ಚೆನ್ನೈ:ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ರಾಜ್ಯಸಭಾ ಸದಸ್ಯ ಎನ್​​.ಆರ್​. ಇಳಂಗೋವನ್ ಅವರ ಪುತ್ರ ರಾಕೇಶ್​ (22) ಗುರುವಾರ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.
ಸಂಸದರ ಪುತ್ರ ಪುದುಚೇರಿಯಿಂದ ಚೆನ್ನೈಗೆ ಹೆಚ್ಚು ಪ್ರಯಾಣಿಕರೊಂದಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತದ ಸಂಭವಿಸಿದೆ. ರಾಕೇಶ್​ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಪ್ರಯಾಣಿಕ ಗಂಭೀರವಾರ ಗಾಯಗೊಂಡಿದ್ದಾರೆ.‘ಘಟನೆಗೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ರಾಕೇಶ್​ ಮೃತದೇಹವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮಾಜಿ ಹಿರಿಯ ವಕೀಲರಾದ ಎನ್‌ಆರ್ ಇಳಂಗೋವನ್ ಅವರು 2020 ರಲ್ಲಿ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾದರು. ಇದು ಅವರ ಮೊದಲ ಅವಧಿಯಾಗಿದೆ.(ಏಜೆನ್ಸೀಸ್​)
ಯಾರಿಗೆ ಪಂಚರಾಜ್ಯ?; ತಜ್ಞರ ವಿಶ್ಲೇಷಣೆ ಒಳಗೊಂಡ ಫಲಿತಾಂಶದ ಕ್ಷಣ ಕ್ಷಣ ಮಾಹಿತಿಯ ನೇರಪ್ರಸಾರ ಇಲ್ಲಿದೆ

ಪಂಜಾಬ್​ ಆಪ್​ ಸಿಎಂ ಅಭ್ಯರ್ಥಿ ಮನೆಯಲ್ಲಿ ಜಿಲೇಬಿ ತಯಾರಿ: ಸಂಭ್ರಮಾಚರಣೆಗೆ ನಡೆಯುತ್ತಿದೆ ಭಾರೀ ಸಿದ್ಧತೆ

ಪರಿವರ್ತನೆಗೆ ಈ ವಿಡಿಯೋ ನೋಡಿ ಎಂದು ಒಳ ಉಡುಪುಗಳನ್ನು ಪ್ರದರ್ಶಿಸಿದ ನಟಿ ಯಶಿಕಾ! ವಿಡಿಯೋ ವೈರಲ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
