ನವದೆಹಲಿ:ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಸಾಕಷ್ಟು ವಿಡಿಯೋಗಳು ಪೋಸ್ಟ್​ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿಬಿಡುತ್ತವೆ. ಆ ಸಾಲಿಗೆ ಇದೀಗ ಮತ್ತೊಂದು ವಿಡಿಯೋ ಸೇರ್ಪಡೆಯಾಗಿದೆ.
ವಿದ್ಯಾರ್ಥಿನಿಯೊಬ್ಬಳು ತರಗತಿಯೊಳಗೆ ತನ್ನ ಸಹಪಾಠಿಗಳ ಎದುರು ಬಾಲಿವುಡ್​ ಬ್ಯೂಟಿ ಕತ್ರಿನಾ ಕೈಫ್​ ಅವರ “ಚಿಕ್ನಿ ಚಮೇಲಿ” ಐಟಂ ಸಾಂಗ್​ಗೆ ಸಖತ್​ ಆಗಿ ಸೊಂಟ ಬಳುಕಿಸಿದ್ದಾಳೆ. ವಿಡಿಯೋದಲ್ಲಿ ವಿದ್ಯಾರ್ಥಿನಿಯ ಹಿಂದಿರುವ ಬೋರ್ಡ್​ನ ಮೇಲೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು ಎಂದು ಬರೆಯಲಾಗಿದೆ.
ಶಿಕ್ಷಕರ ದಿನದಂದೇ ವಿದ್ಯಾರ್ಥಿನಿ ತನ್ನ ಪ್ರತಿಭೆಯನ್ನು ಸಹಪಾಠಿಗಳ ಎದುರು ಪ್ರದರ್ಶನ ಮಾಡಿದ್ದಾಳೆ. ಹುಡುಗಿ ಕುಣಿದಿರುವ ರೀತಿಗೆ ಇಡೀ ತರಗತಿಯ ಹುಡುಗರು ಹುಚ್ಚೆದು ಕುಣಿದಿದ್ದು, ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸಿದ್ದಾರೆ. ವಿಡಿಯೋವನ್ನು ಯಾವ ಶಿಕ್ಷಣ ಸಂಸ್ಥೆಯಲ್ಲಿ? ಯಾವಾಗ? ಸೆರೆಹಿಡಿಯಲಾಗಿದೆ ಎಂಬುದರ ಮಾಹಿತಿ ಇಲ್ಲ. ಆದರೆ, ಹುಡುಗಿ ತುಂಬಾ ಬೋಲ್ಡ್​ ಆಗಿ ಸೊಂಟ ಬಳುಕಿಸಿರುವ ರೀತಿಗೆ ನೆಟ್ಟಿಗರು ಕೂಡ ಫಿದಾ ಆಗಿದ್ದಾರೆ.

A post shared by FunTaap Official 😎 (@funtaap)

ಫನ್​ಟ್ಯಾಪ್​ ಹೆಸರಿನ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಕೆಲವೇ ದಿನಗಳ ಹಿಂದೆ ವಿಡಿಯೋ ಅಪ್​ಲೋಡ್​ ಮಾಡಲಾಗಿದ್ದು, ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಈಗಾಗಲೇ 1.48 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದ್ದು, 12 ಸಾವಿರಕ್ಕೂ ಹೆಚ್ಚು ಲೈಕ್ಸ್​ ಹರಿದುಬಂದಿದೆ. ಹುಡುಗಿಯ ಡಾನ್ಸ್​ ಮೋಡಿಗೆ ಎಲ್ಲರೂ ಫಿದಾ ಆಗಿದ್ದಾರೆ.(ಏಜೆನ್ಸೀಸ್​)
ಕರ್ನಾಟಕದತ್ತಲ್ಲೂ ಹೆಜ್ಜೆ ಹಾಕುತ್ತಿದೆ ಭಾರತ ಐಕ್ಯತಾ ಯಾತ್ರೆ: ಸರ್ವರಿಗೂ ಕಾಂಗ್ರೆಸ್ ಮುಕ್ತ ಆಹ್ವಾನ

ಹೈದರಾಬಾದ್​ನಲ್ಲಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಬಂದ ಡೆವಿಲ್​ ಫಿಶ್ ನೋಡಲು ಮುಗಿಬಿದ್ದ ಜನರು!

ಅಕ್ರಮ ಸಂಬಂಧಕ್ಕೆ ಬೇಸತ್ತು ತವರು ಸೇರಿದರೂ ಬಿಡದ ಅಥಣಿ ಪತಿ! ಎರಡು ಸುತ್ತು ಗುಂಡು ಹಾರಿಸಿದ ಭೂಪ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 4 =
Remember me
