ಕೋಲ್ಕತ:ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಇಡಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಹಾಗೂ ನಟಿ ಅರ್ಪಿತಾ ಮುಖರ್ಜಿ ವೈದ್ಯಕೀಯ ತಪಾಸಣೆ ಕೊರೆದೊಯ್ಯುವ ವೇಳೆ ಕುಸಿದು ಬಿದ್ದಿದ್ದಾರೆ.
ಪ್ರತಿ ನಿತ್ಯದ ಆರೋಗ್ಯ ತಪಾಸಣೆಗೆಂದು ಕರೆದೊಯ್ದುವಾಗ ಅರ್ಪಿತಾ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಲ್ಲದೆ, ಅರ್ಪಿತಾ ಅವರ ಮನೆಯಲ್ಲಿದ್ದ ನಾಲ್ಕು ಕಾರುಗಳು ನಾಪತ್ತೆಯಾಗಿದ್ದು, ಅವುಗಳ ಹುಡುಕಾಟದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ನಾಲ್ಕೂ ಕಾರುಗಳಲ್ಲಿ ಹಣ ತುಂಬಿರುವ ಬಗ್ಗೆ ಮಾಹಿತಿ ಇದೆ. ಕೋಲ್ಕತದ ಡೈಮಂಡ್​ ಸಿಟಿ ಕಾಂಪ್ಲೆಕ್ಸ್​ನಲ್ಲಿರುವ ಅಪಾರ್ಟ್​ಮೆಂಟ್​ನಿಂದ ನಾಲ್ಕು ಕಾರುಗಳು ನಾಪತ್ತೆಯಾಗಿದ್ದು, ಸಿಸಿಟಿವಿ ದೃಶ್ಯಾವಳಿ ಸಹಾಯದಿಂದ ಕಾರುಗಳನ್ನು ಪತ್ತೆಹಚ್ಚಲು ಇಡಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.
ಇನ್ನೊಂದೆಡೆ ಭ್ರಷ್ಟಾಚಾರ ಆರೋಪದಿಂದ ಬಂಧನವಾಗಿರುವ ಬೆನ್ನಲ್ಲೇ ಪಾರ್ಥ ಚಟರ್ಜಿ ಅವರನ್ನು ಸಿಎಂ ಮಮತಾ ಬ್ಯಾನರ್ಜಿ ಅವರು ಸಚಿವ ಸ್ಥಾನದಿಂದ ಕಿತ್ತೆಸೆದಿದ್ದಾರೆ. ಅಲ್ಲದೆ, ಪಕ್ಷದ ಎಲ್ಲಾ ಸ್ಥಾನಗಳಿಂದಲೂ ಚಟರ್ಜಿ ಅವರನ್ನು ವಜಾಗೊಳಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಟರ್ಜಿ, ನನ್ನ ವಿರುದ್ಧ ಪಿತೂರಿ ನಡೆದಿದೆ ಎಂದು ಕಣ್ಣೀರಿಟ್ಟಿದ್ದಾರೆ. ಉದ್ದೇಶ ಪೂರ್ವಕವಾಗಿಯೇ ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ. ಜುಲೈ 22ರಂದು ಸಚಿವರ ಆಪ್ತೆ ಅರ್ಪಿತಾ ಮುಖರ್ಜಿ ಮನೆಯಲ್ಲಿ ಬರೋಬ್ಬರಿ 21 ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಇದಾದ ಬಳಿಕ ನಿನ್ನೆ (ಜುಲೈ 28) ಅರ್ಪಿತಾಗೆ ಸಂಬಂಧಿಸಿದ ಮತ್ತೊಂದು ಫ್ಲ್ಯಾಟ್​ನಲ್ಲಿ ಮತ್ತೆ 28 ಕೋಟಿ ರೂಪಾಯಿ ನಗದು ದೊರೆತಿದೆ. ಅರ್ಪಿತಾ ಮನೆಯಲ್ಲಿ ಹುಡುಕಿದಷ್ಟು ಅಕ್ರಮ ಸಂಪತ್ತು ಸಿಗುತ್ತಿದೆ. ಇದುವರೆಗೂ 50 ಕೋಟಿ ರೂಪಾಯಿಗು ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ.
