ಕೊಚ್ಚಿ:ಕೇರಳದ ಮಾಡೆಲ್​ಗಳಿಬ್ಬರ ಜೀವ ಕಸಿದ ಕಾರು ಅಪಘಾತ ಪ್ರಕರಣಕ್ಕೆ ಪೊಲೀಸರು ತಾರ್ಕಿಕ ಅಂತ್ಯ ಹಾಡಿದ ಬೆನ್ನಲ್ಲೇ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ. ಮೊದಲಿಂದಲೂ ಈ ಪ್ರಕರಣದ ಮೇಲೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದವು. ಮಾಡೆಲ್​ಗಳು ಪಾಲ್ಗೊಂಡಿದ್ದ ಡಿಜಿ ಪಾರ್ಟಿ ನಡೆದ ಹೋಟೆಲ್​ ಮಾಲೀಕ ಹಾಗೂ ಅಪಘಾತಕ್ಕೀಡಾದ ಕಾರನ್ನು ಚೇಸ್​ ಮಾಡಿದ್ದ ಆಡಿ ಕಾರು, ಪ್ರಕರಣವನ್ನು ನಿಗೂಢತೆಗೆ ದೂಡಿತ್ತು. ಆದರೆ, ಇದು ಕೊಲೆಯಲ್ಲ, ಮದ್ಯದ ಅಮಲಿನಲ್ಲಿ ನಡೆದ ದುರ್ಘಟನೆ ಎಂದು ನಿಗೂಢತೆಗೆ ತೆರೆ ಎಳೆಯಲು ಪೊಲೀಸರು ಪ್ರಯತ್ನಿಸಿದರೂ, ಅಪಘಾತಕ್ಕೀಡಾದ ಕಾರು ಚಾಲಕನ ಹೇಳಿಕೆಯಿಂದ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.
ನವೆಂಬರ್​ 1ರಂದು ಫೋರ್ಟ್​ ಕೊಚ್ಚಿಯಲ್ಲಿ ನಡೆದ ಡಿಜೆ ಪಾರ್ಟಿ ಮುಗಿಸಿಕೊಂಡು ಹಿಂದಿರುಗುವಾಗ ಕೇರಳದ ವ್ಯಟ್ಟಿಲ-ಪಲರಿವಟ್ಟಮ್​ ರಾಷ್ಟ್ರೀಯ ಹೆದ್ದಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಭರವಸೆಯ ಮಾಡೆಲ್​ಗಳು ದುರ್ಮರಣಕ್ಕೀಡಾಗಿದ್ದಾರೆ. ಘಟನೆಯಲ್ಲಿ 2019ರ ಮಿಸ್​ ಕೇರಳ ವಿಜೇತೆ ಅಟ್ಟಿಂಗಲ್​ ಮೂಲದ ಅನ್ಸಿ ಕಬೀರ್​ (25), ತ್ರಿಸ್ಸೂರ್​ ಮೂಲಕ ರನ್ನರ್​ ಅಪ್​ ಅಂಜನಾ ಶಾಜನ್​ (24) ಮತ್ತು ಕೆ.ಎ. ಮಹಮ್ಮದ್​ ಆಶಿಕ್​ (25) ದಾರುಣವಾಗಿ ಮೃತಪಟ್ಟಿದ್ದರು. ಕಾರು ಚಲಾಯಿಸುತ್ತಿದ್ದ ಚಾಲಕ ಅಬ್ದುಲ್​ ರೆಹಮಾನ್​ನನ್ನು ಅತಿವೇಗದ ಚಾಲನೆ ಆರೋಪದಡಿಯಲ್ಲಿ ಬಂಧಿಸಲಾಗಿದೆ. ಚಾಲಕನ ಅಜಾರುಕತೆಯಿಂದ ಮತ್ತು ಮದ್ಯದ ಅಮಲಿನಲ್ಲಿ ಸಂಭವಿಸಿರುವ ದುರ್ಘಟನೆಯಾಗಿದ್ದು, ಕೊಲೆಯಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ, ವಿಚಾರಣೆ ವೇಳೆ ಚಾಲಕ ಅಬ್ದುಲ್​ ರೆಹಮಾನ್​ ಆಡಿ ಕಾರೊಂದು ನಮ್ಮ ಕಾರನ್ನು ಹಿಂಬಾಲಿಸಿತು ಎಂದು ಹೇಳಿಕೆ ನೀಡಿದ್ದಾನೆ. ಸೋಮವಾರ ಸುಮಾರು ಮೂರು ಗಂಟೆಗಳ ಕಾಲ ರೆಹಮಾನ್​ನನ್ನು ಪೊಲೀಸರು ವಿಚಾರಣೆ ನಡೆಸಿದ್ದು, ನವೆಂಬರ್​ 20ರವರೆಗೆ ರೆಹಮಾನ್​ನನ್ನು ನಾಯಾಂಗ ಬಂಧನಕ್ಕೆ ಕೋರ್ಟ್​ ಒಪ್ಪಿಸಿದೆ. ಜಾಮೀನು ಅರ್ಜಿ ವಿಚಾರಣೆಯು ನಡೆಯುತ್ತಿದೆ.
