ನವದೆಹಲಿ:ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಕೊಟ್ಟಿರುವ ಹರ್​ ಘರ್​ ತಿರಂಗಾ ಅಭಿಯಾನ ಇಂದಿನಿಂದ ಆರಂಭವಾಗಿದ್ದು, ಇಂದು ಬೆಳಗ್ಗೆ ದೇಶದ ಹಲವಡೆ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ದೇಶಪ್ರೇಮದ ಕಹಳೆಯನ್ನು ಮೊಳಗಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್​ ಅವರು ದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮ ಪತ್ನಿಯೊಂದಿಗೆ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
#WATCH| Delhi: Union Home Minister Amit Shah and his wife Sonal Shah hoist the tricolour at their residence as the#HarGharTirangacampaign begins today.pic.twitter.com/nvxJTgK7nC
— ANI (@ANI)August 13, 2022

ಉತ್ತರಾಖಂಡದಲ್ಲಿ 14,000 ಅಡಿ ಎತ್ತರದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಸಿಬ್ಬಂದಿ ರಾಷ್ಟ್ರಧ್ವಜ ಹಾರಿಸುವ ಮೂಲಕ ಆಕಾಶದ ಎತ್ತರಕ್ಕೂ ದೇಶಾಭಿಮಾನ ಮುಟ್ಟುವಂತೆ ಘೋಷಣೆ ಕೂಗಿದರು.
#WATCH|#HarGharTirangacampaign by Indo-Tibetan Border Police (ITBP) personnel at 14,000 ft altitude in Uttarakhand.
(Video Source: ITBP)pic.twitter.com/AdYCBURbLE
— ANI (@ANI)August 13, 2022

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ತಮ್ಮ ​ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಅಭಿಯಾನಕ್ಕೆ ಕೈಜೋಡಿಸಿದರು. ಸಚಿವ ಮುರುಗೇಶ್​ ನಿರಾಣಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕ ನಾಯಕರು ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ.

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್​ ಸಹ ತಮ್ಮ ಗೃಹ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದರು. ದೇಶದ ಜನರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದು, ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮವನ್ನು ಮೆರೆಯುತ್ತಿದ್ದಾರೆ.
ಅಮೃತ ಭಾರತ: ಹೋರಾಟಕ್ಕೆ ಕೆಚ್ಚು ತುಂಬಿದ ಭಾರತ

ಬಾಲಿವುಡ್​ಗೆ ತಟ್ಟಿದ ಬಾಯ್ಕಾಟ್​ ಬಿಸಿ: ಲಾಲ್​ಸಿಂಗ್​, ರಕ್ಷಾ ಬಂಧನ್​ಗೆ ಪ್ರೇಕ್ಷಕರ ಪೆಟ್ಟು…

ಪ್ರಭಾವಿ ಭ್ರಷ್ಟರಿಗೆ ಲೋಕಾ ನಡುಕ ಶುರು; ಭ್ರಷ್ಟಾಚಾರ ಆರೋಪದಲ್ಲಿ ಕೇಸ್​ ದಾಖಲಿಸಲು ಸ್ವತಂತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 13 =
Remember me
