ಚಂಡೀಗಢ:ಇಂದು ಪಂಜಾಬ್ ಜನರ​ ಪಾಲಿಗೆ ವಿಶೇಷ ದಿನ. ಏಕೆಂದರೆ, ಇಡೀ ರಾಜ್ಯವನ್ನು ಪ್ರತಿನಿಧಿಸುವ ಹಾಗೂ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರ ವಿವಾಹದ ದಿನ. ಅಂದಹಾಗೆ ಪಂಜಾಬ್​ ಸಿಎಂಗೆ ಇದು ಎರಡನೇ ಮದುವೆ. ಇಷ್ಟು ಕೇಳಿದ ಮೇಲೆ ನಿಮ್ಮ ಮನಸ್ಸಿನಲ್ಲಿ ವಧು ಯಾರು? ಮತ್ತು ವಧುವಿನ ವಯಸ್ಸೆಷ್ಟು? ಎಂಬಿತ್ಯಾದಿ ಪ್ರಶ್ನೆಗಳು ಮೂಡುವುದು ಸಹಜ. ನಿಮ್ಮ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರವನ್ನು ನಾವು ಕೊಡುತ್ತೇವೆ. ಹೀಗಾಗಿ ಓದುವುದನ್ನು ಮುಂದುವರಿಸಿ…
48 ವರ್ಷದ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರು ಇಂದು ಚಂಡೀಗಢದಲ್ಲಿ ನಡೆಯಲಿರುವ ಖಾಸಗಿ ಸಮಾರಂಭದಲ್ಲಿ ಡಾ. ಗುರುಪ್ರೀತ್​ ಕೌರ್​ ಎಂಬುವರನ್ನು ವರಿಸಲಿದ್ದಾರೆ. ಈ ಹಿಂದೆ ಸ್ಟ್ಯಾಂಡ್​ ಅಪ್​​ ಕಾಮಿಡಿಯನ್​ ಆಗಿದ್ದ ಮಾನ್​, 6 ವರ್ಷಗಳ ಹಿಂದೆ ತಮ್ಮ ಮೊದಲ ಪತ್ನಿಯಿಂದ ಡಿವೋರ್ಸ್​ ಪಡೆದುಕೊಂಡಿದ್ದಾರೆ. ಮಾನ್​ ಮತ್ತು ಗುರುಪ್ರೀತ್​ ನಡುವೆ 16 ವರ್ಷಗಳ ವಯಸ್ಸಿನ ಅಂತರವಿದೆ.
ವಧುವಿನ ಬಗ್ಗೆ ತಿಳಿಯುವುದಾದರೆ, ಮಾನ್​ ಕೈಹಿಡಿಯಲಿರುವ ವಧುವಿನ ಹೆಸರು ಡಾ. ಗುರುಪ್ರೀತ್​ ಕೌರ್​. ಇವರ ವಯಸ್ಸು 32. ವೃತ್ತಿಯಲ್ಲಿ ವೈದ್ಯೆಯಾಗಿದ್ದಾರೆ. ಕುರುಕ್ಷೇತ್ರ ಜಿಲ್ಲೆಯ ಪೆಹೊವಾ ಮೂಲದವರು. ಅವರ ತಂದೆ ಇಂದ್ರಜಿತ್​ ಸಿಂಗ್​ ಓರ್ವ ರೈತ. ಅವರ ತಾಯಿ ರಾಜ್​ ಕೌರ್​ ಗೃಹಿಣಿ. ಗುರುಪ್ರೀತ್​ ಕೌರ್​ಗೆ ಇಬ್ಬರು ಸಹೋದರಿಯರಿದ್ದಾರೆ. ಇಬ್ಬರು ಕೂಡ ವಿದೇಶದಲ್ಲಿದ್ದಾರೆ. ಮಾನ್​ ಅವರ ನಿಕಟ ಮೂಲಗಳ ಪ್ರಕಾರ, ಎರಡೂ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಸಂಬಂಧ ಇದೆ.