ನಿನ್ನೆ ನಡೆದ ದಾಳಿಯಲ್ಲಿ ನಗದು ಹಣ ಮಾತ್ರವಲ್ಲದೆ 2 ಕೋಟಿ ರೂಪಾಯಿ ಮೌಲ್ಯದ 3 ಕೆಜಿ ಚಿನ್ನ ಸಹ ಪತ್ತೆಯಾಗಿದೆ. ಮೊದಲ ದಾಳಿಯ ಬೆನ್ನಲ್ಲೇ ಅರ್ಪಿತಾಳನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಏನಿದು ಹಗರಣ?ಬಂಗಾಳದ ಗ್ರೂಪ್ ‘ಸಿ’ ಮತ್ತು ‘ಡಿ’ ಹಾಗೂ ಸಹಾಯಕ ಶಿಕ್ಷಕರು ಮತ್ತು ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿನ ಹಗರಣದ ತನಿಖೆ ನಡೆಸುವಂತೆ ಕೋಲ್ಕತ ಹೈಕೋರ್ಟ್​ ಈ ಹಿಂದೆ ನಿರ್ದೇಶಿಸಿತ್ತು. ಇದಾದ ಬಳಿಕ ಸಿಬಿಐ ಈ ಸಂಬಂಧ ಎಫ್​ಐಆರ್​ ದಾಖಲಿಸಿತ್ತು. ಈ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದ ಬೆನ್ನಲ್ಲೇ ಮಧ್ಯಪ್ರವೇಶಿಸಿದ ಇಡಿ ಅರ್ಪಿತಾ ಹಾಗೂ ಸೇರಿದಂತೆ ಅನೇಕರ ಮನೆಗಳ ಮೇಲೆ ದಾಳಿ ನಡೆಸಿದೆ.
ಅಂದಹಾಗೆ ಸಚಿವ ಚಟರ್ಜಿ ಅವರು ಪ್ರಸ್ತುತ ಕೈಗಾರಿಕೆ ಮತ್ತು ವಾಣಿಜ್ಯ ಸಚಿವರಾಗಿದ್ದರು. ಆದರೆ, ಅವರನ್ನು ವಜಾಗೊಳಿಸಲಾಗಿದೆ. ಅವರು ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ (ಡಬ್ಲ್ಯುಬಿಎಸ್‌ಎಸ್‌ಸಿ) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿಗಳನ್ನು ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ. ಅರ್ಪಿತಾ ಮುಖರ್ಜಿ ಅಲ್ಲದೆ, ಬಂಗಾಳದ ಶಿಕ್ಷಣ ಸಚಿವ ಪರೇಶ್​ ಸಿ ಅಧಿಕಾರಿ ಮತ್ತು ಶಾಸಕ ಮಾಣಿಕ್​ ಭಟ್ಟಾಚಾರ್ಯ ಸೇರಿದಂತೆ ಇತರರ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.(ಏಜೆನ್ಸೀಸ್​)
ಪ್ರೇಯಸಿಗಾಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯ ಬಂಧನ!

ಮನೆ-ಮನೆಗೂ ತಲಾ 5 ಸಾವಿರ ರೂಪಾಯಿ ದಾನ ಮಾಡ್ತೀನಿ: ಕೆಜಿಎಫ್​ ಬಾಬು ಘೋಷಣೆ

VIDEO: ಪಿಸ್ತೂಲ್​ ಹಿಡಿದು ಬಂದ ಕಳ್ಳನನ್ನು ಕ್ಲೀನ್​ ಮಾಡೋ ಬಟ್ಟೆಯಿಂದ್ಲೇ ಓಡಿಸಿದಳು! ಇಲ್ಲಿದೆ ನೋಡಿ ಅಚ್ಚರಿಯ ವಿಡಿಯೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 19 =
Remember me
