ತ್ರಿಸ್ಸೂರ್​:ಯುವತಿಯೊಬ್ಬಳು ತನ್ನ ಮನೆಯ ಆವರಣದಲ್ಲಿರುವ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೇರಳದ ತ್ರಿಸ್ಸೂರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಶಾಂತವನ (19) ಎಂದು ಗುರುತಿಸಲಾಗಿದೆ.
ಮೃತ ಶಾಂತವನ ಇರಿಂಜಲಕುಡ ಮೂಲದ ನಿವಾಸಿ. ಈಕೆ ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿಪೂರ್ವ ವಿದ್ಯಾರ್ಥಿನಿಯಾಗಿದ್ದಳು.
ಜ್ಯೋತಿ ಪ್ರಕಾಶ್​ ಮತ್ತು ರಜಿತಾ ದಂಪತಿ ಪುತ್ರಿ ಶಾಂತವನ ಮನೆಯ ಆವರಣದಲ್ಲಿರುವ ಬಾವಿಯಲ್ಲಿ ಗುರುವಾರ 11.30ರ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಳು. ಆಕೆಯ ಮೃತದೇಹವನ್ನು ಇರಿಂಜಲಕುಡದಲ್ಲಿರುವ ಸಾರ್ವಜನಿಕ ಆಸ್ಪತರರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಾಂತರಿಸಿದ್ದಾರೆ. ಈ ಸಂಬಂಧ ಕಟ್ಟೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಘಟನೆ ನಡೆದಾಗ ಆಕೆಯ ಪಾಲಕರು ಮನೆಯಲ್ಲಿ ಇರಲಿಲ್ಲ. ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತ್ರಿಸ್ಸೂರ್​ ಮೆಡಿಕಲ್​ ಕಾಲೇಜಿಗೆ ಸ್ಥಳಾಂತರ ಮಾಲಾಗಿದೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್​)
ಹೊರ ಆವರಣದಲ್ಲಿ ಅರೆಬೆತ್ತಲೆ ಸ್ನಾನ: ವಿಡಿಯೋ ಶೇರ್​ ಮಾಡಿದ ನಟಿಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ

ಮಾಜಿ ಕೋಚ್ ರವಿಶಾಸ್ತ್ರಿಗೆ ಪರೋಕ್ಷ ಟಾಂಗ್ ನೀಡಿದ ಅಜಿಂಕ್ಯ ರಹಾನೆ!

ಸಾರಿಗೆ ನೌಕರರಿಗೆ ಸಿಹಿ ಸುದ್ದಿ; ವಜಾ ಆಗಿದ್ದವರ ಮರು ನೇಮಕ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − seven =
Remember me
