ಅನಂತಪುರ:ಒಂದೇ ಕುಟುಂಬದ ನಾಲ್ವರು ದಿಢೀರ್ ನಾಪತ್ತೆಯಾಗಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರದಲ್ಲಿ ನಡೆದಿದೆ.
ಸಂಗಮೇಶ್​ ಮತ್ತು ಸೈಮೌನಿಕಾ ದಂಪತಿ ಅನಂತಪುರದ ಮಾರುತಿನಗರದ ನಿವಾಸಿಗಳು. ಇಬ್ಬರು 2011ರಲ್ಲಿ ಮದುವೆಯಾಗಿದ್ದಾರೆ. ಲಿಖಿತ ಸರಣ್ಯ, ಲಿಖಿತ ಕಾರ್ತಿಕೇಯನ್​ ಮತ್ತು ಮನಿಕೃಷ್ಣ ಹೆಸರಿನ ಇಬ್ಬರು ಗಂಡುಮಕ್ಕಳು ಹಾಗೂ ಓರ್ವ ಹೆಣ್ಣು ಮಗಳಿದ್ದಾಳೆ.
ಸಂಗಮೇಶ್​ ಅವರು ಕುಟುಂಬದ ನಿರ್ವಹಣೆಗಾಗಿ ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಸಂಗಮೇಶ್​ ಅವರಿಗೆ ಜೀವನದಲ್ಲಿ ಅತಿದೊಡ್ಡ ಆಘಾತವಾಗಿ ಪತ್ನಿ ಸೇರಿದಂತೆ ತನ್ನ ಮೂವರು ಮಕ್ಕಳು ಕೂಡ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ.
ಸಂಗಮೇಶ್​ ಪತ್ನಿ ಮೌನಿಕಾ ಮಕ್ಕಳನ್ನು ಶಾಲೆಗೆ ಬಿಟ್ಟು ಬರುತ್ತೇನೆಂದು ಹೇಳಿ ಸೋಮವಾರ ಬೆಳಗ್ಗೆ ಮನೆ ಬಿಟ್ಟವರು ಮತ್ತೆ ಮನೆಗೆ ಮರಳಿ ಬಂದಿಲ್ಲ. ಮಕ್ಕಳು ಓದುವ ಶಾಲೆ ಮತ್ತು ಅಕ್ಕಪಕ್ಕದಲ್ಲಿ ವಿಚಾರಿಸಿದಾಗಲೂ ಯಾವುದೇ ಮಾಹಿತಿ ಸಿಗದೇ ಇದ್ದಾಗ ಕೊನೆಗೆ ಪೊಲೀಸ್​ ಠಾಣೆಗೆ ಸಂಗಮೇಶ್​ ದೂರು ನೀಡಿದ್ದಾರೆ.
ಸದ್ಯ ನಾಪತ್ತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿರುವುದಾಗಿ ಅನಂತಪುರ ಪೊಲೀಸ್​ ಠಾಣೆಯ ಸರ್ಕಲ್​ ಇನ್ಸ್​ಪೆಕ್ಟರ್​ ಕತ್ತಿ ಶ್ರೀನಿವಾಸನ್​ ಮಾಹಿತಿ ನೀಡಿದ್ದಾರೆ.(ಏಜೆನ್ಸೀಸ್​)
ಪುಷ್ಪಾ ಚಿತ್ರದ ಐಟಂ ಡಾನ್ಸ್​ಗೆ ನಟಿ ಸಮಂತಾ ಪಡೆದಿರುವ ಸಂಭಾವನೆ ಮೊತ್ತ ಕೇಳಿದ್ರೆ ದಂಗಾಗ್ತೀರಾ?
VIDEO| ಬಿಕಿನಿಯಲ್ಲಿ ಸೊಂಟ ಬಳುಕಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಹಾಟ್​ ಬ್ಯೂಟಿ
ಅಪಘಾತದಲ್ಲಿ ಅಪ್ಪು ಅಭಿಮಾನಿ ಸಾವು: ಕೊನೇ ಕ್ಷಣದಲ್ಲಿ ಪತ್ನಿಗೆ ಆತ ಹೇಳಿದ ಕೊನೇ ಮಾತು ಕೇಳಿದ್ರೆ ಮನಕಲಕುತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 2 =
Remember me
