ಭುವನೇಶ್ವರ್​:ಒಡಿಶಾ ರಾಜಧಾನಿ ಭುವನೇಶ್ವರದ ರಸ್ತೆಯಲ್ಲಿ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ದಾಳಿ ಮಾಡಿದ ವಿಡಿಯೋ ವೈರಲ್​ ಆದ ಎರಡು ದಿನಗಳ ಬೆನ್ನಲ್ಲೇ ಆರೋಪಿಯನ್ನು ಪೊಲೀಸ್​ ಕಮಿಷನರೇಟ್ ವಿಶೇಷ ತಂಡ ಇಂದು ಬಂಧಿಸಿದೆ. ​
ಆರೋಪಿಯ ಸುಳಿವು ಪಡೆದ ವಿಶೇಷ ಪೊಲೀಸ್​ ತಂಡ ಎರಡು ಪ್ರದೇಶಗಳ ಮೇಲೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಯ ಸಂತ್ರಸ್ತ ಯುವತಿಯ ಬಳಿ ಮೊಬೈಲ್​ ಫೋನ್​ ಕಸಿಯಲು ಯತ್ನಿಸಿದ್ದಾನೆ. ಆದರೆ, ವಿರೋಧಿಸಿದಾಗ ಆಕೆಯ ಮೇಲೆ ಆರೋಪಿ ದಾಳಿ ಮಾಡಿದ್ದಾನೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೇ 31ರಂದು ಸಿಸಿಟಿವಿ ವಿಡಿಯೋ ತುಣುಕೊಂದು ಜಾಲತಾಣದಲ್ಲಿ ಕಾಣಿಸಿಕೊಂಡಿತು. ವಿಡಿಯೋದಲ್ಲಿ ದುಷ್ಕರ್ಮಿಯೊಬ್ಬ ಚಾಕುವಿನಿಂದ ಯುವತಿಯ ಕುತ್ತಿಗೆಗೆ ಹಲ್ಲೆ ಮಾಡಿ ಪರಾರಿಯಾಗಿದ್ದ. ಗಾಯಗೊಂಡ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.(ಏಜೆನ್ಸೀಸ್​)
ಸ್ಟೀವನ್​ ಸ್ಮಿತ್​ ಕೊಠಡಿ ಕೆಳಗೆ ಮಲಗಿದರೆ ರಾತ್ರಿ ವೇಳೆ ನಿದ್ದೆ ಬರುವುದಿಲ್ಲ ಎಂದು ವಾರ್ನರ್​ ಹೇಳಿದ್ದೇಕೆ?

ಎರಡನೇ ಡೋಸ್​ ಲಸಿಕೆ ಕೊರತೆ: ದೆಹಲಿ ಸರ್ಕಾರಕ್ಕೆ ಹೈಕೋರ್ಟ್​ ತರಾಟೆ!

ಥಾಯ್ಲೆಂಡ್​ ನದಿಯಲ್ಲಿ ಸೂಟ್​ಕೇಸ್​ ಪತ್ತೆ: ಬ್ರಿಟಿಷ್​ ವ್ಯಕ್ತಿ-ವೇಶ್ಯೆ ನಡುವಿನ ಭಯಾನಕ ಕತೆ ಇದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 2 =
Remember me
