ಕೊಚ್ಚಿ:ಕೇರಳದ ಮಾಡೆಲ್​ಗಳಿಬ್ಬರ ಜೀವ ಕಸಿದ ಕಾರು ಅಪಘಾತಕ್ಕೆ ಕಾರಣ ಏನೆಂಬುದನ್ನು ಕೊಚ್ಚಿಯ ಪೊಲೀಸ್​ ಆಯುಕ್ತ ಸಿ ಎಚ್​ ನಾಗರಾಜು ಅವರು ಮಂಗಳವಾರ ತಿಳಿಸಿದ್ದಾರೆ.
ದುರುದ್ದೇಶದಿಂದ ಮಾಡೆಲ್​ಗಳಿದ್ದ ಕಾರನ್ನು ಆರೋಪಿ ಸೈಜು ಹಿಂಬಾಲಿಸಿದ್ದೆ ಅಪಘಾತಕ್ಕೆ ಕಾರಣ ಎಂದು ಆಯುಕ್ತರು ಹೇಳಿದ್ದಾರೆ. ಅಕ್ಟೋಬರ್​ 31ರ ರಾತ್ರಿ ಕೊಚ್ಚಿಯಲ್ಲೇ ಉಳಿಯುವಂತೆ ಮಾಡೆಲ್​ಗಳನ್ನು ಸೈಜು ಒತ್ತಾಯಿಸಿದ್ದ. ಆದರೆ, ಮಾಡೆಲ್​ಗಳು ಅದನ್ನು ನಿರಾಕರಿಸಿ ತಮ್ಮ ಮನೆಗಳಿಗೆ ರಾತ್ರಿಯೇ ಹೊರಟ್ಟಿದ್ದರು.
ಆರೋಪಿ ಸೈಜುವಿನ ಈ ಹಿಂದಿನ ಮಾದಕ ದ್ರವ್ಯ ಸೇವನೆ ಮತ್ತು ಲೈಂಗಿಕ ಕಿರುಕುಳದ ಪ್ರಕರಣಗಳ ಪುರಾವೆಗಳನ್ನು ಸಂಗ್ರಹಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಆ ಘಟನೆಗಳ ಬಗ್ಗೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.
ಆದರೆ, ವಿಚಾರಣೆ ವೇಳೆ ಸೈಜು ಹೇಳಿಕೆ ನೀಡಿದ್ದು, ಹೋಟೆಲ್​ನಿಂದ ಹೊರಟ ಮಾಡೆಲ್​ಗಳು ಮತ್ತು ಕಾರಿನ ಚಾಲಕ ಅಬ್ದುಲ್​ ರೆಹಮಾನ್​ ಮದ್ಯದ ಅಮಲಿನಲ್ಲಿ ಇದ್ದಿದ್ದರಿಂದ ಅವರಿಗೆ ಎಚ್ಚರಿಕೆ ನೀಡಲು ಮತ್ತು ಚಾಲನೆ ಮಾಡದಂತೆ ಹೇಳಲು ಹಿಂಬಾಲಿಸಿದೆ ಎಂದು ಹೇಳಿದ್ದಾರೆ. ಆದರೆ, ಇದನ್ನು ಒಪ್ಪಲು ಪೊಲೀಸರು ತಯಾರಿಲ್ಲ.
ಸೈಜು ಕಸ್ಟಡಿ ಅವಧಿ ಇಂದು ಅಂತ್ಯವಾಗುವುದರಿಂದ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ಹಿನ್ನೆಲೆ ಏನು?ನವೆಂಬರ್​ 1ರಂದು ಫೋರ್ಟ್​ ಕೊಚ್ಚಿಯಲ್ಲಿ ನಡೆದ ಡಿಜೆ ಪಾರ್ಟಿ ಮುಗಿಸಿಕೊಂಡು ಹಿಂದಿರುಗುವಾಗ ಕೇರಳದ ವ್ಯಟ್ಟಿಲ-ಪಲರಿವಟ್ಟಮ್​ ರಾಷ್ಟ್ರೀಯ ಹೆದ್ದಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಭರವಸೆಯ ಮಾಡೆಲ್​ಗಳು ದುರ್ಮರಣಕ್ಕೀಡಾಗಿದ್ದಾರೆ. ಘಟನೆಯಲ್ಲಿ 2019ರ ಮಿಸ್​ ಕೇರಳ ವಿಜೇತೆ ಅಟ್ಟಿಂಗಲ್​ ಮೂಲದ ಅನ್ಸಿ ಕಬೀರ್​ (25), ತ್ರಿಸ್ಸೂರ್​ ಮೂಲದ ರನ್ನರ್​ ಅಪ್​ ಅಂಜನಾ ಶಾಜನ್​ (24) ಮತ್ತು ಕೆ.ಎ. ಮಹಮ್ಮದ್​ ಆಶಿಕ್​ (25) ದಾರುಣವಾಗಿ ಮೃತಪಟ್ಟಿದ್ದರು. ಕಾರು ಚಲಾಯಿಸುತ್ತಿದ್ದ ಚಾಲಕ ಅಬ್ದುಲ್​ ರೆಹಮಾನ್​ನನ್ನು ಅತಿವೇಗದ ಚಾಲನೆ ಆರೋಪದಡಿಯಲ್ಲಿ ಬಂಧಿಸಲಾಗಿತ್ತು. ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.
ಇನ್ನು ಅಪಘಾತಕ್ಕೀಡಾದ ಕಾರನ್ನು ಹಿಂಬಾಲಿಸಿದ್ದ ಆಡಿ ಕಾರಿನಲ್ಲಿದ್ದ ಸೈಜು ಎಂಬಾತನಿಗೂ ಹೋಟೆಲ್​ ನಂಬರ್​ 18 ಮಾಲೀಕ ರಾಯ್​ಗೂ ಸಂಬಂಧವಿದೆ. ಅದಕ್ಕೆ ಪುಷ್ಟಿ ನೀಡುವಂತೆ ಅಪಘಾತವಾದ ಕೆಲವೇ ಸಮಯದಲ್ಲಿ ಸೈಜು, ರಾಯ್​ರನ್ನು ಸಂಪರ್ಕಿಸಿದ್ದಾರೆ. ರಾಯ್​ ಮತ್ತು ಸೈಜು ಸ್ನೇಹಿತರು ಎಂದು ತಿಳಿದುಬಂದಿದೆ. ಅಪಘಾತದ ಬೆನ್ನಲ್ಲೇ ಸೈಜು, ರಾಯ್​ ಮತ್ತು ಹೋಟೆಲ್​ ಸಿಬ್ಬಂದಿಗಳಿಗೆ ಕರೆ ಮಾಡಿರುವುದು ತಿಳಿದುಬಂದಿದೆ. ಪ್ರಕರಣ ಇನ್ನುಷ್ಟು ನಿಗೂಢವಾಗುತ್ತಿದೆ. ಸದ್ಯ ತನಿಖೆ ಮುಂದುವರಿದಿದ್ದು, ಪ್ರಕರಣ ಯಾವ ತಿರುವು ಪಡೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.(ಏಜೆನ್ಸೀಸ್​)
ಮಾಡೆಲ್​ಗಳಿಬ್ಬರ ದುರಂತ ಸಾವು​: ಆರೋಪಿ ಮೊಬೈಲ್​ನಲ್ಲಿ ಪತ್ತೆಯಾಯ್ತು ಭಯಾನಕ ವಿಡಿಯೋಗಳು!

