ಮುಂಬೈ:ಇಡೀ ದೇಶವೇ ಬೆಚ್ಚಿಬೀಳಿಸುವಂತಹ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬ ಅರೆಬೆಂದ ಕರೊನಾ ರೋಗಿಯ ಶವವನ್ನೇ ತಿಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬುಧವಾರ ಬೆಳಗ್ಗೆ ಸತಾರಾ ಜಿಲ್ಲೆಯ ಕೊಲಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸ್ಮಶಾನದಲ್ಲಿ ವ್ಯಕ್ತಿಯೊಬ್ಬ ಅಡ್ಡಾಡುವುದನ್ನು ಸ್ಥಳೀಯರು ಗಮನಿಸಿದ್ದಾರೆ. ನೋಡು ನೋಡುತ್ತಿದ್ದಂತೆ ಆತ ಅರೆಬೆಂದ ಕರೊನಾ ಸೋಂಕಿತ ಶವದ ಮಾಂಸವನ್ನು ತಿನ್ನುವುದನ್ನು ನೋಡಿ ಸ್ಥಳೀಯರು ಶಾಕ್​ ಆಗಿದ್ದಾರೆ.
ಈ ಮಾಹಿತಿಯನ್ನು ಪೊಲೀಸ್​ ಠಾಣೆಗೆ ತಿಳಿಸಿದಾಗ ಪೊಲೀಸರು ಸಹ ಒಂದು ಕ್ಷಣ ಶಾಕ್​ ಆಗಿದ್ದಾರೆ. ಬಳಿಕ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ. ಈ ವೇಳೆ ಗ್ರಾಮಸ್ಥರು ಕೂಗಾಡುವುದನ್ನು ನೋಡಿ ಆ ವ್ಯಕ್ತಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಬಳಿಕ ಆತನನ್ನು ಬೆನ್ನಟ್ಟಿದ ಪೊಲೀಸರು ಹೇಗೋ ಬಂಧಿಸಿ ತಮ್ಮ ವಶಕ್ಕೆ ಪಡೆದುಕೊಂಡರು.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಸದ್ಯ ಆತ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮಾತನಾಡಿರುವ ಫಲ್ತಾನ್​ ಮುನ್ಸಿಪಾಲ್​ ಕಾರ್ಪೊರೇಷನ್​ ಮುಖ್ಯಸ್ಥ ಪ್ರಸಾದ್​ ಕಟ್ಕರ್​, ಆ ವ್ಯಕ್ತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದೆ. ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
ನೆರೆಮನೆ ಮಗುವಿನ ಜೀವ ಉಳಿಸಲು ಪ್ರಾಣತ್ಯಾಗ ಮಾಡಿದ ಯುವತಿ..!
ಆಕ್ಸಿಜನ್​ ಭರ್ತಿಗೆ ಕ್ಯೂನಲ್ಲಿ ನಿಂತಿದ್ದ ವೇಳೆ ಬಂತು ಫೋನ್​ ಕರೆ: ಮಾತು ಕೇಳ್ತಿದ್ದಂತೆ ಕುಸಿದು ಬಿದ್ದ ಮಹಿಳೆ
ಕರೊನಾ ಲಸಿಕೆ ನೀಡುವುದಾಗಿ ನಂಬಿಸಿ ಹುಡುಗಿಯನ್ನು ಕರೆದೊಯ್ದ ಯುವಕರಿಂದ ಗ್ಯಾಂಗ್​ರೇಪ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
