ಜೈಪುರ:ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಓರ್ವ ಚಾಲಕ ಮತ್ತು 5 ವಿದ್ಯಾರ್ಥಿಗಳು ಸೇರಿ ಒಟ್ಟು 6 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ರಾಜಸ್ಥಾನ ರಾಜಧಾನಿ ಜೈಪುರದ ಬಳಿಯ ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.
ಪರೀಕ್ಷೆ ಬರೆಯಲು ತೆರಳುವಾಗ ನಿಂತಿದ್ದ ಲಾರಿಗೆ ವೇಗವಾಗಿ ಬಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಆರು ಮಂದಿಯು ಸ್ಥಳದಲ್ಲೇ ಸಾವಿಗೀಡಾಗಿದ್ದು, ಕೆಲವರು ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಜೈಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಘಟನೆ ಸಂಬಂಧ ದೂರು ದಾಖಲಾಗಿದ್ದು, ತನಿಖೆಯು ಆರಂಭವಾಗಿದೆ.
ಆದಾಗ್ಯೂ, ಅತೀ ವೇಗ, ನಿರ್ಲಕ್ಷ್ಯ ಮತ್ತು ಕುಡಿದು ಚಾಲನೆ ಮಾಡುವುದು ಸೇರಿ ವಿವಿಧ ಅಂಶಗಳಿಂದ ಭಾರತದಲ್ಲಿ ರಸ್ತೆ ಅಪಘಾತಗಳು ಉಂಟಾಗುತ್ತವೆ. ಈ ಅಪಘಾತಗಳು ಸಂತ್ರಸ್ತರ ಕುಟುಂಬಗಳ ಮೇಲೆ ಶಾಶ್ವತ ಪ್ರಭಾವ ಬೀರುತ್ತವೆ. ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ ಎಂದು ಅಂಕಿ-ಅಂಶಗಳು ತೋರಿಸುತ್ತವೆ. ವೇಗದ ಚಾಲನೆ, ಹೆಲ್ಮೆಟ್ ಕೊರತೆಯಂತಹ ಹಲವಾರು ಕಾರಣಗಳಿಂದ ಅನೇಕ ಜನರು ರಸ್ತೆ ಅಪಘಾತಗಳಲ್ಲಿ ತಮ್ಮ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಅಪಘಾತದಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಪ್ರತಿದಿನ ದೇಶದಲ್ಲಿ ಸರಾಸರಿ 1230 ಅಪಘಾತಗಳು ನಡೆದರೆ, ಸುಮಾರು 414 ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಪ್ರತಿ ಗಂಟೆಗೆ ದೇಶದಲ್ಲಿ 51 ಅಪಘಾತಗಳು ಸಂಭವಿಸುತ್ತಲೇ ಇವೆ. ಕೇವಲ ಒಂದು ಗಂಟೆ ಸಮಯದಲ್ಲಿ 17 ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ ಎಂದು ಅಂಕಿ-ಅಂಶಗಳು ತೋರಿಸಿವೆ.(ಏಜೆನ್ಸೀಸ್​)
ಬಾ ನಲ್ಲೆ ಮಧುಚಂದ್ರಕೆ ಫಿಲ್ಮ್​ ನೋಡಿ ಪತ್ನಿ ಹತ್ಯೆಗೆ ಸಂಚು: ಪೊಲೀಸರ ಮುಂದೆ ಸ್ಫೋಟಕ ರಹಸ್ಯ ಬಿಚ್ಚಿಟ್ಟ ಗಂಡ!

ನಿನ್ನ ಜತೆ ಮಾತನಾಡಬೇಕಿದೆ ಬಾ…! ಪ್ರಿಯಕರನನ್ನು ನಂಬಿ ಹೋದ ಪ್ರೇಯಸಿಯ ದುರಂತ ಸಾವು

ಪ್ರೀತಿಸಿ ಮದ್ವೆ ಆದವಳು ಪಕ್ಕದ ಮನೆಯವನ ಜತೆ ಎಸ್ಕೇಪ್! ಮನನೊಂದು ಗಂಡ ಆತ್ಮಹತ್ಯೆಗೆ ಶರಣು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 2 =
Remember me