ಮಾಡೆಲ್​ಗಳಿಬ್ಬರ ದುರಂತ ಸಾವು: ಪಾರ್ಟಿಯಲ್ಲಿ ಡ್ರಗ್ಸ್​ ಅಮಲು, ಖಾಸಗಿ ವಿಡಿಯೋ ಬೆನ್ನತ್ತ ಪೊಲೀಸರು!

ಮಾಡೆಲ್​ಗಳಿಬ್ಬರ ದುರಂತ ಸಾವು: ಪಾರ್ಟಿ ನಡೆದ ಹೋಟೆಲ್​ ಮಾಲೀಕನ ದುಷ್ಕೃತ್ಯ ಬಿಚ್ಚಿಟ್ಟ ಸಿಬ್ಬಂದಿ!

ಮಾಡೆಲ್​ಗಳಿಬ್ಬರ ದುರ್ಮರಣ: ಪಾರ್ಟಿ ನಡೆದ ಹೋಟೆಲ್​ ಮಾಲೀಕ ಮಾಡಿದ ಈ ಕೃತ್ಯದಿಂದ ಸಂಶಯ ದುಪ್ಪಟ್ಟು!

ಮಾಡೆಲ್​ಗಳಿಬ್ಬರ ದುರ್ಮರಣ: ಕೇಸ್​ ಕ್ಲೋಸ್​ ಆಯ್ತು ಅನ್ನುವಷ್ಟರಲ್ಲಿ ಪ್ರಕರಣಕ್ಕೆ ಹೊಸ ತಿರುವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + five =
Remember me