ಇನ್ನು ಅಪಘಾತಕ್ಕೀಡಾದ ಕಾರನ್ನು ಹಿಂಬಾಲಿಸಿದ್ದ ಆಡಿ ಕಾರಿನಲ್ಲಿದ್ದ ಸೈಜು ಎಂಬಾತನಿಗೂ ಹೋಟೆಲ್​ ನಂಬರ್​ 18 ಮಾಲೀಕ ರಾಯ್​ಗೂ ಸಂಬಂಧವಿದೆ. ಅದಕ್ಕೆ ಪುಷ್ಟಿ ನೀಡುವಂತೆ ಅಪಘಾತವಾದ ಕೆಲವೇ ಸಮಯದಲ್ಲಿ ಸೈಜು, ರಾಯ್​ರನ್ನು ಸಂಪರ್ಕಿಸಿದ್ದಾರೆ. ರಾಯ್​ ಮತ್ತು ಸೈಜು ಸ್ನೇಹಿತರು ಎಂದು ತಿಳಿದುಬಂದಿದೆ. ಅಪಘಾತದ ಬೆನ್ನಲ್ಲೇ ಸೈಜು, ರಾಯ್​ ಮತ್ತು ಹೋಟೆಲ್​ ಸಿಬ್ಬಂದಿಗಳಿಗೆ ಕರೆ ಮಾಡಿರುವುದು ತಿಳಿದುಬಂದಿದೆ.
ಆದರೆ, ಸೈಜು ಹೇಳಿರುವ ಪ್ರಕಾರ ಹೋಟೆಲ್​ನಿಂದ ಹೊರಟ ಮಾಡೆಲ್​ಗಳು ಮತ್ತು ಕಾರಿನ ಚಾಲಕ ಅಬ್ದುಲ್​ ರೆಹಮಾನ್​ ಮದ್ಯದ ಅಮಲಿನಲ್ಲಿ ಇದ್ದಿದ್ದರಿಂದ ಅವರಿಗೆ ಎಚ್ಚರಿಕೆ ನೀಡಲು ಮತ್ತು ಚಾಲನೆ ಮಾಡದಂತೆ ಹೇಳಲು ಹಿಂಬಾಲಿಸಿದೆ ಎಂದು ಹೇಳಿದ್ದಾರೆ. ಆದರೆ, ಇದನ್ನು ಒಪ್ಪಲು ಪೊಲೀಸರು ತಯಾರಿಲ್ಲ.
ಅಪಘಾತ ಸಂಭವಿಸಿದ ನಂತರ ವ್ಯಕ್ತಿಯೊಬ್ಬ ಆಡಿ ಕಾರಿನಿಂದ ಇಳಿದು ಪರಿಸ್ಥಿತಿಯನ್ನು ಅವಲೋಕಿಸಿದ್ದಾನೆ ಎಂದು ಪೊಲೀಸರು ಕಂಡುಕೊಂಡಿದ್ದಾರೆ. ಇದಲ್ಲದೆ, ಅವರ ಸ್ನೇಹಿತರು ಬೇರೆ ವಾಹನಗಳಲ್ಲಿ ಬಂದಿದ್ದಾರೆ ಎಂದು ಶಂಕಿಸಲಾಗಿದೆ. ಅಪಘಾತ ಘಟನಾ ಸ್ಥಳದಲ್ಲಿ ನಿಗಾ ವಹಿಸಿ ಹಿಂತಿರುಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಆಡಿ ಕಾರಿನಲ್ಲಿದ್ದವರು ಕೂಡ ಪಾನಮತ್ತರಾಗಿದ್ದರು ಎಂದು ತಿಳಿದು ಬಂದಿರುವುದು ಪೊಲೀಸರು ಮತ್ತೆ ಪ್ರಕರಣದ ಮೇಲೆ ಅನುಮಾನ ಮೂಡಿದ್ದು, ಪ್ರಕರಣ ಇನ್ನುಷ್ಟು ನಿಗೂಢವಾಗುತ್ತಿದೆ. ಸದ್ಯ ತನಿಖೆ ಮುಂದುವರಿದಿದ್ದು, ಪ್ರಕರಣ ಯಾವು ತಿರುವು ಪಡೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.(ಏಜೆನ್ಸೀಸ್​)
ಮಾಡೆಲ್​ಗಳಿಬ್ಬರ ದುರ್ಮರಣ: ನಿಗೂಢ ಸಾವಿಗೆ ಕೊನೆಗೂ ಕಾರಣ ಪತ್ತೆಹಚ್ಚಿದ ಪೊಲೀಸರು!

ಮಾಡೆಲ್​ಗಳಿಬ್ಬರ ದುರ್ಮರಣ: ಆಡಿ ಕಾರು, ಹೋಟೆಲ್​ ಮಾಲೀಕ… ಪೊಲೀಸರಿಗೆ ಸಿಕ್ತು ಸ್ಫೋಟಕ ಸುಳಿವು

ಕೇರಳ ಮಾಡೆಲ್​ಗಳಿಬ್ಬರ ದುರ್ಮರಣ: ಮಧ್ಯರಾತ್ರಿಯ ಡಿಜೆ ಪಾರ್ಟಿ ರಹಸ್ಯ ಭೇದಿಸಲು ಪೊಲೀಸರ ಹರಸಾಹಸ!

ಮಾಡೆಲ್​ಗಳಿಬ್ಬರ ದುರ್ಮರಣ: ರಹಸ್ಯ ಮಾಹಿತಿ ಇರೋ ಸಿಸಿಟಿವಿ ಡಿವಿಆರ್​ನೊಂದಿಗೆ​ ಹೋಟೆಲ್​ ಮಾಲೀಕ ನಾಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 10 =
Remember me
