ನವದೆಹಲಿ:ದೇಶದ ಜನತೆಗೆ ಬೆಲೆ ಏರಿಕೆಯ ಬಿಸಿ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇಂದು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ 102.50 ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ 2,335.50 ರೂಪಾಯಿಗೆ ಏರಿಕೆಯಾಗಿದೆ.
ಫೆಬ್ರವರಿ 1ರ ಬಜೆಟ್​ ದಿನದಂದು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರಿನ ಬೆಲೆಯಲ್ಲಿ 91.50 ರೂಪಾಯಿ ಇಳಿಕೆ ಕಂಡಿತ್ತು. ಈ ವೇಳೆ ದೆಹಲಿಯಲ್ಲಿ 19 ಕೆಜಿ ಸಿಲಿಂಡರಿನ ಬೆಲೆ 1907 ರೂಪಾಯಿ ಇತ್ತು. ಇದಾದ ಬೆನ್ನಲ್ಲೇ ಮಾರ್ಚ್​ 1ರಂದು ಎಲ್​ಪಿಜಿ ಸಿಲಿಂಡರಿನ ಬೆಲೆ 105 ರೂ. ಏರಿಕೆ ಕಂಡು, 19 ಕೆಜಿ ಸಿಲಿಂಡರಿನ ಬೆಲೆ 2012 ರೂಪಾಯಿ ಆಗಿತ್ತು.
ಏಪ್ರಿಲ್​ 1ರಂದು ಮತ್ತೆ ದರ ಏರಿಕೆಯಾಗಿತ್ತು. ಬರೋಬ್ಬರಿ 250 ರೂಪಾಯಿ ಏರಿಕೆಯಾಗಿ, 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ 2,253 ರೂಪಾಯಿ ತಲುಪಿತ್ತು. ಇದೀಗ ಮೇ 1ರ ಕಾರ್ಮಿಕ ದಿನದಂದು ಕೂಡ ವಾಣಿಜ್ಯ ಬಳಕೆಯ ಸಿಲಿಂಡರ್​ನ ಬೆಲೆಯಲ್ಲಿ 102.50 ರೂಪಾಯಿ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ 2,335.50 ರೂಪಾಯಿ ತಲುಪಿದೆ. ಈ ಮೂಲಕ ಗ್ರಾಹಕರ ಜೇಬು ಮತ್ತಷ್ಟು ಸುಡಲಿದೆ.
ವಾಣಿಜ್ಯ ಬಳಕೆ ಸಿಲಿಂಡರ್​ ದರ ಏರಿಕೆಯಿಂದ ಹೋಟೆಲ್​ ತಿಂಡಿ ತಿನಿಸುಗಳ ಬೆಲೆ ಸಹಜವಾಗಿ ಏರಿಕೆಯಾಗಿದ್ದು, ಇದರ ಪರಿಣಾಮ ಗ್ರಾಹಕರ ಮೇಲೆ ಬೀಳಲಿದೆ. ಇನ್ನು 5 ಕೆಜಿ ಸಿಲಿಂಡರ್​ನ ಬೆಲೆ 655 ರೂಪಾಯಿ ಆಗಿದೆ.(ಏಜೆನ್ಸೀಸ್​)
ಮೇಡಂ ನೀವು ಮುಂದಿನ ಮಹಾರಾಷ್ಟ್ರ ಸಿಎಂ ಈ ರೀತಿ ಡ್ರೆಸ್​ ಹಾಕ್ಬೇಡಿ: ಕಂಗನಾರ ಹಾಟ್​ ಅವತಾರ ಕಂಡು ಬೇಸರ!

PSI ನೇಮಕಾತಿ ಹಗರಣ: ಸಿಐಡಿ ಅಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ದಿವ್ಯಾ ಹಾಗರಗಿ!

ಪರೋಟ ತಿಂದ ಮರುದಿನವೇ ಬಾಲಕ ದುರಂತ ಸಾವು: ಮರಣೋತ್ತರ ವರದಿಯಲ್ಲಿತ್ತು ಸ್ಫೋಟಕ ಸಂಗತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
