ಕೊಚ್ಚಿ:ಗಂಡ ಮತ್ತು ಆತನ ಕುಟುಂಬದ ವಿರುದ್ಧ ಕೇರಳದ ಅಲುವಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದ ಯುವತಿಯೊಬ್ಬಳು ಇದೀಗ ಅಲುವಾದ ಎಡಯಪುರಂ ನಿವಾಸದಲ್ಲಿ ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮೃತಳನ್ನು ಮೌಫಿಯಾ ಪರ್ವೀನ್​ (23) ಎಂದು ಗುರುತಿಸಲಾಗಿದೆ. ಈಕೆ ಎಲ್​ಎಲ್​ಬಿ ಓದುತ್ತಿದ್ದಳು. ಪೊಲೀಸ್​ ಠಾಣೆಗೆ ದೂರು ನೀಡಿ ಮನೆಗೆ ಬಂದ ಬೆನ್ನಲ್ಲೇ ಮೌಫಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೊಠಡಿಯಲ್ಲಿ ಡೆತ್​ನೋಟ್​ ಪತ್ತೆಯಾಗಿದ್ದು, ದೂರನ್ನು ನಿರ್ಲಕ್ಷಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ನನಗೆ ಪೊಲೀಸರಿಂದ ಯಾವುದೇ ನ್ಯಾಯ ದೊರಕಲಿಲ್ಲ. ಬದಲಾಗಿ ಗಂಡನ ಕುಟುಂಬದ ಜತೆ ಸಂಧಾನಕ್ಕಾಗಿ ನನ್ನನ್ನು ಕರೆಸಿದರು ಎಂದು ಮೌಫಿಯಾ ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ.
ಆದಾಗ್ಯೂ, ಸಂಧಾನ ನಡೆಯುವ ವೇಳೆ ಮೌಫಿಯಾ ತನ್ನ ಗಂಡನ ಕಪಾಳಕ್ಕೆ ಬಾರಿಸಿದ್ದಳು. ಅದನ್ನು ನೋಡಿ ಕೋಪಗೊಂಡ ಪೊಲೀಸರು ಠಾಣೆಯ ಒಳಗೆ ಇಂತಹ ಕೆಲಸ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮೌಫಿಯಾಗೆ ಎಚ್ಚರಿಕೆ ನೀಡಿದ್ದರು ಎಂದು ಹೇಳಲಾಗಿದೆ. ಇದರಿಂದ ಮನನೊಂದಿದ್ದ ಮೌಫಿಯಾ, ನ್ಯಾಯಾ ಸಿಗಲಿಲ್ಲ ಎಂಬ ನಿರಾಶೆಯಿಂದ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ.
ಮೌಫಿಯಾ ತೋಡುಪುಳ್ಳಾದ ಖಾಸಗಿ ಕಾಲೇಜೊಂದರಲ್ಲಿ ಎಲ್​ಎಲ್​ಬಿ ಓದುತ್ತಿದ್ದಳು. ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಲಾಮಾಸ್ಸೆರಿ ಮೆಡಿಕಲ್​ ಕಾಲೇಜಿಗೆ ಸ್ಥಳಾಂತರ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.(ಏಜೆನ್ಸೀಸ್​)
ಅಪ್ಪು ಅಗಲಿಕೆ ನೋವು ಇನ್ನೂ ಮಾಸಿಲ್ಲ… ಈಗಲೇ ಇದೆಲ್ಲಾ ಬೇಕಿತ್ತಾ? ಸುಮಲತಾ ಅಂಬರೀಷ್​ ಬೇಸರ

ಮಾಸ್ಕ್‌ ಒಳಗೆ ಬ್ಯಾಟರಿ, ಚಾರ್ಜಿಂಗ್, ಸಿಮ್ ಕಾರ್ಡ್! ಕಾನ್ಸ್‌ಟೆಬಲ್‌ ನೇಮಕಾತಿ ಪರೀಕ್ಷೆಯ ಅಕ್ರಮದ ಪರಿ ಇದು…

ಸಮಂತಾರ ಹಾದಿಯನ್ನೇ ಹಿಡಿದ ಪ್ರಿಯಾಂಕಾ ಚೋಪ್ರಾ! ಜಾಲತಾಣದಲ್ಲಿ ಸಿಡಿಯಿತು ಬಾಂಬ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 19 =
Remember me