ಗುರುಪ್ರೀತ್​ ಕೌರ್​ ಅವರ ಅಂಕಲ್​ ಗುರಿಂದರ್​ ಜೀತ್​ ಮಾಧ್ಯಮದೊಂದಿಗೆ ಮಾತನಾಡಿದ್ದು, ಗುರುಪ್ರೀತ್​ ಯಾವಾಗಲೂ ಓದುವುದರಲ್ಲಿ ಅತ್ಯುತ್ತಮಳು ಎಂದಿದ್ದಾರೆ. ಆಕೆ ಸಹೃದಯಿ, ಕಾಳಜಿಯುಳ್ಳ ಮತ್ತು ತುಂಬಾ ಬುದ್ಧಿವಂತೆ ಎಂದು ಪೆಹೊವಾದಲ್ಲಿರುವ ಗುರುಪ್ರೀತ್​ ಅವರ ನೆರೆಮನೆವಾಸಿ ವನೀತಾ ಬೆಹ್ಲ್​ ಹೇಳಿದ್ದಾರೆ.
ಹರಿಯಾಣದ ಮೌಲಾನಾದಲ್ಲಿರುವ ಮಹಾರಿಷಿ ಮಾರ್ಕಂಡೇಶ್ವರ್​ ಮೆಡಿಕಲ್​ ಕಾಲೇಜಿನಲ್ಲಿ ಅಧ್ಯಯನ ಮಾಡಿದ್ದಾಳೆ. ಆಕೆ ಚಿನ್ನದ ಪದಕ ವಿಜೇತೆ ಎಂದು ಅವರ ಅಂಕಲ್ ಗುರಿಂದರ್​ ಜೀತ್​​ ತಿಳಿಸಿದ್ದಾರೆ.
ಆಮ್​ ಆದ್ಮಿ ಪಕ್ಷದ ನಾಯಕರಾದ ಭಗವಂತ್ ಮಾನ್​, ಇತ್ತೀಚಿಗೆ ನಡೆದ ಪಂಜಾಬ್​ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನ ಗೆಲ್ಲಿಸಿಕೊಂಡು ದಾಖಲೆ ಬರೆದಿದ್ದರು. ಪಂಜಾಬ್ ವಿಧಾನಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ಗುರುಪ್ರೀತ್​ ಅವರು ಭಗವಂತ್ ಮಾನ್ ಅವರಿಗೆ ಸಹಾಯ ಮಾಡಿದರು ಎಂದು ಮೂಲಗಳು ಹೇಳುತ್ತವೆ.
ಭಗವಂತ್ ಮಾನ್​ ಅವರಿಗೆ ಈಗಾಗಲೇ ಇಂದ್ರಪ್ರೀತ್ ಕೌರ್ ಎಂಬುವರ ಜತೆ ಮದುವೆ ಆಗಿತ್ತು. ಇವರಿಬ್ಬರ ಸಂಬಂಧ 2015ರಲ್ಲಿ ವಿಚ್ಛೇದನ ಪಡೆಯುವ ಮೂಲಕ ಮುರಿದು ಬಿದ್ದಿತ್ತು. ಇವರ ಮಾಜಿ ಪತ್ನಿ ಹಾಗೂ ಮಕ್ಕಳು ಅಮೆರಿಕದಲ್ಲಿ ನೆಲೆಸಿದ್ದಾರೆ. 6 ವರ್ಷದಿಂದ ಏಕಾಂಗಿಯಾಗಿದ್ದ ಭಗವಂತ್ ಮಾನ್​ ಅವರು ಇದೀಗ ಮತ್ತೊಂದು ಮದ್ವೆ ಆಗುತ್ತಿದ್ದಾರೆ. ತಾಯಿ ಹಾಗೂ ಸಹೋದರಿ ಇಬ್ಬರೂ ಮತ್ತೊಂದು ಮದ್ವೆ ಆಗಲು ಒಪ್ಪಿಸಿದ್ದಾರೆ.(ಏಜೆನ್ಸೀಸ್​)
VIDEO: ಫಸ್ಟ್​ ನೈಟ್​ ಅನ್ನೋದೇ ಇಲ್ಲ- ನಟಿ ಆಲಿಯಾ ಭಟ್​ ಹೇಳಿಕೆಗೆ ಸುಸ್ತಾದ ಪತಿ ರಣಬೀರ್​ ಕಪೂರ್​

ಒಂದೇ ರೂಮಿನಲ್ಲಿ ನರೇಶ್ ಜತೆ ಸಿಕ್ಕಿಬಿದ್ದ​ ಪವಿತ್ರಾ​ಗೆ ಒಂದರ ಹಿಂದೆ ಮತ್ತೊಂದು ಆಘಾತ!

ಚಿನ್ನದ ಹೊಳಪಿನಲ್ಲಿ ರೂಪಾಯಿ ಕಳಾಹೀನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 5 =
Remember me
