ಮುಂಬೈ:ಬೆತ್ತಲೇ ಫೋಟೋಶೂಟ್​ ಮಾಡಿಸುವ ಮೂಲಕ ಭಾರೀ ಟ್ರೋಲ್​ ಆಗಿದ್ದಲ್ಲದೆ, ಸಿನಿ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿರುವ ಬಾಲಿವುಡ್​ ನಟ ರಣವೀರ್​ ಸಿಂಗ್ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಮಹಿಳೆಯರ ಭಾವನೆಗೆ ಧಕ್ಕೆಯಾಗಿರುವ ಆರೋಪದಡಿ ರಣವೀರ್​ ವಿರುದ್ಧ ಮುಂಬೈ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.
ರಣವೀರ್​ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ)ಯ ಸೆಕ್ಷನ್​ 509, 294 ಮತ್ತು ಐಟಿ ಕಾಯ್ದೆ 67 ಎ ಸೆಕ್ಷನ್​ ಅಡಿಯಲ್ಲಿ ಮುಂಬೈನ ಚೆಂಬೂರ್​ ಠಾಣಾ ಪೊಲೀಸರು ಮಂಗಳವಾರ ಎಫ್​ಐಆರ್​ ದಾಖಲಿಸಿದ್ದಾರೆ.
ಪೂರ್ವ ಮುಂಬೈ ಉಪನಗರ ಮೂಲದ ಸರ್ಕಾರೇತರ ಸಂಸ್ಥೆಯ (ಎನ್‌ಜಿಒ) ಪದಾಧಿಕಾರಿಗಳು ಮತ್ತು ಮಹಿಳಾ ವಕೀಲರು ಚೆಂಬೂರ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರುಗಳನ್ನು ಸಲ್ಲಿಸಿದ್ದಾರೆ.
ರಣವೀರ್​ ಅವರು ತಮ್ಮ ಬೆತ್ತಲೆ ಫೋಟೋಗಳ ಮೂಲಕ ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಮತ್ತು ಮಹಿಳೆಯರ ನಮ್ರತೆಗೆ ಅಪಮಾನ ಎಸಗಿದ್ದಾರೆ ಎಂದು ಎನ್‌ಜಿಒ ಪದಾಧಿಕಾರಿಗಳು ಆರೋಪಿಸಿದ್ದಾರೆ. ಅಲ್ಲದೆ, ರಣವೀರ್​ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಅಂದಹಾಗೆ ರಣವೀರ್​ ಅವರು ಮ್ಯಾಗಜಿನ್‌ ಒಂದರ ಮುಖಪುಟಕ್ಕಾಗಿ ಸಂಪೂರ್ಣ ನಗ್ನವಾಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ರಣವೀರ್​ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಿಕ ಫೋಟೋಗಳು ಸಿಕ್ಕಾಪಟ್ಟೆ ವೈರಲ್​ ಆಗಿವೆ ಮತ್ತು ಪರ-ವಿರೋಧ ಚರ್ಚೆಯನ್ನು ಹುಟ್ಟು ಹಾಕಿದೆ.
ಪತ್ನಿ ದೀಪಿಕಾ ಪಡುಕೋಣೆ, ಆಲಿಯಾ ಭಟ್​, ನಟ ಅರ್ಜುನ್​ ಕಪೂರ್​, ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ರಣವೀರ್​ ಪರ ಬ್ಯಾಟ್​ ಬೀಸಿದ್ದಾರೆ. ಆದರೆ, ಕೆಲವರು ರಣವೀರ್​ ನಗ್ನ ಫೋಟೋಶೂಟ್​ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.(ಏಜೆನ್ಸೀಸ್​)
VIDEO| ಊಟದಲ್ಲಿ ಹಾವಿನ ತಲೆ ಕಂಡು ಬೆಚ್ಚಿಬಿದ್ದ ವಿಮಾನ ಸಿಬ್ಬಂದಿ: ಭಯಾನಕ ವಿಡಿಯೋ ವೈರಲ್​!

ರಾಜ್ಯಮಟ್ಟದ ಕಬ್ಬಡಿ ಪಂದ್ಯ ಆಟವಾಡುತ್ತಲೇ ಹಾರಿಹೋಯ್ತು ಆಟಗಾರನ ಪ್ರಾಣಪಕ್ಷಿ! ಮನಕಲಕುತ್ತೆ ಸಾವಿನ ಆ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 12 =
Remember me
