ನವದೆಹಲಿ:ಹೈದರಾಬಾದ್​ಗೆ ಬಂದಿಳಿಯಬೇಕಾಗಿದ್ದ ಇಂಡಿಗೋ ವಿಮಾನ ಪಾಕಿಸ್ತಾನದ ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವುದಾಗಿ ಭಾನುವಾರ ವರದಿಯಾಗಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಕಾಣಸಿಕೊಂಡಿದೆ ಎಂದು ಪೈಲಟ್​ ಎಚ್ಚರಿಕೆ ನೀಡಿದ ಬೆನ್ನಲ್ಲೇ ಯುನೈಟೆಡ್​ ಅರಬ್​ ಎಮಿರೇಟ್ಸ್​ನ​ ಶಾರ್ಜಾದಿಂದ ಬರುತ್ತಿದ್ದ 6ಇ-1406 ನಂಬರ್​ನ ಇಂಡಿಗೋ ವಿಮಾನವನ್ನು ಮುನ್ನೆಚ್ಚರಿಕಾ ಕ್ರಮವಾಗಿ ಪಾಕಿಸ್ತಾನದ ಕರಾಚಿ ಕಡೆಗೆ ತಿರುಗಿಸಲಾಯಿತು ಎಂದು ಇಂಡಿಗೋ ವಿಮಾನ ಸಂಸ್ಥೆ ತಿಳಿಸಿದೆ.
ಅದೃಷ್ಟವಶಾತ್​ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಕರಾಚಿಯಿಂದ ಪ್ರಯಾಣಿಕರನ್ನು ಹೈದರಾಬಾದ್​ಗೆ ವಾಪಸ್​ ಕರೆತರಲು ಮತ್ತೊಂದು ವಿಮಾನವನ್ನು ಕಳುಹಿಸಿಕೊಡಲಾಗಿದೆ ಎಂದು ದೇಶದ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಇಂಡಿಗೋ ತಿಳಿಸಿದೆ.
ವಿಮಾನದ ಎರಡನೇ ಇಂಜಿನ್​ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ಕೂಡ ಮಾಹಿತಿ ನೀಡಿವೆ. ಕಳೆದ ಎರಡು ವಾರದಲ್ಲಿ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಭಾರತದ ಎರಡನೇ ವಿಮಾನ ಇದಾಗಿದೆ. ಈ ತಿಂಗಳ ಆರಂಭದಲ್ಲಿ ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಸ್ಪೈಸ್​ಜೆಟ್ ವಿಮಾನವನ್ನು ಕರಾಚಿಗೆ ತಿರುಗಿಸಲಾಗಿತ್ತು.(ಏಜೆನ್ಸೀಸ್​)
VIDEO| ತುಂಡುಡುಗೆ ತೊಟ್ಟು ಮುಜುಗರಕ್ಕೀಡಾದ ರಶ್ಮಿಕಾಗೆ ಏನಮ್ಮಾ ನಿನ್ನ ಫಜೀತಿ ಎಂದ ನೆಟ್ಟಿಗರು!

ಜೂಜಾಟಕ್ಕೆ ಪೊಲೀಸ್​ ಪೇದೆ ಬಲಿ: ರಮ್ಮಿ ಆಡಲು ಮಾಡಿದ್ದ ಸಾಲದ ಮೊತ್ತ ಕೇಳಿದ್ರೆ ಶಾಕ್​ ಆಗುತ್ತೆ!

ಸುಖಾಸುಮ್ಮನೆ ವಾಹನ ತಡೆಯದಂತೆ ಜಿಲ್ಲಾ ಎಸ್‌ಪಿಗಳಿಗೆ ಡಿಜಿಪಿ ಪ್ರವೀಣ್​ ಸೂದ್​ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
