ನವದೆಹಲಿ:ಐಫೋನ್​ ಕೊಡಿಸುವುದಾಗಿ ಭರವಸೆ ನೀಡಿ, ಹಣ ಪಡೆದುಕೊಂಡು, ಮಾತಿಗೆ ತಪ್ಪಿದ 17 ವರ್ಷದ ಪಿಯು ವಿದ್ಯಾರ್ಥಿಯನ್ನು ಆತನ ಸ್ನೇಹಿತನೇ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಬಾಟ್ಲಾ ಹೌಸ್​ ಏರಿಯಾದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಈ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿರುವುದಾಗಿ ದೆಹಲಿಯ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಆರಂಭದಲ್ಲಿ ಈ ಪ್ರಕರಣ ಬೇರೆ ತಿರುವು ಪಡೆದುಕೊಂಡಿತ್ತು. ಗುರಿತಪ್ಪಿದ ನಿಗೂಢ ಗುಂಡು ವಿದ್ಯಾರ್ಥಿಗೆ ತಗುಲಿ ಮೃತಪಟ್ಟಿದ್ದಾನೆಂದು ಮೊದಲು ನಂಬಲಾಗಿತ್ತು. ಆದರೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಅಬ್ದುಲ್ಲಾನ ಸ್ನೇಹಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಿದ್ದಿದೆ.
ತನಿಖೆ ಆರಂಭಿಸಿದ ಪೊಲೀಸರಿಗೆ ಮೃತ ಅಬ್ದುಲ್ಲಾ, ಖಾಲಿದ್ ಎಂಬಾತನಿಂದ ಐಫೋನ್ ಕೊಡಿಸುವುದಾಗಿ ಹೇಳಿ 72,000 ರೂಪಾಯಿಗಳನ್ನು ತೆಗೆದುಕೊಂಡಿದ್ದ ಎಂಬುದು ತಿಳಿದುಬಂದಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಖಾಲಿದ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಖಾಲಿದ್​ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.
ಅಬ್ದುಲ್ಲಾ ಐಫೋನ್ ನೀಡಲಿಲ್ಲ ಮತ್ತು ಹಣವನ್ನೂ ಹಿಂದಿರುಗಿಸಲಿಲ್ಲ. ಇದೇ ವಿಚಾರವಾಗಿ ಇಬ್ಬರ ನಡುವೆ ನಡೆದ ಗಲಾಟೆಯಲ್ಲಿ ಅಬ್ದುಲ್ಲಾಗೆ ಗುಂಡಿಟ್ಟು ಹತ್ಯೆ ಮಾಡಿದ್ದಾಗಿ ಖಾಲಿದ್​ ತಪ್ಪೊಪ್ಪಿಕೊಂಡಿದ್ದಾನೆ.(ಏಜೆನ್ಸೀಸ್​)
ಸರ್ಜಾ ಕುಟುಂಬಕ್ಕೆ ಹೊಸ ಅತಿಥಿ ಆಗಮನ: ಹೆಣ್ಣು ಮಗುವಿಗೆ ಜನ್ಮ ನೀಡಿದ ಧ್ರುವ ಸರ್ಜಾ ಪತ್ನಿ ಪ್ರೇರಣಾ

ರಸ್ತೆಯಲ್ಲಿ ಸಿಕ್ಕ 45 ಸಾವಿರ ರೂ. ಹಣವನ್ನು ಹಿಂತಿರುಗಿಸಿ ಮಾನವೀಯತೆ ಮೆರೆದ ತುಮಕೂರು ವ್ಯಕ್ತಿ

ಪಂದ್ಯ ಸೋತಿದ್ದಕ್ಕೆ ಹತಾಶೆಯಿಂದ ಮೈದಾನಕ್ಕೆ ನುಗ್ಗಿದ ಫ್ಯಾನ್ಸ್​: ಕಾಲ್ತುಳಿತದಿಂದ 127 ಮಂದಿ ದುರ್ಮರಣ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 + eleven =
Remember me
