ಹೈದರಾಬಾದ್​:ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನ ಬೇಗುಂ ಬಜಾರ್​ನಲ್ಲಿ ನಡೆದಿದೆ. ಐದು ಮಂದಿಯ ಗ್ಯಾಂಗ್​ ಯುವನನ್ನು ನಡುರಸ್ತೆಯಲ್ಲೇ ಕುಟುಂಬದ ಎದುರಲ್ಲೇ ಮಾರಕಾಸ್ತ್ರಗಳಿಂದ ಇರಿದು ಕೊಂದಿದ್ದಾರೆ.
ಈ ಘಟನೆ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಶಾಹಿನಾಯತ್‌ಗುಂಜ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈವರೆಗೂ ಕೊಲೆಗಾರರ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ದೊರೆತಿಲ್ಲ. ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.
ಮೃತ ಯುವಕನನ್ನು ನೀರಜ್​ ಪನ್ವಾರ್ (21)​ ಎಂದು ಗುರುತಿಸಲಾಗಿದೆ. ಈತ ಬೇರೊಂದು ಜಾತಿಯ ಯುವತಿಯನ್ನು ಮದುವೆ ಆಗಿದ್ದ. ಇಬ್ಬರ ಮದುವೆ ಯುವತಿ ಮನೆಯವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಿರೋಧದ ನಡುವೆಯೂ ಮದುವೆಯಾಗಿದ್ದರು. ದಂಪತಿಗೆ ಎರಡೂವರೆ ತಿಂಗಳ ಹಸಿಗೂಸಿದೆ. ನೀರಜ್​ ಪನ್ವಾರ್​ ಬೇಗುಂ ಬಜಾರ್​ನಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದನು.
ಯುವತಿಯ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ನೀರಜ್​ಗೆ ತಲೆ, ಎದೆ ಹಾಗೂ ಇನ್ನಿತರ ಭಾಗಗಳಿಗೆ ಇರಿದು ಕೊಂದಿದ್ದಾರೆ. ನೀರಜ್​ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.
ನೀರಜ್​ ಸಾವಿನ ಬಗ್ಗೆ ಆತನ ತಂದೆ ಮಾತನಾಡಿದ್ದು, ಪ್ರೇಮ ವಿವಾಹವಾಗಿದ್ದಕ್ಕೆ ನನ್ನ ಮಗನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಿಂದಿನಿಂದ ಆತನಿಗೆ ಸಾಕಷ್ಟು ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಆರೋಪಿಸಿದ್ದಾರೆ.(ಏಜೆನ್ಸೀಸ್​)
ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕ್ರೂಸರ್​ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ 7 ಮಂದಿ ದುರ್ಮರಣ

ಕಾಣೆಯಾದವರ ಸುತ್ತ ಕಣ್ಣಾಮುಚ್ಚಾಲೆ; ವಿಜಯವಾಣಿ ಸಿನಿಮಾ ವಿಮರ್ಶೆ

ಡಿಂಗರ್ ಬಿಲ್ಲಿ ಬೇಬಿ ಡಾಲ್!; 7 ವರ್ಷಗಳ ಬಳಿಕ ಕನ್ನಡಕ್ಕೆ ಸನ್ನಿ ವಾಪಸ್…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 3 =
Remember me
