ಜಲ್ನಾ:ಮಹಾರಾಷ್ಟ್ರದ ಜಲ್ನಾದಲ್ಲಿರುವ ಕೆಲ ಉದ್ಯಮ ಸಮೂಹಕ್ಕೆ ಸೇರಿದ ಅನೇಕ ಪ್ರದೇಶಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ಬೇನಾಮಿ ಅಥವಾ ಲೆಕ್ಕಕ್ಕೆ ಸಿಗದ 390 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ. ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯ ವೇಳೆ 56 ಕೋಟಿ ರೂಪಾಯಿ ನಗದು, 14 ಕೋಟಿ ರೂಪಾಯಿ ಮೌಲ್ಯದ 32 ಕೆಜಿ ಚಿನ್ನ, ಹರಳು ಮತ್ತು ಡೈಮಂಡ್​ ಹಾಗೂ ಕೆಲ ಆಸ್ತಿ ದಾಖಲೆಗಳನ್ನು ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಆಗಸ್ಟ್​ 1 ರಿಂದ 8ರ ನಡುವೆ ಉಕ್ಕಿನ ವ್ಯಾಪಾರಿ, ಬಟ್ಟೆ ವ್ಯಾಪಾರಿ ಮತ್ತು ರಿಯಲ್ ಎಸ್ಟೇಟ್ ಡೆವಲಪರ್​ಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿದ ವೇಳೆ ಇಷ್ಟೊಂದು ಆಸ್ತಿ ಪತ್ತೆಯಾಗಿದೆ.
Maharashtra | Income Tax conducted a raid at premises of a steel, cloth merchant & real estate developer in Jalna from 1-8 Aug. Around Rs 100 cr of benami property seized – incl Rs 56 cr cash, 32 kgs gold, pearls-diamonds & property papers. It took 13 hrs to count the seized cashpic.twitter.com/5r9MHRrNyR
— ANI (@ANI)August 11, 2022

ದಾಳಿ ವೇಳೆ ಸಿಕ್ಕ ನಗದು ಎಣಿಸಲು ಅಧಿಕಾರಿಗಳಿಗೆ ಸುಮಾರು 13 ತಾಸುಗಳ ಸಮಯ ತೆಗೆದುಕೊಂಡಿದೆ. ಜಿಲ್ಲೆಯ ಕೆಲವು ಉದ್ಯಮಿಗಳು ತೆರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಮಾಹಿತಿ ಪಡೆದ ನಂತರ, ಆದಾಯ ತೆರಿಗೆ ಇಲಾಖೆಯು 260 ಅಧಿಕಾರಿಗಳನ್ನು ಒಳಗೊಂಡ ಐದು ತಂಡಗಳನ್ನು ರಚಿಸಿತ್ತು. ಬಳಿಕ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿತು.(ಏಜೆನ್ಸೀಸ್​)
VIDEO| ಪ್ರಾಣಿಗಳು ಸಹ ಇದನ್ನು ತಿನ್ನುವುದಿಲ್ಲ: ಊಟದ ತಟ್ಟೆ ಹಿಡಿದು ರಸ್ತೆಯಲ್ಲೇ ಕಣ್ಣೀರಾಕಿದ ಕಾನ್ಸ್​ಟೇಬಲ್​

ಶೋಕಿಗಾಗಿ ಬೈಕ್​ಗಳನ್ನು ಕದಿಯುತ್ತಿದ್ದ ಇಬ್ಬರು ಬಿ.ಟೆಕ್ ಸ್ಟೂಡೆಂಟ್ಸ್ ಅಂದರ್: 12 ಬುಲೆಟ್, 2 ಡ್ಯೂಕ್ ವಶಕ್ಕೆ

ಹುಡುಗಿಯರು ಲೈಂಗಿಕ ಸುಖ ಬಯಸಿದರೆ… ಶಕ್ತಿಮಾನ್​ ಖ್ಯಾತಿಯ ಮುಕೇಶ್​ ಖನ್ನಾ ಹೇಳಿಕೆಗೆ ಭಾರಿ ಆಕ್ರೋಶ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:five × three =
Remember me
