ಜೈಪುರ:ರಾಜಸ್ಥಾನ ಸಚಿವ ಸಂಪುಟದಲ್ಲಿ ಇತ್ತೀಚೆಗಷ್ಟೇ ಸ್ಥಾನ ಪಡೆದ ರಾಜೇಂದ್ರ ಸಿಂಗ್​ ಗೌಡ ಅವರು ನೀಡಿರುವ ಹೇಳಿಕೆಯೊಂದು ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.
ಪಂಚಾಯತ್​ ರಾಜ್​ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಜೇಂದ್ರ ಸಿಂಗ್​ ಗೌಡ, ಬಾಲಿವುಡ್​ ಬ್ಯೂಟಿ ಕತ್ರಿನಾ ಕೈಫ್​ ಅವರ ಕೆನ್ನೆಯಷ್ಟು ಸೊಗಸಾದ ರಸ್ತೆಗಳನ್ನು ಮಾಡಿಸುತ್ತೇನೆಂದು ಭರವಸೆ ನೀಡಿದ್ದಾರೆ.
ರಾಜಸ್ಥಾನದ ಜಂಜುನು ಜಿಲ್ಲೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುವ ವೇಳೆ ಸಚಿವರು ಈ ಭರವಸೆಯನ್ನು ನೀಡಿದ್ದಾರೆ. ಗೌಡ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್​ಪಿಯಲ್ಲಿ ಟಿಕೆಟ್​ ಪಡೆದು ಜಯ ಸಾಧಿಸಿ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ.
ಇನ್ನು ರಾಜಕಾರಣಿಗಳ ರಸ್ತೆಗಳನ್ನು ಸೆಲೆಬ್ರಿಟಿಗಳ ಕೆನ್ನಗೆ ಹೋಲಿಸಿ ಮಾತನಾಡುವುದು ಇದೇ ಮೊದಲೇನಲ್ಲ. 2015ರಲ್ಲಿ ಆರ್​ಜೆಡಿ ನಾಯಕ ಲಾಲು ಪ್ರಸಾದ್​ ಯಾದವ್​ ಹೇಮಾಮಾಲಿನಿ ಕೆನ್ನೆಯಂತ ನಯವಾದ ರಸ್ತೆಗಳನ್ನು ಮಾಡಿಸುವ ಭರವಸೆ ನೀಡಿದ್ದರು.
ಮಧ್ಯಪ್ರದೇಶದ ಕಾನೂನು ಸಚಿವ ಪಿ.ಸಿ. ಶರ್ಮಾ ಕೂಡ 2019ರಲ್ಲಿ ಇದೇ ರೀತಿಯ ಹೇಳಿಕೆ ನೀಡಿದ್ದರು. ರಾಜ್ಯದ ಗುಂಡಿಯುಕ್ತ ರಸ್ತೆಗಳು ಕನಸಿನ ಹುಡುಗಿಯ ಕೆನ್ನೆಯ ರೀತಿ ಬದಲಾಗಲಿದೆ ಎಂದು ಭರವಸೆ ನೀಡಿದ್ದರು. 2013ರಲ್ಲಿ ಉತ್ತರ ಪ್ರದೇಶದ ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಸಚಿವ ರಾಜಾರಾಮ್​ ಪಾಂಡೆ ಮಾತನಾಡಿ, ಪ್ರತಾಪಗಢ ಜಿಲ್ಲೆಯಲ್ಲಿರುವ ರಸ್ತೆಗಳನ್ನು ಹೇಮಾಮಾಲಿನಿ ಮತ್ತು ಮಾಧುರಿ ದೀಕ್ಷಿತ್​ ಗಲ್ಲದಂತೆ ಸೊಗಸಾಗಿ ಮಾಡಲಾಗುವುದು ಎಂದಿದ್ದರು. ಆದರೆ, ರಾಜಕಾರಣಿಗಳು ನೀಡಿದ ಭರವಸೆ ಮಾತ್ರ ಇಂದಿಗೂ ಭರವಸೆ ಆಗಿಯೇ ಉಳಿದಿವೆ.(ಏಜೆನ್ಸೀಸ್​)
ಮೇಘಾಲಯದಲ್ಲಿ ಕಾಂಗ್ರೆಸ್​ಗೆ​ ಭಾರೀ ಹೊಡೆತ: ಮಾಜಿ ಸಿಎಂ ಸೇರಿದಂತೆ 12 ಶಾಸಕರು ಟಿಎಂಸಿ ಸೇರ್ಪಡೆ

ಅಧಿಕಾರಿಗಳ ಖಜಾನೆ ಜಾಲಾಡಿದ ಎಸಿಬಿ; ಬೆಳ್ಳಂಬೆಳಗ್ಗೆ ಶಾಕ್, ದಾಖಲೆ ಇಲ್ಲದ ಕೋಟ್ಯಂತರ ರೂ. ಮೌಲ್ಯದ ಆಸ್ತಿ, ಆಭರಣ ಜಪ್ತಿ

ಏಳು ಕಿಲೋಗಿಂತ ಹೆಚ್ಚು ಚಿನ್ನಾಭರಣ! ಎಸಿಬಿ ಅಧಿಕಾರಿಗಳ ದಾಳಿ ಸಮಯದಲ್ಲಿ ಪತ್ತೆ; ಇಲ್ಲಿದೆ ಅದರ ವಿಡಿಯೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − one =
Remember me
