ನವದೆಹಲಿ:ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ರಾಷ್ಟ್ರ ರಾಜಧಾನಿಯ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಕೇಂದ್ರಿಯಾ ತನಿಖಾ ದಳ (ಸಿಬಿಐ) ಇಂದು (ಆ.19) ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ.
ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ ಸಂಬಂಧ ಸಿಬಿಐ ದಾಳಿ ಮಾಡಿರುವುದಾಗಿ ತಿಳಿದುಬಂದಿದೆ.
ದಾಳಿ ಬಗ್ಗೆ ಸಿಸೊಡಿಯಾ ಟ್ವೀಟ್​ ಮಾಡಿದ್ದು, ಸಿಬಿಐ ನನ್ನ ನಿವಾಸದಲ್ಲಿದೆ. ನಾನು ತನಿಖಾ ಸಂಸ್ಥೆಗೆ ಸಹಕಾರವನ್ನು ನೀಡುತ್ತಿದ್ದೇನೆ. ನನ್ನ ವಿರುದ್ಧ ಇರುವ ಯಾವುದನ್ನು ಅವರು ಪತ್ತೆ ಮಾಡಲು ಆಗದು ಎಂದಿದ್ದಾರೆ.
ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಈ ರೀತಿ ಕಿರುಕುಳ ನೀಡುತ್ತಿರುವುದು ದುರದೃಷ್ಟಕರ. ಶಿಕ್ಷಣ ಕ್ಷೇತ್ರದಲ್ಲಿನ ನನ್ನ ಕೆಲಸವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ, ಸತ್ಯ ಹೊರಬರಲಿದೆ ಎಂದು ಸಿಸೊಡಿಯಾ ಟ್ವೀಟ್ ಮಾಡಿದ್ದಾರೆ.
हम सीबीआई का स्वागत करते हैं. जाँच में पूरा सहयोग देंगे ताकि सच जल्द सामने आ सके. अभी तक मुझ पर कई केस किए लेकिन कुछ नहीं निकला. इसमें भी कुछ नहीं निकलेगा. देश में अच्छी शिक्षा के लिए मेरा काम रोका नहीं जा सकता.
— Manish Sisodia (@msisodia)August 19, 2022

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್​ ಮಾಡಿದ್ದು, ಸಿಬಿಐ ಅಧಿಕಾರಿಗಳನ್ನು ಸ್ವಾಗತಿಸುತ್ತೇನೆ. ಈ ಹಿಂದಿನ ದಾಳಿಯಲ್ಲಿ ತನಿಖಾ ಸಂಸ್ಥೆ ಅಧಿಕಾರಿಗಳು ಏನನ್ನೂ ಕಂಡುಕೊಂಡಿಲ್ಲ ಮತ್ತು ಈ ಬಾರಿಯೂ ಸಹ ಏನು ಸಿಗುವುದಿಲ್ಲ ಎಂದು ಹೇಳಿದ್ದಾರೆ.
ಕಳೆದ ವರ್ಷ ನವೆಂಬರ್‌ನಲ್ಲಿ ಜಾರಿಗೆ ತಂದ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಪ್ರಥಮ ಮಾಹಿತಿ ವರದಿ ಅಥವಾ ಎಫ್‌ಐಆರ್ ದಾಖಲಿಸಿದೆ.(ಏಜೆನ್ಸೀಸ್​)
ಪಕ್ಷ ಸೇರ್ಪಡೆ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎನ್ನುತ್ತಲೇ ತೆರೆಮರೆಯಲ್ಲಿ ಸಂಸದೆ ಸುಮಲತಾ ಮೆಗಾ ಪ್ಲಾನ್?!

ಧನಶ್ರೀ-ಚಾಹಲ್​ ದಾಂಪತ್ಯ ಜೀವನ ಮುರಿದುಬಿತ್ತಾ? ಸ್ಪಿನ್​ ಮಾಂತ್ರಿಕ ಯಜುವೇಂದ್ರ ಚಾಹಲ್​ ಹೇಳಿದ್ದೇನು?

ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿ: ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಶಾಸಕ ಶರಣು ಸಲಗರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 9 =
Remember me
