ಹೈದರಾಬಾದ್​:ಸಾಮಾಜಿಕ ಜಾಲತಾಣದಲ್ಲಿ ವೇಷ ಮರೆಸಿಕೊಂಡಿರುವ ಕೆಲವು ಕಿಡಿಗೇಡಿಗಳು ಇನ್ನೊಬ್ಬರಿಗೆ ತೊಂದರೆ ಕೊಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಇದೀಗ ಟೇಬಲ್​ ಟೆನ್ನಿಸ್​ ಆಟಗಾರ್ತಿ ನೈನಾ ಜೈಸ್ವಾಲ್​ ಅವರನ್ನು ಟಾರ್ಗೆಟ್​ ಮಾಡಿರುವ ಕಿಡಿಗೇಡಿಯೊಬ್ಬ ಅಶ್ಲೀಲ ಸಂದೇಶಗಳೊಂದಿಗೆ ಅವರಿಗೆ ಕಿರುಕುಳ ನೀಡುತ್ತಿದ್ದು, ನೈನಾ ತಂದೆ ಸೈಬರ್​ ಕ್ರೈಂ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.
ಶ್ರೀಕಾಂತ್​ ಹೆಸರಿನ ಯುವಕನೊಬ್ಬ ಟ್ವಿಟರ್​ ಮತ್ತು ಇನ್​ಸ್ಟಾಗ್ರಾಂನಲ್ಲಿ ನೈನಾಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದಾನೆ. ಸಾಕಷ್ಟು ಬಾರಿ ಎಚ್ಚರಿಕೆ ನೀಡಿದಾದರೂ, ಕಿಡಿಗೇಡಿ ತನ್ನ ವರ್ತನೆಯನ್ನು ಬದಲಿಸಿಕೊಂಡಿಲ್ಲ. ಪೊಲೀಸರಿಂದ ಎಚ್ಚರಿಕೆ ನೀಡಿದರೂ ಕ್ಯಾರೆ ಎನ್ನದೇ ತನ್ನ ದುರ್ಬುದ್ಧಿಯನ್ನು ಮುಂದುವರಿಸಿದ್ದಾನೆ. ಮತ್ತೆ ಜಾಲತಾಣದಲ್ಲಿ ಅಶ್ಲೀಲವಾಗಿ ಕಾಮೆಂಟ್​ ಮಾಡುತ್ತಿದ್ದಾರೆ. ಇದನ್ನು ಇಲ್ಲಿಗೆ ಬಿಟ್ಟರೆ ಸರಿಹೋಗುವುದಿಲ್ಲ ಎಂದರಿತಿರುವ ನೈನಾ ತಂದೆ ಅಶ್ವಿನ್​ ಇದೀಗ ಸೈಬರ್​ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.
ಟೇಬಲ್ ಟೆನ್ನಿಸ್​ ಆಟಗಾರ್ತಿಯಾಗಿ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವ ನೈನಾ, ತಮ್ಮ ಅಗಾಧ ಬುದ್ಧಿಶಕ್ತಿಯಿಂದಲೂ ಖ್ಯಾತಿ ಪಡೆದಿದ್ದಾರೆ. ಏಕೆಂದರೆ, 8ನೇ ವಯಸ್ಸಿಗೆ ಹತ್ತನೇ ತರಗತಿ ಮುಗಿಸಿ, 13ನೇ ವಯಸ್ಸಿನಲ್ಲಿ ಪದವಿ, 15ನೇ ವಯಸ್ಸಿಗೆ ಸ್ನಾತಕೋತ್ತರ ಪದವಿ ಮುಗಿಸಿದ ಈಕೆ ಏಷ್ಯಾದಲ್ಲೇ ಅತ್ಯಂತ ಕಿರಿಯ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಗೌರವಕ್ಕೆ ಪಾತ್ರಳಾಗಿದ್ದಾರೆ. ಮೋಟಿವೇಶನಲ್ ಸ್ಪೀಕರ್ ಆಗಿ ಮಿಂಚುತ್ತಿರುವ ನೈನಾ ಜೈಶ್ವಾಲ್ ಇತ್ತೀಚೆಗಷ್ಟೇ ತನ್ನ ತಾಯಿ ಭಾಗ್ಯಲಕ್ಷ್ಮಿಯೊಂದಿಗೆ ಎಲ್​ಎಲ್​ಬಿ ಸೇರಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.(ಏಜೆನ್ಸೀಸ್​)
ಚಿಕನ್ ಪೀಸ್​ನಲ್ಲಿ ಗಾಂಜಾ ಸಾಗಿಸಿ ಕೈದಿಗಳಿಗೆ ಸರಬರಾಜು ಮಾಡ್ತಿದ್ದ ಚಾಲಾಕಿಗಳು ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

ಬೆಳ್ಳಂಬೆಳಗ್ಗೆ ಕರ್ತವ್ಯಕ್ಕೆ ಹಾಜರಾದ PSI​ ದುರಂತ ಸಾವು: ಠಾಣೆ ಒಳಗೆ ಕಾಲಿಡುತ್ತಿದ್ದಂತೆ ನಡೆಯಿತು ದುರಂತ

ದುಷ್ಕರ್ವಿುಯಿಂದ ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿತ: ತುಂಡಾದ ನರಗಳು, ಕಣ್ಣು ಕಳೆದುಕೊಳ್ಳುವ ಸಾಧ್ಯತೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × one =
Remember me
