ಕೋಲ್ಕತ:ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸಿದ ಕಚ್ಚಾ ಬಾದಾಮ್ ಖ್ಯಾತಿಯ ಗಾಯಕ ಭುವನ್​ ಬದ್ಯಕರ್​​ ಸೋಮವಾರ (ಫೆ.28) ರಾತ್ರಿ ಕಾರು ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಚ್ಚಾ ಬಾದಾಮ್​ ಹಾಡಿನ ಮೂಲಕ ಗಳಿಸಿದ ಹಣದಲ್ಲಿ ಭುವನ್​ ಇತ್ತೀಚೆಗಷ್ಟೇ ಸೆಕೆಂಡ್​ ಹ್ಯಾಂಡ್​ ಕಾರು ಖರಿದೀಸಿದ್ದಾರೆ. ನಿನ್ನೆ ಕಾರು ಓಡಿಸುವುದನ್ನು ಕಲಿಯುವಾಗ ಅಪಘಾತವಾಗಿದ್ದು, ಎದೆಗೆ ನೋವಾಗಿದೆ. ಹೀಗಾಗಿ ಭುವನ್​ ಅವರು ಸುರಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಶೀಘ್ರ ಗುಣಮುಖರಾಗಲು ಅಭಿಮಾನಿಗಳು ಮತ್ತು ಕುಟುಂಬಸ್ಥರು ಪ್ರಾರ್ಥಿಸಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಹಲ್​ಚಲ್​ ಎಬ್ಬಿಸಿದ ಹಾಡೆಂದರೆ ಅದು ಕಚ್ಚಾ ಬಾದಾಮ್. ಫೇಸ್​ಬುಕ್​, ಟ್ವಿಟರ್​, ಯೂಟ್ಯೂಬ್​ ಮತ್ತು ಇನ್​ಸ್ಟಾಗ್ರಾಂ ಎಲ್ಲಿ ನೋಡಿದರೂ ಬರೀ ಕಚ್ಚಾ ಬಾದಾಮ್​ ರೀಮಿಕ್ಸ್​ ಹಾಡೇ ಕಣ್ಣು ಮುಂದೆ ಮೊದಲು ಬರುತ್ತಿದೆ. ಇದೇ ಹಾಡನ್ನು ಕೇಳಿ ಕೇಳಿ ಸುಸ್ತಾದ ಎಷ್ಟೋ ಮಂದಿ ಸಿಕ್ಕಾಪಟ್ಟೆ ಟ್ರೋಲ್​ ಕೂಡ ಮಾಡಿದ್ದಾರೆ. ಎಷ್ಟರಮಟ್ಟಿಗೆ ಈ ಹಾಡು ಹಿಟ್​ ಆಗಿದೆ ಅಂದರೆ, ಯೂಟ್ಯೂಬ್​ನಲ್ಲಿ ಬರೋಬ್ಬರಿ 50 ಮಿಲಿಯನ್​ ವೀಕ್ಷಣೆ ಪಡೆದುಕೊಂಡಿದೆ. ಈ ಹಾಡಿನಿಂದ ಭುವನ್​ ರಾತ್ರೋರಾತ್ರಿ ಸೋಶಿಯಲ್​ ಮೀಡಿಯಾ ಸೆನ್ಸೇಷನ್ ಆಗಿ ಹೊರಹೊಮ್ಮಿದ್ದಾರೆ.
ಪಶ್ಚಿಮ ಬಂಗಾಳದ ಬಿರ್​ಭಮ್​ ಜಿಲ್ಲೆಯ ನಿವಾಸಿ ಆಗಿರುವ ಭುವನ್​ ಕಚ್ಚಾ ಬಾದಾಮ್​ ಹಾಡು ಹೇಳಿಕೊಂಡು ಊರೂರು ತಿರುಗುತ್ತಾ ಕಡಲೆಕಾಯಿ ಮಾರಾಟ ಮಾಡಿ ಒಂದೆರೆಡು ಕಾಸು ಸಂಪಾದನೆ ಮಾಡುತ್ತಿದ್ದರು. ಅವರ ಹಾಡನ್ನು ಗುರುತಿಸಿದ ಗೋಧುಲಿಬೆಲಾ ಮ್ಯೂಸಿಕ್​ ಕಂಪನಿ ರೀಮಿಕ್ಸ್​ ಮಾಡಿ, ಭುವನ್​ ಕೈಯಲ್ಲೇ ಹಾಡಿಸಿದ್ದಾರೆ. ಇದಾದ ಬಳಿಕ ಭುವನ್​ ಬದುಕೇ ಬದಲಾಗಿದೆ.
ಕಚ್ಚಾ ಬಾದಾಮ್​ ಒರಿಜಿನಲ್​ ಸಾಂಗ್​ ಅನ್ನು ರೀಮಿಕ್ಸ್​ ಮಾಡಲು ಸಂಭಾವನೆಯಾಗಿ ಭುವನ್​ಗೆ 3 ಲಕ್ಷ ರೂ. ನೀಡಲಾಗಿದೆ ಎಂದು ತಿಳಿದುಬಂದಿದೆ. ಕಡಲೆಕಾಯಿ ಮಾರಾಟ ಮಾಡಿ ದಿನದೂಡುತ್ತಿದ್ದ ಭುವನ್​ ಇದೀಗ ಕಚ್ಚಾ ಬಾದಾಮ್​ ಮೂಲಕ ಖ್ಯಾತಿಯಾಗಿದ್ದು, ಸಾಕಷ್ಟು ಅವಕಾಶಗಳು ಹುಡುಕಿಕೊಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅವರ ಲಕ್​ ಬದಲಾಗಿದೆ. ಆದರೆ, ಇದೀಗ ಅಪಘಾತವಾಗಿರುವುದು ಕುಟುಂಬಸ್ಥರಿಗೆ ಆಘಾತವಾಗಿದ್ದು, ಸದ್ಯ ಭುವನ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.(ಏಜೆನ್ಸೀಸ್​)
ಜಾಲತಾಣದಲ್ಲಿ ಧೂಳೆಬ್ಬಿಸಿದ ಕಚ್ಚಾ ಬಾದಾಮ್​ ಹಾಡಿಗೆ ಭುಬನ್ ಪಡೆದ ಹಣದ ಮೊತ್ತ ಕೇಳಿದ್ರೆ ಅಚ್ಚರಿ ಖಂಡಿತ!

ಮೀನುಗಾರರ ಬಲೆಗೆ ಬಿದ್ದ 800 ಕೆಜಿ ತೂಕದ ಈ ದೈತ್ಯ ಮೀನಿನ ಬೆಲೆ ಕೇಳಿದ್ರೆ ನಿಜಕ್ಕೂ ದಂಗಾಗ್ತೀರಾ!

ಎತ್ತಿನಗಾಡಿಯ ರೀತಿ ತಡವಾಗಿ ಚಾಲನೆ ಹಾಗೂ ಬೇಗ ಟ್ರಿಪ್ ಮುಗಿಸಿದ ಚಾಲಕರಿಗೆ BMTC ಮಾಡಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 10 =
Remember me
