ಲಖನೌ:ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆ ತೆರೆಬಿದ್ದಿದೆ. ಗೋರಖ್​ಪುರ್ (ನಗರ ಕ್ಷೇತ್ರ) ವಿಧಾನಸಭಾ ಕ್ಷೇತ್ರದಿಂದ ಸಿಎಂ ಯೋಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.
ಶನಿವಾರ ಬಿಡುಗಡೆಯಾದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಿಎಂ ಯೋಗಿ ಸ್ಪರ್ಧಿಸುವ ಕ್ಷೇತ್ರ ಬಹಿರಂಗವಾಗಿದೆ. ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಮೊದಲ ಹಂತದ 58 ಸ್ಥಾನಗಳಿಗೆ 57 ಅಭ್ಯರ್ಥಿಗಳ ಪಟ್ಟಿ ಮತ್ತು ಎರಡನೇ ಹಂತದ 55 ಸ್ಥಾನಗಳಿಗೆ 38 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.
ಉಪಮುಖ್ಯಮಂತ್ರಿ ಕೇಶವ್​ ಪ್ರಸಾದ್​ ಮೌರ್ಯ ಅವರು ಪ್ರಯಾಗರಾಜ್​ ಜಿಲ್ಲೆಯ ಸಿರಾಥು ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.
ಉತ್ತರಪ್ರದೇಶದಲ್ಲಿ ಫೆ.10ರಿಂದ ಮಾ. 7ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಜ. 15ರ ವರೆಗೂ ರಾಜಕೀಯ ಪಕ್ಷಗಳಿಗೆ ಭೌತಿಕ ಪ್ರಚಾರ, ರೋಡ್‌ಶೋಗಳಿಗೆ ಅವಕಾಶ ಇರುವುದಿಲ್ಲ. ನಂತರ ಆ ಸಮಯದ ಪರಿಸ್ಥಿತಿಗೆ ಅನುಗಣವಾಗಿ ಹೊಸ ಸೂಚನೆಗಳನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.(ಏಜೆನ್ಸೀಸ್​)
ಸೋಲದೇವನಹಳ್ಳಿ ಡಾಬಾಗೆ ಬೆಂಕಿ ಹಚ್ಚಲು ಸುಪಾರಿ ಕೊಟ್ಟದ್ದೇ ಮಾಲೀಕನ ಪತ್ನಿ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಖ್ಯಾತ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ವಿಡಿಯೋ ಕುರಿತು ಸ್ಫೋಟಕ ಹೇಳಿಕೆ ಕೊಟ್ಟ ನಟ ದಿಲೀಪ್​!

ಬಾಲಕಿಗೆ ಗರ್ಭಪಾತ ಕೇಸ್​: ಆಸ್ಪತ್ರೆ ಆವರಣದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ 11 ತಲೆಬುರುಡೆ ಪತ್ತೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen + 3 =
Remember me
