ಡೆಹ್ರಾಡೂನ್​:ವಾಹನನಿಬಿಡ ರಸ್ತೆ ಮಧ್ಯದಲ್ಲಿ ಕುಳಿತು ಮದ್ಯ ಸೇವಿಸಿದ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಇನ್​​ಸ್ಟಾಗ್ರಾಂ ಇನ್ಫ್ಲ್ಯುಯೆನ್ಸರ್ ಬಾಬಿ ಕಟಾರಿಯಾ ವಿರುದ್ಧ ಉತ್ತರಾಖಂಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಿ. ಕಟಾರಿಯಾ ಜುಲೈ 28ರಂದು ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್​ ಮಾಡಿದ್ದ. ರಸ್ತೆ ಮೇಲೆ ಎಂಜಾಯ್​ ಮಾಡುವ ಸಮಯವಿದು ಎಂದು ಅಡಿಬರಹ ನೀಡಿದ್ದ. ವಿಡಿಯೋದಲ್ಲಿ ಡೆಹ್ರಾಡೂನ್​ನ ವಾಹನ ನಿಬಿಡ ರಸ್ತೆಯ ಮಧ್ಯದಲ್ಲೇ ಕುರ್ಚಿ ಮತ್ತು ಟೇಬಲ್​ ಹಾಕಿಕೊಂಡು ಕುಳಿತು ಮದ್ಯ ಸೇವಿಸುತ್ತಿರುವ ದಶ್ಯವಿದೆ. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ರೋಶ ವ್ಯಕ್ತವಾಯಿತು. ಇದರ ಬೆನ್ನಲ್ಲೇ ಕಟಾರಿಯಾ ವಿರುದ್ಧ ಪ್ರಕರಣ ದಾಖಲಾಗಿದೆ.
ಗುರುಂಗಾವ್​ ಮೂಲದ ಕಟಾರಿಯಾ ಇನ್​ಸ್ಟಾಗ್ರಾಂನಲ್ಲಿ 6 ಲಕ್ಷ ಫಾಲೋವರ್ಸ್​ ಹೊಂದಿದ್ದಾರೆ. ಕಟಾರಿಯಾ ಆಪ್ತರೊಬ್ಬರು ವಿಡಿಯೋ ರೆಕಾರ್ಡ್​ ಮಾಡಿ, ರೋಡ್​ ಆಪ್ನೆ ಬಾಪ್​ ಕಿ (ರಸ್ತೆ ನಮ್ಮಪ್ಪನಿಗೆ ಸೇರಿದ್ದು) ಎಂಬ ಹಾಡನ್ನು ವಿಡಿಯೋ ಬ್ಯಾಕ್​ಗ್ರೌಂಡ್​ ಹಾಕಿ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಮಾಡಲಾಗಿದೆ. ಈ ವಿಡಿಯೋ ವೈರಲ್​ ಆಗಿ ಕ್ರಮಕ್ಕೆ ಒತ್ತಾಯಗಳು ಕೇಳಿಬಂದ ಹಿನ್ನೆಲೆಯಲ್ಲಿ ಉತ್ತರಾಖಂಡದ ಪೊಲೀಸರು ದೂರು ದಾಖಲಿಸಿದ್ದಾರೆ.

A post shared by Bobby Kataria (@katariabobby)

ಈ ಬಗ್ಗೆ ಟ್ವೀಟ್​ ಮಾಡಿರುವ ಉತ್ತರಾಖಂಡದ ಡಿಜಿಪಿ ಅಶೋಕ್​ ಕುಮಾರ್​, ವಿಡಿಯೋವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಸೆಕ್ಷನ್​ ಅಡಿಯಲ್ಲಿ ಕಟಾರಿಯಾ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.(ಏಜೆನ್ಸೀಸ್​)
ಜನಸೇವಕ ಚಂದ್ರಶೇಖರ್​ಗೆ ವಿಜಯರತ್ನ ಗರಿ: ವಿಜಯವಾಣಿ, ದಿಗ್ವಿಜಯ ನ್ಯೂಸ್ ವಾಹಿನಿಯ ಪ್ರತಿಷ್ಠಿತ ಗೌರವ ಪ್ರದಾನ

ಪತ್ನಿ ಎಷ್ಟೇ ಗೋಗರೆದ್ರು ಸುಮ್ಮನಾಗದ ಗಂಡ: ವಿಡಿಯೋ ಕಾಲ್​ನಲ್ಲಿ ಆತ ಕೊಟ್ಟ ಕಾಟಕ್ಕೆ ಪ್ರಾಣವೇ ಹೋಯ್ತು

ಮಮತಾ ಬ್ಯಾನರ್ಜಿ ನಡು ನೀರಲ್ಲಿ ನಿಮ್ಮನ್ನೂ ಕೈ ಬಿಡ್ತಾರೆ: ಟಿಎಂಸಿ ನಾಯಕರಿಗೆ ಬಿಜೆಪಿ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 19 =
Remember me
