ನವದೆಹಲಿ:ರಾಜ್ಯದಲ್ಲಿ ಎಬ್ಬಿರುವ ಹಿಜಾಬ್​ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಈಗಾಗಲೇ ಹೈಕೋರ್ಟ್​ ಏಕ ಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ಹಿಜಾಬ್​ ಪ್ರಕರಣ ವರ್ಗಾವಣೆ ಆಗಿದೆ. ಫೆ. 14ಕ್ಕೆ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೆ ತಕ್ಷಣ ಶಾಲಾ-ಕಾಲೇಜು ತೆರೆಯುವಂತೆ ಮತ್ತು ಆದೇಶ ಬರುವವರೆಗೂ ಯಾವುದೇ ಧಾರ್ಮಿಕ ಉಡುಪು ಧರಿಸದಂತೆ ಹೈಕೋರ್ಟ್​ ವಿಸ್ತೃತ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.
ಇದೀಗ ಹೈಕೋರ್ಟ್​ ನೀಡಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಉಲ್ಲೇಖಿಸಲಿದ್ದಾರೆ. ಗುರುವಾರ ಸಂಜೆಯಷ್ಟೇ ಶಾಲಾ-ಕಾಲೇಜುಗಳಲ್ಲಿ ಡ್ರೆಸ್ ಕೋಡ್ ಕುರಿತು ಕರ್ನಾಟಕ ಸರ್ಕಾರದ ನಿಯಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ತುರ್ತಾಗಿ ಪಟ್ಟಿ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅದನ್ನು ಮೊದಲು ಹೈಕೋರ್ಟ್ ಆಲಿಸಲಿ ಎಂದು ಹೇಳಿದೆ.
ಇನ್ನೊಂದೆಡೆ ಪರಿಸ್ಥಿತಿಯನ್ನು ನೋಡಿಕೊಂಡು ಎರಡು ಹಂತದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲಿ ಪ್ರೌಢಶಾಲೆಯನ್ನು ಆರಂಭಿಸಲಾಗುವುದು. ಇದಾದ ಬಳಿಕ ಎರಡನೇ ಹಂತದಲ್ಲಿ ಕಾಲೇಜುಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಲಿದೆ. ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ನಂತರ ಕಾಲೇಜು ಆರಂಭಿಸಲು ಸರ್ಕಾರ ಮುಂದಾಗಿದೆ.(ಏಜೆನ್ಸೀಸ್​)
ಹೊರಗಡೆ ಹೋಗಿ ಮನೆಗೆ ಬಂದಾಗ ಕಾದಿತ್ತು ಶಾಕ್​: ಮಗಳ ಸ್ಥಿತಿಯನ್ನು ಕಂಡು ಕುಸಿದುಬಿದ್ದ ಪಾಲಕರು

ಹೊರ ಆವರಣದಲ್ಲಿ ಅರೆಬೆತ್ತಲೆ ಸ್ನಾನ: ವಿಡಿಯೋ ಶೇರ್​ ಮಾಡಿದ ನಟಿಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ

ಸಾರಿಗೆ ನೌಕರರಿಗೆ ಸಿಹಿ ಸುದ್ದಿ; ವಜಾ ಆಗಿದ್ದವರ ಮರು ನೇಮಕ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
