ಕೋಯಿಕ್ಕೋಡ್​:ದಿನಗೂಲಿ ನೌಕರನೊಬ್ಬ ಪಂಚಾಯತ್ ಕಚೇರಿ ಮಹಿಳಾ ಉದ್ಯೋಗಿಯೊಬ್ಬರಿಗೆ ಬೆಂಕಿಯಿಟ್ಟು, ತಾನೂ ಬೆಂಕಿ ಹಚ್ಚಿಕೊಂಡು ದಾರುಣವಾಗಿ ಮೃತಪಟ್ಟಿರುವ ಘಟನೆ ಕೇರಳದ ಕೋಯಿಕ್ಕೋಡ್​ನಲ್ಲಿ ನಡೆದಿದೆ.
ಸಿಂಧೂರಿ ಅಲಿಯಾಸ್​ ಕೃಷ್ಣಪ್ರಿಯಾ (22) ಕೊಲೆಯಾದ ದುರ್ದೈವಿ. ಥಿಕ್ಕೋಡಿ ನಿವಾಸಿ ನಂದನ್​ಕುಮಾರ್​ (26) ಎಂಬಾತ ಕೃಷ್ಣಪ್ರಿಯಾಗೆ ಬೆಂಕಿಯಿಟ್ಟು ತಾನೂ ಬೆಂಕಿ ಹಚ್ಚಿಕೊಂಡಿದ್ದ. ಗಂಭೀರ ಸುಟ್ಟಗಾಯಗಳಿಂದ ಬಳಲುತ್ತಿದ್ದ ಆತನನ್ನು ಕೋಯಿಕ್ಕೋಡ್​ ಮೆಡಿಕಲ್​ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಶುಕ್ರವಾರ ಕೊನೆಯುಸಿರೆಳೆದಿದ್ದಾನೆ. ಕೃಷ್ಣಪ್ರಿಯಾ ಕೂಡ ಶುಕ್ರವಾರ ರಾತ್ರಿ ಮೃತಪಟ್ಟರು.
ಸ್ನಾತಕೋತ್ತರ ಪದವಿಯಲ್ಲಿ ಕಂಪ್ಯೂಟರ್​ ಸೈನ್ಸ್​ ಮುಗಿಸಿದ್ದ ಕೃಷ್ಣಪ್ರಿಯಾ, ಪಂಚಾಯತ್​ ಕಚೇರಿಯಲ್ಲಿ ಯೋಜನಾ ಸಹಾಯಕಿ ಹುದ್ದೆಗೆ ಕೇವಲ 8 ದಿನಗಳ ಹಿಂದಷ್ಟೇ ಸೇರಿದ್ದರು. ನಂದನ್​ಕುಮಾರ್​ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ.
ಶುಕ್ರವಾರ ಪಂಚಾಯತ್​ ಕಚೇರಿಯ ಮುಂದೆಯೇ ಕೃಷ್ಣಪ್ರಿಯಾಗೆ ನಂದನ್​ ಬೆಂಕಿ ಹಚ್ಚಿದ್ದ. ಬಳಿಕ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ. ಈ ವೇಳೆ ಪಂಚಾಯತ್​ ಕಚೇರಿಯ ಸಿಬ್ಬಂದಿ ಗೋವಿಂದನ್​ ಎಂಬುವರು ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ನಂದಿಸಿ, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ.
ಮದುವೆ ಪ್ರಸ್ತಾಪವನ್ನು ಕೃಷ್ಣಪ್ರಿಯಾ ತಿರಸ್ಕರಿಸಿದ್ದಕ್ಕೆ ನಂದನ್​ ಈ ಕೃತ್ಯ ಎಸಗಿದ್ದಾನೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಘಟನೆಗೆ ನಿಖರ ಕಾರಣ ಏನೆಂದು ತಿಳಿಯಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

ಆತ್ಮಹತ್ಯೆ ತಡೆಗೆ ಹಾಸ್ಟೆಲ್​ನಲ್ಲಿ ಸೀಲಿಂಗ್​ ಫ್ಯಾನ್ಸ್​ ತೆರವು: ವಿರೋಧದ ಮಧ್ಯೆಯೂ ಬೆಂಗ್ಳೂರಿನ IISc ಕಾರ್ಯಾಚರಣೆ

ಮದ್ವೆಯಾದ ಎರಡೇ ವರ್ಷದಲ್ಲಿ ಗಂಡ ನಾಪತ್ತೆ: ಮತ್ತೊಂದು ಮದ್ವೆಯಾದವಳಿಗೆ 12 ವರ್ಷದ ಬಳಿಕ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
