ಹೈದರಾಬಾದ್​:ಪಾಲಕರ ಒಪ್ಪಿಗೆ ಇಲ್ಲದೆ ಪ್ರೀತಿಸಿದ ಯುವತಿಯನ್ನು ಮದುವೆಯಾದ ಯುವಕನನ್ನು ಯುವತಿಯ ಸಂಬಂಧಿಕರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ತೆಲಂಗಾಣದ ಆಸಿಫಾಬಾದ್​ ಜಿಲ್ಲೆಯಲ್ಲಿ ನಡೆದಿದೆ.
ಮಾತನಾಡಿ ಸಮಸ್ಯೆ ಬಗೆಹರಿಸುವ ನೆಪದಲ್ಲಿ ಯುವಕನನ್ನು ಕರೆದು ಸಂಬಂಧಿಕರು ಚೆನ್ನಾಗಿ ಥಳಿಸಿದ್ದಾರೆ. ಈ ಘಟನೆ ಮಂಗಳವಾರ ಥಿರ್ಯಾನಿ ಮಂಡಲ ಕೇಂದ್ರದಲ್ಲಿ ಜರುಗಿದೆ. ಮಾತನಾಡಲು ಬರುವಾಗ ರಸ್ತೆಯಲ್ಲೇ ಯುವಕನನ್ನು ಅಡ್ಡಗಟ್ಟಿ ಯುವತಿ ಕಡೆಯವರು ಹಲ್ಲೆ ಮಾಡಿದ್ದಾರೆ. ಯುವಕ ರಾಮು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರಗೆ ದಾಖಲಿಸಲಾಗಿದೆ.
ಯುವತಿ ಮಾಧವಿ ತನ್ನ ಸಂಬಂಧಿಕರ ವಿರುದ್ಧ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ನನ್ನ ಪತಿಯ ಮೇಲೆ ನನ್ನ ಪಾಲಕರು ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ ಎಂದು ದೂರಿದ್ದಾಳೆ. ನಾವಿಬ್ಬರು ಇಷ್ಟಪಟ್ಟು ಮದುವೆ ಆಗಿದ್ದೇವೆಂದು ತಿಳಿಸಿದ್ದಾರೆ.
ದೂರು ದಾಖಲಿಸಿಕೊಂಡಿರುವ ಪೊಲೀಸರು ಹಲ್ಲೆ ಮಾಡಿರುವವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.(ಏಜೆನ್ಸೀಸ್​)
ಏನೇ ಇರಲಿ ಅವರು ಮಾಡಿದ್ದು ತಪ್ಪು: ಐಎಎಸ್​ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್​ ಡಿ. ರೂಪಾ ವಾಗ್ದಾಳಿ!

ಅರವಿಂದ್​ಗೆ ಟ್ರೋಫಿ ಗೆಲ್ಲುವ ಅವಕಾಶ ಕಸಿದ ಎರಡನೇ ಇನ್ನಿಂಗ್ಸ್​: ಇಲ್ಲಿದೆ ಅಚ್ಚರಿಯ ಮಾಹಿತಿ!

ಬಿಜೆಪಿ-ಎಸ್​ಪಿ ನೇರಾನೇರ ಫೈಟ್​ಗೆ ಉತ್ತರ ಪ್ರದೇಶ ಸಜ್ಜು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + twenty =
Remember me
