ಬಲರಾಮಪುರ:ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಸಹೋದರನ ಅಂತ್ಯಕ್ರಿಯೆಗೆ ಬಂದಿದ್ದ ವ್ಯಕ್ತಿಯು ಕೂಡ ಹಾವು ಕಡಿತಕ್ಕೊಳಗಾಗಿ ಸಾವಿಗೀಡಾಗಿರುವ ದುರಾದೃಷ್ಟಕರ ಘಟನೆ ಉತ್ತರ ಪ್ರದೇಶದ ಬಲರಾಮಪುರದಲ್ಲಿ ನಡೆದಿರುವುದಾಗಿ ಗುರುವಾರ ಪೊಲೀಸರು ತಿಳಿಸಿದ್ದಾರೆ.
ಹಾವು ಕಡಿತದಿಂದ ಮೃತಪಟ್ಟ ಅಣ್ಣ ಅರವಿಂದ್​ ಮಿಶ್ರಾ (38) ಅಂತ್ಯಕ್ರಿಯೆಗೆಂದು ಗೋವಿಂದ ಮಿಶ್ರಾ (22) ಎಂಬಾತ ಬುಧವಾರ ಭವಾನಿಪುರಕ್ಕೆ ಬಂದಿದ್ದ. ವಿಧಿವಿಧಾನಗಳನ್ನು ಮುಗಿಸಿ ರಾತ್ರಿ ಮನೆಯಲ್ಲಿ ಮಲಗಿರುವಾಗ ಹಾವು ಕಚ್ಚಿ ಮೃತಪಟ್ಟಿದ್ದಾನೆ. ಗೋವಿಂದನ ಜೊತೆಯಲ್ಲಿ ಸಂಬಂಧಿ ಚಂದ್ರಶೇಖರ್​ ಪಾಂಡೆ (22) ಮಲಗಿದ್ದ. ಆತನಿಗೂ ಹಾವು ಕಚ್ಚಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ಸರ್ಕಲ್​ ಇನ್ಸ್​ಪೆಕ್ಟರ್​ ರಾಧಾ ರಮಣ್​ ಸಿಂಹ್​ ಮಂಗಳವಾರ ತಿಳಿಸಿದ್ದಾರೆ.
ಗೋವಿಂದ ಮಿಶ್ರಾ ಮತ್ತು ಚಂದ್ರಶೇಖರ್ ಪಾಂಡೆ ಇಬ್ಬರೂ ಅರವಿಂದ ಮಿಶ್ರಾ ಅವರ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ಲುಧಿಯಾನದಿಂದ ಗ್ರಾಮಕ್ಕೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಹಿರಿಯ ವೈದ್ಯಕೀಯ ಮತ್ತು ಆಡಳಿತ ಅಧಿಕಾರಿಗಳು ಗುರುವಾರ ಗ್ರಾಮಕ್ಕೆ ಭೇಟಿ ನೀಡಿದರು. ಸ್ಥಳೀಯ ಶಾಸಕ ಕೈಲಾಶ್ ನಾಥ್ ಶುಕ್ಲಾ ಅವರು ದುಃಖತಪ್ತ ಕುಟುಂಬವನ್ನು ಭೇಟಿಯಾಗಿ ಅವರಿಗೆ ಸಹಾಯ ಮಾಡುವ ಭರವಸೆ ನೀಡಿದ್ದಾರೆ. ಅಲ್ಲದೆ, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಶುಕ್ಲಾ ಅವರು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.(ಏಜೆನ್ಸೀಸ್​)
ಕೈದಿ 2ನೇ ಭಾಗದಲ್ಲಿ ದಿಲ್ಲಿ ಎದುರು ಅಬ್ಬರಿಸಲಿದ್ದಾರಾ ರೋಲೆಕ್ಸ್ ಸರ್​? ನಟ ಸೂರ್ಯ ಉತ್ತರ ಹೀಗಿತ್ತು….

ಮಂಡ್ಯದಲ್ಲಿ ರುಂಡವಿಲ್ಲದ ಮೃತದೇಹ ಪತ್ತೆ ಕೇಸ್​: 2 ತಿಂಗಳ ನಂತ್ರ ಮಹಿಳೆಯರಿಬ್ಬರ ಮರ್ಡರ್ ಮಿಸ್ಟರಿ ಬಯಲು

ಯಾದಗಿರಿಯಲ್ಲಿ ಕಾರು-ಲಾರಿ ನಡುವೆ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 6 ಮಂದಿ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
