ಮುಂಬೈ:ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್​ ಕೋಶಿಯಾರಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಗುಜರಾತಿ ಮತ್ತು ರಾಜಸ್ಥಾನಿಗಳನ್ನು ಮಹಾರಾಷ್ಟ್ರದಿಂದ ಅದರಲ್ಲೂ ಮುಂಬೈ ಮತ್ತು ಥಾಣೆಯಿಂದ ತೆಗೆದು ಹಾಕಿದರೆ, ಮಹಾರಾಷ್ಟ್ರದಲ್ಲಿ ಯಾವುದೇ ಹಣ ಉಳಿಯುವುದಿಲ್ಲ ಎಂದು ನಿನ್ನೆ (ಜುಲೈ 29) ಭಾಷಣದ ವೇಳೆ ಕೋಶಿಯಾರಿ ಹೇಳಿದ್ದಾರೆ.
ಮುಂಬೈ ದೇಶದ ಆರ್ಥಿಕ ರಾಜಧಾನಿಯಾಗಿ ಉಳಿಯಲು ಸಾಧ್ಯವಿಲ್ಲ ಎಂದು ನಿನ್ನೆ ಮುಂಬೈನ ಪಶ್ಚಿಮ ಉಪನಗರ ಅಂಧೇರಿಯ ಚೌಕ್​ನಲ್ಲಿ ನಡೆದ ನಾಮಕರಣ ಸಮಾರಂಭದಲ್ಲಿ ಹೇಳಿದರು.
#WATCH| If Gujaratis and Rajasthanis are removed from Maharashtra, especially Mumbai and Thane, no money would be left here. Mumbai would not be able to remain the financial capital of the country: Maharashtra Governor Bhagat Singh Koshyaripic.twitter.com/l3SlOFMc0v
— ANI (@ANI)July 30, 2022

ರಾಜಸ್ಥಾನದ ಮಾರ್ವಾಡಿ ಸಮುದಾಯವು ದೇಶದ ವಿವಿಧ ಭಾಗಗಳಲ್ಲಿ ವಾಸಿಸುತ್ತಿದ್ದಾರೆ ಮತ್ತು ನೇಪಾಳ ಮತ್ತು ಮಾರಿಷಸ್‌ನಂತಹ ದೇಶಗಳಲ್ಲಿ ವಾಸಿಸುತ್ತಿದ್ದಾರೆ. ಈ ಸಮುದಾಯದವರು ಎಲ್ಲಿಗೆ ಹೋದರೂ ವ್ಯಾಪಾರ ಮಾಡುವುದಲ್ಲದೆ ಶಾಲೆ, ಆಸ್ಪತ್ರೆಗಳನ್ನು ನಿರ್ಮಿಸುವ ಮೂಲಕ ಪರೋಪಕಾರಿ ಕಾರ್ಯಗಳನ್ನು ಮಾಡುತ್ತಾ ಬರುತ್ತಿದ್ದಾರೆ ಎಂದರು.
ಕೋಶಿಯಾರಿ ಹೇಳಿಕೆಯನ್ನು ಶಿವಸೇನೆ ಮತ್ತು ಕಾಂಗ್ರೆಸ್‌ನ ಹಲವಾರು ನಾಯಕರು ಟೀಕಿಸಿದ್ದಾರೆ ಮತ್ತು ಅವರಿಂದ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಶಿವಸೇನಾ ಸಂಸದ ಸಂಜಯ್​ ರಾವತ್​ ಸಹ ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದು, ಶ್ರಮದಾಯಿ ಮರಾಠಿ ಜನರನ್ನು ರಾಜ್ಯಪಾಲರು ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ, ಬಿಜೆಪಿ ಪ್ರಾಯೋಜಿತ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದ ಕೂಡಲೇ, ಮರಾಠಿಗನಿಗೆ ಅವಮಾನವಾಗುತ್ತಿದೆ ಎಂದು ರಾವುತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಾರಾಷ್ಟ್ರ ರಾಜಭವನ, ಮುಂಬೈಯನ್ನು ದೇಶದ ಆರ್ಥಿಕ ರಾಜಧಾನಿಯನ್ನಾಗಿ ಮಾಡುವಲ್ಲಿ ರಾಜಸ್ಥಾನದ ಮಾರ್ವಾಡಿ ಮತ್ತು ಗುಜರಾತಿ ಸಮುದಾಯಗಳ ಕೊಡುಗೆಯನ್ನು ಕೊಶ್ಯಾರಿ ಶ್ಲಾಘಿಸಿದ್ದಾರೆ ಎಂದಿದೆ.(ಏಜೆನ್ಸೀಸ್​)
ಮಾಜಿ ಸಚಿವ ಪಾರ್ಥ ಚಟರ್ಜಿ-ನಟಿ ಅರ್ಪಿತಾ ನಡುವೆ ಲೈಂಗಿಕ ಸಂಬಂಧ? ಸುಳಿವು ಕೊಟ್ಟ ಲೈಂಗಿಕ ಆಟಿಕೆಗಳು

ರಾತ್ರಿ ನಾಯಿಗಳು ಬೊಗಳುವ ಸದ್ದು ಕೇಳಿ ಮನೆಯಿಂದ ಹೊರಬಂದ ವಿಜಯಪುರ ನಿವಾಸಿಗಳಿಗೆ ಕಾದಿತ್ತು ಶಾಕ್!​

ಚಿಕ್ಕ ವಯಸ್ಸಿನಲ್ಲೇ ಪ್ರೀತಿಸಿ 18 ವರ್ಷ ತುಂಬಿದ ಬಳಿಕ ಮದ್ವೆಯಾದ ಯುವತಿಯ ಬದುಕು ದುರಂತ ಅಂತ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + nine =
Remember me
