ಬೆಂಗಳೂರು:ಅಖಿಲ ಭಾರತ ಕಾಂಗ್ರೆಸ್​ ಸಮಿತಿ (ಎಐಸಿಸಿ) ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಶಶಿ ತರೂರ್​ ವಿರುದ್ಧ ಗೆಲುವು ಸಾಧಿಸುವ ಮೂಲಕ ನೂತನ ಕಾಂಗ್ರೆಸ್​ ಅಧ್ಯಕ್ಷರಾಗಿ ಕರ್ನಾಟಕದ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿದ್ದಾರೆ.
ಅ. 17ರಂದು ಕಾಂಗ್ರೆಸ್​ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯಿತು. ಮತಾಧಿಕಾರ ಪಡೆದಿದ್ದ ಒಟ್ಟು 9100 ಮಂದಿ ಪೈಕಿ ಶೇ. 96ರಷ್ಟು ಜನರು ಮತದಾನ ಮಾಡಿದ್ದರು. ಬ್ಯಾಲೆಟ್​ ಬಾಕ್ಸ್​ಗಳನ್ನು ಎಲ್ಲ ರಾಜ್ಯಗಳಿಂದ ದೆಹಲಿಗೆ ತರಿಸಿಕೊಂಡು ಇಂದು ಮತಎಣಿಕೆ ಮಾಡಲಾಯಿತು. ಅಂತಿಮವಾಗಿ ಫಲಿತಾಂಶ ಹೊರಬಿದ್ದಿದ್ದು, 24 ವರ್ಷಗಳ ಬಳಿಕ ಕಾಂಗ್ರೆಸ್​ ಮೊದಲ ಬಾರಿಗೆ ಗಾಂಧಿಯೇತರ ಮುಖ್ಯಸ್ಥರನ್ನು ಪಡೆದಿದೆ.
ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆಯುವ ಮೂಲಕ ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದರೆ, ಎದುರಾಳಿ ಅಭ್ಯರ್ಥಿ ಶಶಿ ತರೂರ್​ 1072 ಮತಗಳನ್ನು ಮಾತ್ರ ಪಡೆದರು.
ಈ ವರ್ಷ ಆಗಸ್ಟ್ 21 ರಿಂದ ಸೆಪ್ಟೆಂಬರ್ 20ರ ನಡುವೆ ಹೊಸ ಪಕ್ಷದ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಕಾಂಗ್ರೆಸ್ ಕಳೆದ ವರ್ಷ ಅಕ್ಟೋಬರ್‌ನಲ್ಲಿಯೇ ಘೋಷಿಸಿತ್ತು. 2019 ರಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಸತತ ಎರಡನೇ ಸೋಲಿನ ನಂತರ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ರಾಹುಲ್​ ರಾಜೀನಾಮೆ ಬಳಿಕ ಹಂಗಾಮಿ ಅಧ್ಯಕ್ಷರಾಗಿ ಮತ್ತೆ ಪಕ್ಷದ ಆಡಳಿತವನ್ನು ವಹಿಸಿಕೊಂಡ ಸೋನಿಯಾ ಗಾಂಧಿ, ಒಂದು ಗುಂಪಿನ ನಾಯಕರು ಬಹಿರಂಗವಾಗಿ ಬಂಡಾಯ ಎದ್ದಾಗ ಆಗಸ್ಟ್ 2020 ರಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಸಿಡಬ್ಲ್ಯೂಸಿ ಅವರನ್ನು ಮುಂದುವರಿಸಲು ಒತ್ತಾಯಿಸಿತ್ತು. ಇಲ್ಲಿಯವರೆಗೆ ಅವರು ಹಂಗಾಮಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.(ಏಜೆನ್ಸೀಸ್​)
ಕಾಂಗ್ರೆಸ್​ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಕ್ರಮ: ಅಭ್ಯರ್ಥಿ ಶಶಿ ತರೂರ್​ ಬೆಂಬಲಿಗರ ಗಂಭೀರ ಆರೋಪ

123 ಸ್ಥಾನ ಗೆಲ್ತೇವೆ, ಸಂಘಟನೆಗಳೊಂದಿಗೆ ಹೊಂದಾಣಿಕೆಗೂ ಸಿದ್ಧ; ಕುಮಾರಸ್ವಾಮಿ

ಕಾಂಗ್ರೆಸ್​ ಅಧ್ಯಕ್ಷರ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ: ಎಐಸಿಸಿಗೆ ಖರ್ಗೆ ಸಾರಥ್ಯ ಖಚಿತ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 + eleven =
Remember me
