ಗೋರಖ್​ಪುರ್​:ಲಖಿಂಪುರ್​ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಇಲ್ಲದೆ ಯಾರನ್ನು ಬಂಧಿಸುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡುತ್ತಿರುವ ಪ್ರತಿಪಕ್ಷಗಳ ಕುರಿತು “ಒಳ್ಳೆಯ ಸಂದೇಶವಾಹಕರಿಲ್ಲ” ಎಂದು ಇದೇ ಸಂದರ್ಭದಲ್ಲಿ ಯೋಗಿ ತಿರುಗೇಟು ನೀಡಿದ್ದಾರೆ.
ಕಳೆದ ಭಾನುವಾರ ನಡೆದ ಹಿಂಸಾಚಾರದಲ್ಲಿ 4 ರೈತರು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಯೋಗಿ, ಕಾನೂನಿನ ಮುಂದೆ ಎಲ್ಲರು ಸಮಾನರು. ಸುಪ್ರೀಂಕೋರ್ಟ್​ ಪ್ರಕಾರ, ಯಾವುದೇ ಸಾಕ್ಷ್ಯವಿಲ್ಲದೆ ಯಾರೊಬ್ಬರನ್ನು ಬಂಧಿಸಲಾಗದು, ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ. ಲಿಖಿತ ದೂರಿನ ಆಧಾರದ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ. ಯಾರನ್ನು ಬಿಡುವ ಮಾತೇ ಇಲ್ಲ ಎಂದು ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಿಎಂ ಯೋಗಿ ಹೇಳಿದರು.
ಯಾರಿಗೂ ಅನ್ಯಾಯವಾಗುವುದಿಲ್ಲ ಮತ್ತು ಯಾವುದೇ ಒತ್ತಡದಲ್ಲಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಿತ್ಯನಾಥ್ ಒತ್ತಿ ಹೇಳಿದರು. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವೇ ಇಲ್ಲ. ಕಾನೂನು ಎಲ್ಲರಿಗೂ ಸುರಕ್ಷತೆಯ ಖಚಿತತೆಯನ್ನು ನೀಡುತ್ತದೆ ಎಂದರು. ಇದೇ ಸಂದರ್ಭದಲ್ಲಿ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದ ಯೋಗಿ, ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ ಆಗಿದೆ. ಲಖಿಂಪುರ್​ ಖೇರಿಗೆ ಹೋಗಲು ಬಯಸಿದ ಅನೇಕ ಮುಖಗಳು ಹಿಂಸಾಚಾರದ ಹಿಂದಿದೆ. ಇದೆಲ್ಲಾ ತನಿಖೆಯ ನಂತರ ಸ್ಪಷ್ಟವಾಗುತ್ತವೆ ಎಂದಿದ್ದಾರೆ.
ಪ್ರಕರಣದಲ್ಲಿ ಎಫ್‌ಐಆರ್‌ನಲ್ಲಿ ಹೆಸರಿಸಲಾದ ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ರಕ್ಷಿಸಲು ಪ್ರಯತ್ನಿಸಲಾಗುತ್ತಿದೆ ಎಂಬ ಆರೋಪದ ಕುರಿತು, ಆರೋಪ ಸಾಬೀತು ಮಾಡುವಂತಹ ವಿಡಿಯೋ ಇಲ್ಲ. ಪುರಾವೆಗಳಿದ್ದರೆ, ಅವರು ಅದನ್ನು ಅಪ್‌ಲೋಡ್ ಮಾಡಬಹುದು. ಯಾರಿಗೂ ಅನ್ಯಾಯವಾಗುವುದಿಲ್ಲ. ಕಾನೂನನ್ನು ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶವಿಲ್ಲ ಆದರೆ ಯಾವುದೇ ಒತ್ತಡದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದರು.
ಆರೋಪದ ಮೇಲೆ ನಾವು ಯಾರನ್ನೂ ಬಂಧಿಸುವುದಿಲ್ಲ. ಆದರೆ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಅವನು ಯಾರೆಂದು ಲೆಕ್ಕಿಸದೆ ಆತನನ್ನು ಬಿಡಲಾಗುವುದಿಲ್ಲ” ಎಂದು ಅವರು ಒತ್ತಿ ಹೇಳಿದರು.
ಭಾನುವಾರ ಮೃತಪಟ್ಟ ಎಂಟು ಜನರಲ್ಲಿ ನಾಲ್ವರು ರೈತರು, ಬಿಜೆಪಿ ಕಾರ್ಯಕರ್ತರನ್ನು ಹೊತ್ತ ಕಾರಿನಿಂದ ಹೊಡೆದುರುಳಿಸಲಾಯಿತು. ಆಗ ಕೋಪಗೊಂಡ ರೈತರು ವಾಹನಗಳಲ್ಲಿ ಕೆಲವರನ್ನು ಹೊಡೆದರು. ಮೃತರಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಅವರ ಚಾಲಕನು ಸೇರಿದ್ದಾರೆ.(ಏಜೆನ್ಸೀಸ್​)
ಐಟಿ ವಶಕ್ಕೆ ಮಹತ್ವದ ದಾಖಲೆ: ಟೆಂಡರ್​ನಲ್ಲಿ ಕೋಟ್ಯಂತರ ರೂ. ಅವ್ಯವಹಾರ, ಕೆಲವೆಡೆ ದಾಳಿ ಅಂತ್ಯ..

ತುಂಡುಗುತ್ತಿಗೆಗೆ ರಹದಾರಿ: 5 ಲಕ್ಷ ರೂ. ಮೀರದ ಕಾಮಗಾರಿ, ಸರ್ಕಾರ ದ್ವಂದ್ವ

ಇಡೀ ರಾಜ್ಯವೇ ಕಂಬನಿ ಮಿಡಿದಿದ್ದ ವಿಸ್ಮಯ ಸಾವು ಪ್ರಕರಣ: ಆರೋಪಿ ಪತಿಗೆ ಹೈಕೋರ್ಟ್​ ಬಿಗ್​ ಶಾಕ್​..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − eight =
Remember me
