ನವದೆಹಲಿ:ಸ್ಥಳೀಯ ಬಿಜೆಪಿ ನಾಯಕನಿಗೆ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ನಿನ್ನೆ (ಏ.20) ಸಂಜೆ ಪೂರ್ವ ದೆಹಲಿಯಲ್ಲಿ ಘಟನೆ ನಡೆದಿದ್ದು, ಮೃತ ಬಿಜೆಪಿ ನಾಯಕನನ್ನು ಜಿತು ಚೌಧರಿ (42) ಎಂದು ಗುರುತಿಸಲಾಗಿದೆ.
ಮಯೂರ್​ ವಿಹಾರದ ಮೂರನೇ ಹಂತದಲ್ಲಿರುವ ಮನೆಯ ಮುಂದೆ ಬಿಜೆಪಿ ನಾಯಕ ಜಿತು ಚೌಧರಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಪೊಲೀಸ್​ ಕಾನ್ಸ್​ಟೇಬಲ್​ ಒಬ್ಬರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಜಿತು ಚೌಧರಿ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಪ್ರಾಣ ಬಿಟ್ಟಿದ್ದಾರೆ. ಅಪರಾಧ ನಡೆದ ಸ್ಥಳದಿಂದ ಕೆಲವು ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಪರಾರಿಯಾಗಿದ್ದು, ದೆಹಲಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.(ಏಜೆನ್ಸೀಸ್​)
ಏ.26ಕ್ಕೆ ನನ್ನ ಮದ್ವೆ ಇದೆ, ದಯವಿಟ್ಟು ಎಲ್ಲಿಗಾದ್ರೂ ಓಡೋಗೋಣ… ಸಖತ್​ ವೈರಲ್​ ಆಗ್ತಿದೆ ಪ್ರಿಯತಮೆ ಸಂದೇಶ

ಕಸಾಪ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟ

ಗ್ರಾಮಕ್ಕೆ ನೀರು, ರಸ್ತೆ ಕೊಡಿ ಎಂದ ಯುವಕನಿಗೆ ಶಾಸಕರಿಂದ ಕಪಾಳಮೋಕ್ಷ: ಆತ ಕೆಟ್ಟ ಪದ ಬಳಸಿದ, ಅದ್ಕೆ ಬುದ್ಧಿ ಹೇಳ್ದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + twenty =
Remember me
