ಎಂದು ಸಂತ್ರಸ್ತೆ ಪೊಲೀಸರ ವಿರುದ್ಧ ಆರೋಪ ಮಾಡಿದ್ದಾರೆ.
ಕಳೆದ ಸೋಮವಾರ ಮಸಾಜ್​ ಕೇಂದ್ರಕ್ಕೆ ಬಂದಿದ್ದ ಗ್ರಾಹಕರೊಬ್ಬರು ಅಲ್ಲಿ ನೀಡುವ ಸೇವೆಯ ವಿರುದ್ಧ ದೂರಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಆರೋಪಿ ಅಜಿತ್​, ಸಂತ್ರಸ್ತೆ ಜತೆ ವಾಗ್ವಾದಕ್ಕೆ ಇಳಿದಿದ್ದ. ಈ ವೇಳೆ ಆಕೆಗೆ ಥಳಿಸಿದ್ದಾನೆ. ಅಲ್ಲದೆ, ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದನು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಸಿಸಿಟಿವಿ ದೃಶ್ಯಾವಳಿಯನ್ನು ಸಹ ಜತೆಗೆ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಎರ್ನಾಕುಲಂ ಉತ್ತರ ಪೊಲೀಸ್ ಠಾಣೆಯ ಅಧಿಕಾರಿ, ಆರೋಪಿ ಅಜಿತ್​ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ, ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
ಕೆಎಸ್​ಆರ್​ಟಿಸಿ ಟಿಕೆಟ್​ ವಿತರಣಾ ಯಂತ್ರ ಸ್ಫೋಟ: ಕಂಡಕ್ಟರ್​ಗೆ ಗಂಭೀರ ಗಾಯ

ಪ್ರೇಯಸಿಗೆ ಜಾಮೀನು ಕೊಡಿಸಲು ಹೋಗಿ ಮರಣದಂಡನೆಗೆ ಗುರಿ: ವಿಷದ ಇಂಜೆಕ್ಷನ್​ ನೀಡಿ ಪ್ರಿಯಕರನ ಹತ್ಯೆ

ನೀನೆ ಸಾಕಿದ ಗಿಣಿ ಹದ್ದಾಗಿ ಕುಕ್ಕಿತಲ್ಲೋ… ಉಗ್ರರ ದಾಳಿಗೆ ಪಾಕ್​ನ 10 ಸೈನಿಕರ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 6 =
Remember me
